ತೋಟಗಾರಿಕೆ ಇಲಾಖೆಯಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ

Written by Ramlinganna

Updated on:

Under Horticulture Applications invited for subsidy 2022-23ನೇ ಸಾಲಿನ ತೋಟಗಾರಿಕೆ ಇಲಾಖೆಯಲ್ಲಿ ಅನುಷ್ಠಾನ್ಠಾನಗೊಳಿಸುತ್ತಿರುವ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ಹಾಗೂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರೈತರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹೌದು ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಕೃಷಿ ಯಂತ್ರೋಪಕರಣಗಳನ್ನು ಸಹಾಯಧನದಲ್ಲಿ ರೈತರಿಗೆ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

Under Horticulture Applications invited for subsidy ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಿಗುವ ಸೌಲಭ್ಯಗಳು

ಹಸಿರು ಮತ್ತು ನೇರಳು ಪರದೆ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು. ಇದರೊಂದಿಗೆ ನರ್ಸರಿ ಸ್ಥಾಪನೆ ಘಟಕ ನಿರ್ಮಾಣ, ತೋಟಗಾರಿಕೆ ಬೆಳೆಗಳ ಪುನಶ್ಚೇತನ ನಿರ್ಮಾಣಕ್ಕೆ ಪ್ರೋತ್ಸಾಹಧನ ನೀಡಲಾಗುವುದು.  ನೀರು ಸಂಗ್ರಹಣ ಘಟಕ ನಿರ್ಮಾಣಕ್ಕೂ ಸಹಾಯಧನ ನೀಡಲಾಗುವುದು. ಸಮಗ್ರ ಕೀಟರೋಗ ನಿಯಂತ್ರಣ ಹಾಗೂ ಸಮಗ್ರ ಪೋಷಕಾಂಶ ನಿರ್ವಹಣೆ. ಶೀತಲ ಗೃಹ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು. ಪ್ಯಾಕ್ ಹೌಸ್, ಸಮಗ್ರ ಪ್ಯಾಕ್ ಹೌಸ್, ಅಣಬೆ ಬೇಸಾಯ, ಸಾವಯವ ಕೃಷಿ, ಪ್ಲಾಸ್ಟಿಕ್ ಹೊದಿಕೆ,  ಸಂಸ್ಕರಣೆ ಘಟಕ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಉಪ ಯೋಜನೆಯಡಿಯಲ್ಲಿ ಪವರ್ ಟಿಲ್ಲರ್ 8 ಹೆಚ್.ಪಿ ಗಿಂತ ಕಡಿಮೆ ಸಾಮರ್ಥ್ಯವರೆಗಿರುವ ಉಪಕರಣ ಖರೀದಿಗೆ ಶೇ. 25 ರಂತೆ ಗರಿಷ್ಠ 30 ಸಾವಿರ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು.

ಸ್ವಯಂ ಚಾಲಿತ ತೋಟಗಾರಿಕೆ ಯಂತ್ರೋಪಕರಣ ಖರೀದಿಸಲು ಶೇ. 25 ರಂತು ಗರಿಷ್ಠ 50 ಸಾವಿರ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು. ಇದರೊಂದಿಗೆ  ಮಿನಿ ಟ್ರ್ಯಾಕ್ಟರ್ ಖರೀದಿಗೂ ಸಹಾಯಧನ ನೀಡಲಾಗುವುದು.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಿಗುವ ಸೌಲಭ್ಯಗಳು

ಈರುಳ್ಳಿ ಶೇಖರಣಾ ಘಟಕಗಳ ನಿರ್ಮಾಣಕ್ಕೆ, ಹಣ್ಮು ಮತ್ತು ತರಕಾರಿ ಸಂಸ್ಕರಣೆಗೆ ಸಹಾಯಧನ ನೀಡಲಾಗುವುದು. ಸುಗಂಧ ದ್ರವ್ಯ, ಔಷಧ ಸಸ್ಯಗಳ ಸಾರ ತೆಗೆಯುವಿಕೆ ಘಟಕಗಳ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು.

ಸೌಲಭ್ಯ ಪಡೆಯಲು ಬೇಕಾದ ದಾಖಲೆಗಳು

ಅರ್ಜಿದಾರರು ಹೆಸರು, ವಯಸ್ಸು, ಒಟ್ಟು ಭೂ ಹಿಡುವಳಿ, ನೀರಾವರಿ/ಖುಷ್ಕಿ ಜಮೀನು ನಮೂದಿಸಬೇಕು. ಆಧಾರ್ ಸಂಖ್ಯೆ ಹೊಂದಿರಬೇಕು. ಬ್ಯಾಂಕ್ ಪಾಸ್ಬುಕ್ ಇರಬೇಕು.  ಫಲಾನುಭವಿಯ ಭಾವಚಿತ್ರ ಇರಬೇಕು. ಫಲಾನುಭವಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಅಂಗವಿಕಲರಾಗಿದ್ದಲ್ಲಿ ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು  ಕೊನೆಯ ದಿನಾಂಕ ಸೆಪ್ಟೆಂಬರ್ 30

ಚಿಕ್ಕಬಳ್ಳಾಪುರ ತಾಲೂಕಿನ ರೈತರು ಸೆಪ್ಟೆಂಬರ್ 30 ರೊಳಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಗುಡಿಬಂಡೆ ತೋಟಗಾರಿಕೆ ಕಚೇರಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ತಾಲೂಕು ಮತ್ತು ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಯನ್ನು ಸಂಪರ್ಕಿಸಬಹುದೆಂದು ಗುಡಿಬಂಡೆ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಂಗಾರಪೇಟೆ ತಾಲೂಕಿನಲ್ಲಿ ರೈತರಿಂದಲೂ ಅರ್ಜಿ ಆಹ್ವಾನ

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ರೈತರಿಗೆ 2022-23ನೇ ಸಾಲಿನಲ್ಲಿ ಅರ್ಹ ರೈತರಿಗೆ ಸಹಾಯಧನ ನೀಡಲು ತೋಟಗಾರಿಕೆ ಇಲಾಖೆಯು ಅರ್ಜಿ ಆಹ್ವಾನಿಸಿದೆ.ಬೆಳೆ ಹಣ್ಣುಗಳ ಹೊದಿಗೆ, ಸುರಂಗ ಮಾದರಿಯ ಪಾಲಿ ಹೌಸ್ ನಿರ್ಮಾಣ, ಕೊಯ್ಲೋತ್ತರ ನಂತರದ ಚಟುವಟಿಕೆಗಳಿಗೆ ಬಳಸುವ ಪ್ಲಾಸ್ಟಿಕ್ ಕ್ರೇಟ್ ಖರೀದಿಗೆ ಸಹಾಯಧನ ನೀಡಲಾಗುವುದು. ಇದರೊಂದಿಗೆ ಸುರಕ್ಷಿತ ಬೇಸಾಯದಡಿ ಪಾಲಿಥಿನ್ ಹೊದಿಕೆಗಳ ಬದಲಾವಣೆಗೆ, ಹಳೆಯ ಹಾಗೂ ಅನುತ್ಪಾದಕ ಹೂವಿನ ಗಿಡಗಳನ್ನು ಮತ್ತು ತರಕಾರಿ ಗಿಡಗಳನ್ನು ತೆಗೆದು ಹೊಸ ಗಿಡಗಳನ್ನು ನಾಟಿ ಮಾಡಲು ಸಹ ಸಹಾಯಧನ ನೀಡಲಾಗುವುದು.

ಇದನ್ನೂ ಓದಿ : ಮೊಬೈಲ್ ನಲ್ಲೇ ವೋಟರ್ ಐಡಿ ಕಾರ್ಡಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ವಿಧಾನ ಇಲ್ಲಿದೆ

ಆಸಕ್ತ ರೈತರು ಆಧಾರ್ ಕಾರ್ಡ್ ನಕಲು, ಪಹಣಿ, ಚಕ್ ಬಂದಿ, ಬೆಳೆ ದೃಢೀಕರಣ ಪತ್ರ, ಬ್ಯಾಂಕ್ ಪಾಸ್ ಬುಕ್ ನಕಲು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದ ರೈತರು ಜಾತಿ ಪ್ರಮಾಣ ಪತ್ರವನ್ನು ಅರ್ಜಿಯನ್ನು ಲಗತ್ತಿಸಬೇಕು. ಸೆಪ್ಟೆಂಬರ್ 12 ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕೆಂದು ಕೋರಲಾಗಿದೆ.

Leave a Comment