ನನಗೆ 30 ಸಾವಿರ ಪಿಎಂ ಕಿಸಾನ್ ಹಣ ಜಮೆ- ನಿಮಗೆಷ್ಟು ಜಮೆ?

Written by Ramlinganna

Updated on:

Under pm kisam scheme ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿದ ರೈತರಿಗೆ ಇಲ್ಲಿಯವರೆಗೆ 15 ಕಂತುಗಳಿಂದ 30 ಸಾವಿರ ರೂಪಾಯಿ ಜಮೆಯಾಗಿದೆ. ನಿಮಗೆಷ್ಟು ಜಮೆಯಾಗಿದೆ? ಇಲ್ಲೇ ಚೆಕ್ ಮಾಡಬಹುದು.

ರೈತರು ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ನಲ್ಲಿ ಎಷ್ಟು ಕಂತುಗಳು ಜಮೆಯಾಗಿದೆ? ಒಂದು ವೇಳೆ ತಮಗೆ ಯೋಜನೆಯ ಹಣ ಜಮೆಯಾಗದೆ ಇದ್ದರೆ ಯಾವ ಕಾರಣಕ್ಕಾಗಿ ಜಮೆಯಾಗಿಲ್ಲ? ಯಾವ ಕಾರಣಕ್ಕಾಗಿ ಪಿಎಂ ಕಿಸಾನ್ ಯೋಜನೆಯನ್ನು ತಡೆಹಿಡಿಯಲಾಗಿದೆ ಎಂಬುದನ್ನು ಪರಿಶೀಲಿಸಿ ದಾಖಲೆ ಸರಿಪಡಿಸಿ ಯೋಜನೆಯಿಂದ ಲಾಭ ಪಡೆಯಬಹುದು.

ಹೌದು, ತಮಗೆಲ್ಲಾ ಗೊತ್ತಿದ್ದ ಹಾಗೆ 2018-19 ರ ಸಾಲಿನ ಡಿಸೆಂಬರ್ ತಿಂಗಳಲ್ಲಿ ಪಿಎಂ ಕಿಸಾನ್ ಯೋಜನೆಯನ್ನು ಜಾರಿಗೆ ತರಲಾಯಿತು. ರೈತರ ಆರ್ಥಿಕ ಸಹಾಯ ನೀಡುವುದಕ್ಕಾಗಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿದೆ.ಈ ಯೋಜನೆ ಜಾರಿಯಾದಾಗಿನಿಂದ ಇಲ್ಲಿಯವರೆಗೆ 15 ಕಂತುಗಳ ಹಣ ರೈತರ ಖಾತೆಗೆ ಜಮೆಯಾಗಿದೆ.

ಇದನ್ನೂ ಓದಿ ಬರ ಪರಿಹಾರ ಯಾವ ಬೆಳೆಗೆ ಯಾರಿಗೆ ಎಷ್ಟು ಜಮೆ? ಇಲ್ಲಿದೆ ಮಾಹಿತಿ

ಯಾವ ರೈತರು ಪಿಎಂ ಕಿಸಾನ್ ಯೋಜನೆಗೆ  2018-19 ರ ಸಾಲಿನಲ್ಲಿ ನೋಂದಣಿ ಮಾಡಿಸಿದ್ದಾರೋ ಅವರಿಗೆ ಇಲ್ಲಿಯವರೆಗೆ 15 ಕಂತುಗಳು ಜಮೆಯಾಗಿದೆ. ನಂತರ ಅಂದರೆ ರೈತರು ಯಾವ ವರ್ಷದಲ್ಲಿ ಯಾವ ತಿಂಗಳಲ್ಲಿ ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ್ದಾರೋ ಅಲ್ಲಿಂದ ಇಲ್ಲಿಯವರೆಗೆ ಎಷ್ಟು ಕಂತುಗಳ ಹಣ ಜಮೆಯಾಗಿದೆ ಎಂಬುದನ್ನು ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು. ಇದಕ್ಕಾಗಿ ರೈತರು ಎಲ್ಲಿಯೂ ಹೋಗಬೇಕಿಲ್ಲ.ತಾವೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

Under pm kisam scheme ನಿಮಗೆಷ್ಟು ಕಂತುಗಳು ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗಿದೆ? ಚೆಕ್ ಮಾಡಿ?

ರೈತರಿಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/BeneficiaryStatus_New.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಸ್ಟೇಟಸ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ನೋಂದಣಿ ಸಂಖ್ಯೆ (Registration No.)  ಹಾಕಿ ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಿ Get OTP ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ನಂತರ ಓಟಿಪಿ ನಮೂದಿಸಿ ಸ್ಟೇಟಸ್ ಚೆಕ್ ಮಾಡಬಹುದು. ಒಂದು ವೇಳೆ ನಿಮಗೆ ಪಿಎಂ ಕಿಸಾನ್ ನೋಂದಣಿ ಸಂಖ್ಯೆ ನೆನಪಿಲ್ಲದಿದ್ದರೆ Know Your Registration No. ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮ ಮೊಬೈಲ್ ನಂಬರ್ ಹಾಕಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಿ ಗೆಟ್ ಮೊಬೈಲ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿ ನಿಮ್ಮ ನೋಂದಣಿ ಸಂಖ್ಯೆ ತಿಳಿದುಕೊಳ್ಳಬಹುದು. ನಂತರ ನೋಂದಣಿ ಸಂಖ್ಯೆಯ ಸಹಾಯದಿಂದ ಸ್ಟೇಟಸ್ ಚೆಕ್ ಮಾಡಬಹುದು.

ಇಕೆವೈಸಿ ಮಾಡಿಸಿದ್ದರೆ ಮಾತ್ರ ಪಿಎಂ ಕಿಸಾನ್ ಹಣ ಜಮೆ?

ಪಿಎಂ ಕಿಸಾನ್ ಯೋಜನೆಯ ಹಣ ರೈತರ ಖಾತೆಗೆ ಜಮೆಯಾಗಬೇಕಾದರೆ ಇಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ರೈತರು ಇಕೆವೈಸಿ ಮಾಡಿಸಿದರೆ ಮಾತ್ರ ಮುಂದಿನ ಕಂತಿನ ಹಣ ರೈತರ ಖಾತೆಗೆ ಜಮೆಯಾಗುತ್ತದೆ.

ಯಾವ ತಿಂಗಳಲ್ಲಿ ಪಿಎಂ ಕಿಸಾನ್ ಹಣ ಜಮೆ?

ಪಿಎಂ ಕಿಸಾನ್ ಹಣ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ರೈತರ ಖಾತೆಗೆ ಜಮೆಯಾಗುತ್ತದೆ. ಏಕೆಂದರೆ ನಾಲ್ಕು ತಿಂಗಳಿಗೊಮ್ಮೆರೈತರ ಖಾತೆಗೆ ಹಣ ಜಮೆಯಾಗುತ್ತದೆ. 15ನೇ ಕಂತಿನ ಹಣ ನವೆಂಬರ್ ತಿಂಗಳಲ್ಲಿ ಜಮೆಯಾಗಿತ್ತು.ಈ ಆಧಾರದ ಮೇಲೆ ಮುಂದಿನ 16ನೇ ಕಂತಿನ ಹಣ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ಜಮೆಯಾಗುತ್ತದೆ.

Leave a Comment