ಪಿಎಂ ಕಿಸಾನ್ ರೈತರಿಗೆ 975 ಕೋಟಿ ರೂಪಾಯಿ ಜಮೆ

Written by Ramlinganna

Updated on:

pmkisan 975 crore deposited  ಪಿಎಂ ಕಿಸಾನ್ ಯೋಜನೆಯಡಿ ರಾಜ್ಯ ಸರ್ಕಾರವು ಘೋಷಿಸಿದ ಹೆಚ್ಚುವರಿ 4 ಸಾವಿರ ರೂಪಾಯಿ ಹಣದಲ್ಲಿ ಮಂಗಳವಾರ 2022-23ನೇ ಸಾಲಿನ ಎರಡನೇ ಕಂತು ರೈತರ ಖಾತೆಗೆ ಜಮೆಯಾಯಿತು.

ಹೌದು,  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪಿಎಂ ಕಿಸಾನ್ ಕರ್ನಾಟಕದ ಯೋಜನೆಯಡಿ ನೋಂದಣಿ ಮಾಡಿಸಿಕೊಂಡ ರೈತರ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಬಿಡುಗಡೆ ಮಾಡಿದರು..

ಪಿಎಂ ಕಿಸಾನ್ ಯೋಜನೆ ಅಂದ ತಕ್ಷಣ ರೈತರಿಗೆ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆ ಎಂದೇ ಭಾವಿಸುತ್ತಾರೆ. ಆದರೆ ರಾಜ್ಯ ಸರ್ಕಾರವು ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಹೆಚ್ಚುವರಿಯಾಗಿ ಪ್ರತಿ ವರ್ಷ 4 ಸಾವಿರ ರೂಪಾಯಿ ಹೆಚ್ಚುವರಿಯಾಗಿ ನೀಡುವ ಯೋಜನೆಯನ್ನು ಘೋಷಣೆ ಮಾಡಲಾಗಿದೆ. ಬಿ.ಎಸ್. ಯಡಿಯೂರಪ್ಪನವವರು ಮುಖ್ಯಮಂತ್ರಿಯಾಗಿದ್ದಾಗ ಪಿಎಂ ಕಿಸಾನ್ ಯೋಜನೆಯಡಿ ಹೆಚ್ಚುವರಿ ಹಣ ಜಮೆ ಮಾಡುವುದರ ಬಗ್ಗೆ ಘೋಷಣೆ ಮಾಡಿದ್ದಾರೆ.

pmkisan 975 crore deposited  ಯಾವ ರೈತರಿಗೆ ಪಿಎಂ ಕಿಸಾನ್ ಯೋಜನೆಯ ಹೆಚ್ಚುವರಿ ಹಣ ಜಮೆಯಾಗುವುದು?

ಫ್ರೂಟ್ಸ್ ತಂತ್ರಾಂಶದಲ್ಲಿ ಯಾವ ರೈತರು ತಮ್ಮ ಹೆಸರು ನೋಂದಣಿ ಮಾಡಿಸಿದ್ದಾರೋ ಆ ರೈತರಿಗೆ ಈ ಹೆಚ್ಚುವರಿ ಹಣ ಜಮೆಯಾಗಲಿದೆ.  ಹೌದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳಡಿಯಲ್ಲಿ ರೈತರು ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಈ ತಂತ್ರಾಂಶದಲ್ಲಿ ರೈತರು ಒಮ್ಮೆ ನೋಂದಣಿ ಮಾಡಿಸಿದರೆ ಸಾಕು, ಪ್ರತಿಯೊಂದು ಸಲ ದಾಖಲೆ ನೀಡುವ ಅಗತ್ಯವಿಲ್ಲ. ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಮೀನುಗಾರಿಕೆ ಇಲಾಖೆಯಿಂದ ಸರ್ಕಾರಿ ಸೌಲಭ್ಯ ಪಡೆಯಲು ಪ್ರೂಟ್ಸ್ ತಂತ್ರಾಂಶದಲ್ಲಿ ರೈತರು ನೋಂದಣಿ ಮಾಡಿಸಬೇಕು. ಯಾವ ರೈತರು ನೋಂದಣಿ ಮಾಡಿಸಿದ್ದಾರೋ ಆ ರೈತರಿಗೆ ಫ್ರೂಟ್ಸ್ ಐಡಿ ನೀಡಲಾಗುವುದು.

ಪಿಎಂ ಕಿಸಾನ್ ಯೋಜನೆಯಡಿ ರಾಜ್ಯ ಸರ್ಕಾರದ ಹೆಚ್ಚುವರಿ ಹಣ ಜಮೆಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ರೈತರು ಪಿಎಂ ಕಿಸಾನ್ ಯೋಜನೆಯಡಿ ರಾಜ್ಯ ಸರ್ಕಾರವು ಘೋಷಣೆ ಮಾಡಿದ ಹೆಚ್ಚುವರಿ ಹಣ ನಿಮ್ಮ ಖಾತೆಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬದನ್ನು ಚೆಕ್ ಮಾಡಲು ಈ

https://fruitspmk.karnataka.gov.in/MISReport/CheckStatus.aspx

ಇಲ್ಲಿ ಕ್ಲಿಕ್ ಮಾಡಬೇಕು. ಆಗ ಫ್ರೂಟ್ಸ್ ಪಿಎಂ ಕಿಸಾನ್ ಸ್ಟೇಟಸ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ಪಿಎಂಕೆಐಡಿ ನಮೂದಿಸಿ ಹುಡುಕಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಖಾತೆಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬ ಪಟ್ಟಿ ಕಾಣಿಸುತ್ತದೆ.

ಪಿಎಂಕೆಐಡಿ ಗೊತ್ತಿಲ್ಲದಿದ್ದರೇನು ಮಾಡಬೇಕು? ಪಿಎಂಕೆಐಡಿ ಎಲ್ಲಿ ಸಿಗುತ್ತದೆ?

ಪಿಎಂಕೆಐಡಿ ಗೊತ್ತಿಲ್ಲದ ರೈತರು ಈ

https://fruitspmk.karnataka.gov.in/MISReport/GetDetailsByAadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮ್ಮ ಆಧಾರ್ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಫ್ರೂಟ್ಸ್ ಐಡಿ ಪಿಎಂಕಐಡಿ ಕಾಣಿಸುತ್ತದೆ. ಅದರ ಕೆಳಗಡೆ ನಿಮ್ಮ ಹೆಸರು ಕಾಣಿಸುತ್ತದೆ. ಪಿಎಂಕೆಐಡಿ ಕಾಪಿ ಮಾಡಿಕೊಳ್ಳಬೇಕು. ನಂತರು

https://fruitspmk.karnataka.gov.in/MISReport/CheckStatus.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಇಲ್ಲಿ ನೀವು ಕಾಪಿ ಮಾಡಿಕೊಂಡ ಪಿಎಂಕೆಐಡಿ ಪೇಸ್ಟ್ ಮಾಡಿ ಹುಡುಕಿ ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮ್ಮ ಖಾತೆಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ? ಯಾವ ದಿನಾಂಕದಂದು ಜಮೆಯಾಗಿದೆ? ಸೇರಿದಂತೆ  ನಿಮ್ಮ ಹೆಸರು, ಅರ್ಜಿಯ ಸ್ಥಿತಿ ಸೇರಿದಂತೆ ಇನ್ನಿತರ ಮಾಹಿತಿಗಳು ಸಿಗುತ್ತವೆ. ಈ ಆಧಾರದ ಮೇಲೆ ರೈತರು ಪಿಎಂ ಕಿಸಾನ್ ಯೋಜನೆಯಡಿ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ಘೋಷಣೆ ಮಾಡಿದ ಪಿಎಂ ಕಿಸಾನ್ ಹಣದ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

ಇದನ್ನೂ ಓದಿ ಪಶು ಪಾಲನೆಗೆ 60 ಸಾವಿರ ರೂಪಾಯಿಯವರೆಗೆ ಸಬ್ಸಿಡಿ

Leave a Comment