ಪಿಎಂ ಕಿಸಾನ್ ಯೋಜನೆಯಡಿ ರಾಜ್ಯದ ರೈತರಿಗೆ 10 ಸಾವಿರ ಜಮೆ

Written by By: janajagran

Updated on:

these farmers get 10 thousand  ಪಿಎಂ ಕಿಸಾನ್ ಯೋಜನೆಯಡಿ ದೇಶದ ಇತರ ರಾಜ್ಯದ ರೈತರಿಗೆ ಪ್ರತಿ ವರ್ಷ 6 ಸಾವಿರ ರೂಪಾಯಿ ಜಮೆಯಾದರೆ ರಾಜ್ಯದ ರೈತರಿಗೆ 10 ಸಾವಿರ ಜಮೆಯಾಗುತ್ತದೆ. ಅದು ಹೇಗೆ ಅಂದುಕೊಂಡಿದ್ದೀರಾ… ಇಲ್ಲಿದೆ ಸಂಪೂರ್ಣ ಮಾಹಿತಿ

ಪಿಎಂ ಕಿಸಾನ್ ಯೋಜನೆಯ ಎಂದತಕ್ಷಣ ರೈತರಿಗೆ ನೆನಪಾಗುವುದು ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆ. ಈ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ದೇಶದ ಎಲ್ಲಾ ರೈತರಿಗೆ ಪ್ರತಿ ವರ್ಷ 6 ಸಾವಿರ ರೂಪಾಯಿ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ.  ಆದರೆ ರಾಜ್ಯ ಸರ್ಕಾರದ ವತಿಯಿಂದ ರಾಜ್ಯದ ರೈತರಿಗೆ ಪಿಎಂ ಕಿಸಾನ್ ಯೋಜನೆಯಡಿ ಪ್ರತ್ಯೇಕವಾಗಿ ಪ್ರತಿ ವರ್ಷ 4 ಸಾವಿರ ರೂಪಾಯಿ ಜಮೆ ಮಾಡಲಾಗುತ್ತದೆ.

ಹೌದು, ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ ಹೆಚ್ಚುವರಿಯಾಗಿ ಪ್ರತಿ ವರ್ಷ 4 ಸಾವಿರ ರೂಪಾಯಿ ರೈತರ ಖಾತೆಗೆ ಜಮೆ ಮಾಡುತ್ತದೆ. ಆದರೆ ಈ ಯೋಜನೆ ಇತರ ರಾಜ್ಯಗಳಿಗಿಲ್ಲ. ಕೇವಲ ಕರ್ನಾಟಕ ರಾಜ್ಯ ಸರ್ಕಾರವು ರೈತರಿಗೆ 4 ಸಾವಿರ ರೂಪಾಯಿಯನ್ನು ಎರಡು ಕಂತಿನಲ್ಲಿ ಪ್ರತಿ ವರ್ಷ ರೈತರ ಖಾತೆಗೆ ಜಮೆ ಮಾಡುತ್ತಿದೆ.

ಕೇಂದ್ರ ಸರ್ಕಾರದ ವತಿಯಿಂದ ರೈತರಿಗೆ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಪ್ರತಿ ವರ್ಷ 6 ಸಾವಿರ ರೂಪಾಯಿಯನ್ನುಮೂರು ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡುತ್ತದೆ. ಅದೇ ರೀತಿ ರಾಜ್ಯ ಸರ್ಕಾರದ ವತಿಯಿಂದ ಪ್ರತಿ ವರ್ಷ 4 ಸಾವಿರ ರೂಪಾಯಿಯನ್ನುಎರಡು ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡುತ್ತದೆ. ಹೀಗೆ ರಾಜ್ಯದ ರೈತರಿಗೆ ಒಟ್ಟು 10 ಸಾವಿರ ರೂಪಾಯಿ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಸಿಗುತ್ತದೆ.

ಇದನ್ನೂ ಓದಿ ನಿಮ್ಮ ಜಮೀನಿನ ಮ್ಯಾಪ್ mobileನಲ್ಲಿ ಡೌನ್ಲೋಡ್ ಮಾಡಿ

ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯಂತೆ ರಾಜ್ಯ ಸರ್ಕಾರದ ಪಿಎಂ ಕಿಸಾನ್ ಯೋಜನೆಗೂ ರೈತರು ತಮ್ಮ ಹೆಸರು ನೋಂದಣಿ ಮಾಡಿಸಬೇಕಾಗುತ್ತದೆ. ಇದಕ್ಕೆ ಫ್ರೂಟ್ಸ್ ತಂತ್ರಾಂಶದಲ್ಲಿ ರೈತರು ನೋಂದಣಿ ಮಾಡಿಸಬೇಕು. ಫ್ರೂಟ್ಸ್ ತಂತ್ರಾಂಶದಲ್ಲಿ ರೈತರು ನೋಂದಣಿ ಮಾಡಿಸಿದರೆ ಮಾತ್ರ ರಾಜ್ಯ ಸರ್ಕಾರದ ವತಿಯಿಂದ ಪಿಎಂ ಕಿಸಾನ್ ಯೋಜನೆಯ ಹೆಚ್ಚುವರಿ  ಸೌಲಭ್ಯ ಸಿಗುತ್ತದೆ.  ಫ್ರೂಟ್ಸ್ ತಂತ್ರಾಂಶದಲ್ಲಿ ರೈತರೇ ಮೊಬೈಲ್ ನಲ್ಲಿ ನೋಂದಣಿ ಮಾಡಿಸಬಹುದು. ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.

these farmers get 10 thousand  ರಾಜ್ಯ ಸರ್ಕಾರದ ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿ ಚೆಕ್ ಮಾಡಿ

ರಾಜ್ಯ ಸರ್ಕಾರದ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ನೋಂದಣಿಯಾಗಿರುವ ಫಲಾನುಭವಿಗಳ ಪಟ್ಟಿಯಲ್ಲಿ ರೈತರ ಹೆಸರು ಚೆಕ್ ಮಾಡಲು ಈ

 https://fruitspmk.karnataka.gov.in/MISReport/FarmerDeclarationReport.aspx

ಲಿಂಕ್ ಮೇಲೆ ಕ್ಲಿಕ್ಮಾಡಬೇಕು. ಆಗ ರಾಜ್ಯ ಸರ್ಕಾರದ ಫ್ರೂಟ್ಸ್ ಪಿಎಂ ಕಿಸಾನ್ ಯೋಜನೆಯ ಪೇಜ್ ಓಪನ್ ಆಗುತ್ತದೆ. ಅಲ್ಲಿ ಜಿಲ್ಲೆ, ತಾಲೂಕು, ಹೋಬಳಿ ಮತ್ತು ಗ್ರಾಮ ಆಯ್ಕೆ ಮಾಡಿಕೊಂಡು ವೀಕ್ಷಿಸು ಮೇಲೆ ಕ್ಲಿಕ್ ಮಾಡಬೇಕು. ಆಗ ರಾಜ್ ಸರ್ಕಾರದ ಪಿಎಂ ಕಿಸಾನ್ ಯೋಜನೆಗೆ ನೋಂದಣಿಯಾದ ರೈತರ ಪಟ್ಟಿ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಹೆಸರು ಚೆಕ್ ಮಾಡಬಹುದು.

ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಸ್ಟೇಟಸ್ ಸಹ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಇದಕ್ಕೆ ಯಾರ ಸಹಾಯವೂ ಬೇಕಾಗಿಲ್ಲ. ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿ ಚೆಕ್ ಮಾಡಬಹುದು ಅದಕ್ಗಾಗಿ  ರೈತರು  ಈ

https://pmkisan.gov.in/BeneficiaryStatus.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಬೇಕು. ನಂತರ ಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಖಾತೆಗೆ ಪಿಎಂ ಕಿಸಾನ್ ಯೋಜನೆಯ ಎಷ್ಟು ಕಂತಿನ ಹಣ ಜಮೆಯಾಗಿದೆ. ಮುಂದಿನ ಕಂತಿನ ಸ್ಟೇಟಸ್ ಕಾಣುತ್ತದೆ. ಒಂದುವೇಳೆ ನೀವು ಇಲ್ಲಿಯವರೆಗೆ 10 ಕಂತಿನ ಹಣ ಪಡೆದಿದ್ದರೆ ಹನ್ನೊಂದನೆ ಕಂತಿನ ಹಣದ ಸ್ಟೇಟಸ್ ಚೆಕ್ ಮಾಡಬಹುದು.

Leave a Comment