ಪಿಎಂ ಕಿಸಾನ್ ಈ ರೈತರಿಗೆ 10 ಸಾವಿರ ಜಮೆ

Written by Ramlinganna

Updated on:

Under pm kisan scheme Karnataka  ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಕರ್ನಾಟಕ  ಹೊರತುಪಡಿಸಿ ಉಳಿದ ರಾಜ್ಯದ ರೈತರಿಗೆ ಪ್ರತಿ ವರ್ಷ 6 ಸಾವಿರ ರೂಪಾಯಿ ಜಮೆಯಾದರೆ ಕರ್ನಾಟಕದ ರೈತರಿಗೆ 10 ಸಾವಿರ ಜಮೆಯಾಗುತ್ತದೆ.

ಹೌದು, ಪಿಎಂ ಕಿಸಾನ್ ಯೋಜನೆಯನ್ನು ಕೇಂದ್ರ ಸರ್ಕಾರವು ದೇಶದ ರೈತರಿಗಾಗಿ ಜಾರಿಗೆ ತಂದಿದೆ. ಈ ಯೋಜನೆಯಡಿಯಲ್ಲಿ ಪ್ರತಿ ವರ್ಷ ದೇಶದ ಎಲ್ಲಾ ರೈತರಿಗೆ ಸಮಾನ ಮೂರು ಕಂತುಗಳಲ್ಲಿ2 ಸಾವಿರ ರೂಪಾಯಿಯಂತೆ ಒಟ್ಟು 6 ಸಾವಿರ ರೂಪಾಯಿ ಜಮೆಯಾಗುತ್ತದೆ. ಆದರೆ ಕರ್ನಾಟಕದ ರೈತರಿಗೆ ಮಾತ್ರ 10 ಸಾವಿರ ರೂಪಾಯಿ ಜಮೆಯಾಗುತ್ತದೆ. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಪಿಎಂ ಕಿಸಾನ್ ಯೋಜನೆಯನ್ನು ಯಾವಾಗ ಜಾರಿಗೆ ತರಲಾಯಿತು?

ಪಿಎಂ ಕಿಸಾನ್ ಯೋಜನೆಯನ್ನು 2018 ರಲ್ಲಿ ಜಾರಿಗೆ ತರಲಾಗಿದೆ. ಈ ಯೋಜನೆಯಡಿಯಲ್ಲಿ ರಾಜ್ಯದ ರೈತರಿಗೆ ಆರ್ಥಿಕ ನೆರವಾಗಲು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2 ಸಾವಿರ ರೂಪಾಯಿಯಂತೆ ಒಟ್ಟು 6 ಸಾವಿರ ರೂಪಾಯಿ ಜಮೆ ಮಾಡಲಾಗುತ್ತಿದೆ. ಇಲ್ಲಿಯವರೆಗೆ ಈ ಯೋಜನೆಯಡಿಯಲ್ಲಿ 13 ಕಂತುಗಳು ರೈತರ ಖಾತೆಗೆ ಜಮೆಯಾಗಿದೆ.

Under pm kisan scheme Karnataka  ರಾಜ್ಯ ಸರ್ಕಾರದ ಪಿಎಂ ಕಿಸಾನ್ ಯೋಜನೆ ಎಂದರೇನು?

ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರವು ಅಂದರೆ ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ರೈತರಿಗೆ ಹೆಚ್ಚುವರಿಯಾಗಿ 4 ಸಾವಿರ ರೂಪಾಯಿ ನೀಡಲು ಘೋಷಣೆ ಮಾಡಿದರು. ಅಂದರೆ ಕೇಂದ್ರ ಸರ್ಕಾರದ 6 ಸಾವಿರ ರೂಪಾಯಿ ಇದರೊಂದಿಗೆ ರಾಜ್ಯ ಸರ್ಕಾರದ 4 ಸಾವಿರ ರೂಪಾಯಿ ಸೇರಿ ವರ್ಷಕ್ಕೆ ಒಟ್ಟು 10 ಸಾವಿರ ರೂಪಾಯಿ ಜಮೆಯಾಗುತ್ತದೆ.

ರಾಜ್ಯದ ಕಂತು ವರ್ಷಕ್ಕೆ ಎರಡು ಸಲ ಅಂದರೆ ತಲಾ 2 ಸಾವಿರ ರೂಪಾಯಿಯಂತೆ ಒಟ್ಟು 4 ಸಾವಿರ ರೂಪಾಯಿ ಜಮೆಯಾಗುತ್ತದೆ.

ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ?

ರೈತರು ಪಿಎಂ ಕಿಸಾನ್ ಯೋಜನೆ ಕೇಂದ್ರ ಸರ್ಕಾರದ ಪಟ್ಟಿಯಲ್ಲಿ ತಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಅಗ ಅಲ್ಲಿ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ರಾಜ್ಯ, ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಊರು ಆಯ್ಕೆ ಮಾಡಿಕೊಂಡು ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು.

ಆಗ ಪಿಎಂ ಕಿಸಾನ್ ಯೋಜನೆಯ ಕೇಂದ್ರ ಸರ್ಕಾರದ ಫಲಾನುಭವಿಗಳ ಪಟ್ಟಿ ತೆರೆದುಕೊಳ್ಳುತ್ತದೆ.ಅಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕು.

ರಾಜ್ಯ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿ

ಕರ್ನಾಟಕ ರಾಜ್ಯದ ರೈತರು ಪಿಎಂ ಕಿಸಾನ್ ಯೋಜನೆಯಡಿ ರಾಜ್ಯದ ಹೆಚ್ಚುವರಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://fruitspmk.karnataka.gov.in/MISReport/FarmerDeclarationReport.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ರಾಜ್ಯ ಸರ್ಕಾರದ ಪಿಎಂ ಕಿಸಾನ್ ರೈತರ ಪಟ್ಟಿ ತೆರೆದುಕೊಳ್ಳುತ್ತದೆ. ಅಲ್ಲಿ ಜಿಲ್ಲೆ, ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು.  ನಂತರ ಊರು ಆಯ್ಕೆ ಮಾಡಿಕೊಂಡು ವೀಕ್ಷಿಸು ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ : ನಿಮ್ಮ ಪ್ಯಾನ್ ಕಾರ್ಡ್ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಆಗಿದೆಯೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ

ಆಗ ಗ್ರಾಮವಾರು ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಚೆಕ್ ಮಾಡಿಕೊಳ್ಳಬಹುದು. ಒಂದು ವೇಳೆ ನಿಮ್ಮ ಹೆಸರು ಪಟ್ಟಿಯಲ್ಲಿ ಇರದಿದ್ದರೆ ಕೂಡಲೇ ಫ್ರೂಟ್ಸ್ ಪಿಎಂ ಕಿಸಾನ್ ಯೋಜನೆಯಡಿ ಹೆಸರು ನೋಂದಣಿ ಮಾಡಿಸಿಕೊಳ್ಳಬಹುದು.

Leave a Comment