ಈ ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಬಹುದು

Written by Ramlinganna

Updated on:

women’s travels free ರಾಜ್ಯದ ಮಹಿಳೆಯರು ಜೂನ್ 11 ರಿಂದ ಕೆಎಸ್ಆರ್.ಟಿಸಿ ಬಸ್ ಗಳಲ್ಲಿ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಬಹುದು. ಹೌದು, ಕಾಂಗ್ರೆಸ್ ಪಕ್ಷವೂ ಚುನಾವಣೆ ಪೂರ್ವದಲ್ಲಿ ಐದು ಗ್ಯಾರೆಂಟಿಗಳನ್ನು ಘೋಷಣೆ ಮಾಡಿತ್ತು. ಅದರದಲ್ಲಿ ಶಕ್ತಿ ಯೋಜನೆಯೂ ಒಂದಾಗಿದೆ.

ಈ ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ರಾಜ್ಯದ ಒಳಗಡೆ ಜೂನ್ 11 ರಿಂದ ಮಧ್ಯಾಹ್ನ 1 ಗಂಟೆಯ ನಂತರ ಉಚಿತವಾಗಿ ಪ್ರಯಾಣಿಸಬಹುದು. ಹೌದು, ನಗರ, ಸಾಮಾನ್ಯ, ವೇಗಧೂತ (ಅಂತರ ರಾಜ್ಯ ಹಾಗೂ ಪ್ರತಿಷ್ಠಿತ ಸಾರಿಗೆಗಳನ್ನು ಹೊರತುಪಡಿಸಿ) ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು. ಯಾವುದಾದರೊಂದು ಒಂದು ಮೂಲ ಗುರುತಿನ ಚೀಟಿ ಅಥವಾ ಡಿಜಿಲಾಕರ್ ಮುಖಾಂತರ ತೋರಿಸಿ ಪ್ರಯಾಣಿಸಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

women’s travels free ಯಾವ ಯಾವ ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದು?

ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದ ಮಹಿಳೆಯರು ಬಸ್ ಗಳಲ್ಲಿ ಪ್ರಯಾಣ ಮಾಡುವ ಮುನ್ನ ಆಧಾರ್ ಕಾರ್ಡ್, ಚುನಾವಣಾ ಆಯೋಗ ವಿತರಿಸಿರುವ ಮತದಾರರ ಗುರುತಿನ ಚೀಟಿ, ಚಾಲನಾ ಪರವಾನಗಿ ಪತ್ರ, ವಾಸಸ್ಥಳ ನಮೂದಿಸಿರುವ ಭಾರತ ಸರ್ಕಾರದ ಇಲಾಖೆಗಳು ಭಾರತ ಸರ್ಕಾರದ ಸಾರ್ವಜನಿಕ ವಲಯಗಳು ಉದ್ದಿಗೆ ಸಂಸ್ಥೆಗಳು ವಿತರಿಸಿರುವ ಗುರುತಿನ ಚೀಟಿ, ವಾಸಸ್ಥಳ ನಮೂದಿಸಿರುವಂತಹ ಕರ್ನಾಟಕ ಸರ್ಕಾರದ ಇಲಾಖೆಗಳು ಕರ್ನಾಟಕ ಸರ್ಕಾರದ ಸಾರ್ವಜನಿಕ ವಲಯಗಳು ಉದ್ದಿಮೆ ಸಂಸ್ಥೆಗಲು ವಿತರಿಸಿರುವ ಗುರುತಿನ ಚೀಟಿ ಹಾಗೂ ಕರ್ನಾಟಕ ಸರ್ಕಾರದ ಅಂಗವಿಕಲ ಮತ್ತು ಹಿರಿಯ ನಾಗರಿಕರ ಕಲ್ಯಾಣಿ ನಿರ್ದೇಶನಾಲಯದವರು ವಿತರಿಸಿರುವ ಗುರುತಿನ ಚೀಟಿಗಳಲ್ಲಿ ಒಂದರ ಮೂಲ ಪ್ರತಿಯನ್ನು ಬಸ್ ನಿರ್ವಾಹಕರಿಗೆ ತೋರಿಸಿ ಶೂನ್ಯ ಮೊತ್ತದ ಟಿಕೇಟ್ ಪಡೆದು ಮಹಿಳೆಯರು ಇದೇ ಜೂನ್ 11 ರಂದು ಮಧ್ಯಾಹ್ನ 1 ಗಂಟೆಯ ನಂತರ ಉಚಿತ ಸಾರಿಗೆ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಬಹುದು.

ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣದ ರಾಜ್ಯ ಸರ್ಕಾರದ ಶಕ್ತಿ ಯೋಜನೆಗೆ ರಾಜ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ, ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ (ಐಟಿಬಿಟಿ) ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರಾಗೆಯವರು ಭಾನುವಾರ ಮಧ್ಯಾಹ್ನ 12 ಗಂಟೆಗೆ ಕಲಬುರಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ಚಾಲನೆ ನೀಡುವರು.

ಅದೇ ರೀತಿ ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಯಾ ತಾಲೂಕಿನ ಶಾಸಕರು ಆಯಾ ತಾಲೂಕು ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಇದನ್ನೂ ಓದಿ : ಈ ಮಹಿಳೆಯರು ಗೃಹ ಲಕ್ಷ್ಮೀ ಯೋಜನೆಯ 2000 ರೂಪಾಯಿ ಪಡೆಯಲಿದ್ದಾರೆ

ಮಹಿಳಾ ಪ್ರಯಾಣಿಕರು ಈ ಯೋಜನೆಯ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಸೇರಿದಂತೆ ಇನ್ನಿತರ ಗುರುತಿನ ಚೀಟಿ ತೋರಿಸಿ ಉಚಿತ ಪ್ರಯಾಣದ ಸೌಲಭ್ಯ ಪಡೆದುಕೊಳ್ಳಬಹುದು.

ಉಚಿತ ಬಸ್ ಸೇವೆ ಪಡೆಯಲು ಯಾವ ಯಾವ ಮಹಿಳೆಯರು ಅರ್ಹರು?

ವಿದ್ಯಾರ್ಥಿಗಳು ಸೇರಿದಂತೆ ಕರ್ನಾಟಕದ ನಿವಾಸಿಗಳಾಗಿರುವ ಎಲ್ಲಾ ಮಹಿಳೆಯರು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಜೊತೆಗೆ ಲಿಂಗತ್ವ ಅಲ್ಪಸಂಖ್ಯಾತರಿಗೂ (ತೃತೀಯ ಲಿಂಗಿಗಳಿಗೂ) ಕೂಡ ಶಕ್ತಿ ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು.

ಶಕ್ತಿ ಸ್ಮಾರ್ಟ್ ಕಾರ್ಡ್ ಬೇಕು?

ಮುಂದಿನ ಮೂರು ತಿಂಗಳಲ್ಲಿ ಮಹಿಳೆಯರು ಸೇವಾ ಸಿಂಧು ವೆಬ್ ಸೈಟ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಬೇಕಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. ಈ ಕಾರ್ಡ್ ನೀಡುವವರೆಗೂ ಆಧಾರ್ ಕಾರ್ಡ್ ಸೇರಿದಂತೆ ಇನ್ನಿತರ ಕಾರ್ಡ್ ತೋರಿಸಿ ಬಸ್ ಗಳಲ್ಲಿಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದು.

ಬಸ್  ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಬಸ್ ಕಂಡಕ್ಟರ್ ಶೂನ್ಯ ದರದ ಟಿಕೆಟ್ ವಿತರಿಸಲಿದ್ದಾರೆ.ಟಿಕೇಟ್ ಮೇಲೆ ಮಹಿಳಾ ಪ್ರಯಾಣಿಕರ ಉಚಿತ ಚೀಟಿ ಶಕ್ತಿ ಯೋಜನೆ ಎಂದು ಬರೆಯಲಾಗಿರುತ್ತದೆ. ಟಿಕೇಟ್ ನಲ್ಲಿ ಯಾವುದೇ ಬೆಲೆ ನಮೂದಾಗಿರುವುದಿಲ್ಲ.

Leave a Comment