ಸ್ವಯಂ ಉದ್ಯೋಗಕ್ಕೆ 3 ಲಕ್ಷ ರೂಪಾಯಿಯವರೆಗೆ ಬಡ್ಡಿರಹಿತ ಸಾಲ- ಇಲ್ಲಿದೆ ಸಂಪೂರ್ಣ ಮಾಹಿತಿ

Written by Ramlinganna

Published on:

ಸ್ವಾವಲಂಬಿಯಾಗಿ ಬದುಕಲು ಕೇಂದ್ರ ಸರ್ಕಾರವು ಸುಮಾರು 3 ಲಕ್ಷ ರೂಪಾಯಿಯವರೆಗೆ ಬಡ್ಡಿ ರಹಿತ ಸಾಲ ನೀಡಲು ಹೊಸ ಯೋಜನೆಯೊಂದನ್ನುಆರಂಭಿಸಿದೆ. ಹೌದು,  ಮಹಿಳೆಯರಲ್ಲಿ ಉದ್ಯಮಶೀಲತೆ ಹೆಚ್ಚಿಸಲು, ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 3 ಲಕ್ಷ ರೂಪಾಯಿಯವರೆಗೆ ಸಾಲ ನೀಡಲಾಗುವುದು.  ಮಹಿಳೆಯರಿಗೆ ಉದ್ಯೋಗಿನಿ ಯೋಜನೆ ಅಡಿಯಲ್ಲಿ ಸಾಲ ನೀಡಲಾಗುವುದ. ಈ ಯೋದನೆಯಡಿಯಲ್ಲಿ ಮಹಿಳೆಯರು ಸುಮಾರು 88 ವಿಧಧ ಸಣ್ಣ ಉದ್ಯಮ ಆರಂಭಿಸಲು ಬಡ್ಡಿರಹಿತ ಸಾಲ ನೀಡಲಾಗುವುದು.

ಈ ಯೋಜನೆಯಡಿಯಲ್ಲಿ ಎಲ್ಲಾ ವರ್ಗದ ಮಹಿಳೆಯರಿಗೆ ಬಡ್ಡಿರಹಿತ ಸಾಲ ನೀಡಲಾಗುವುದು. ವಿಧವೆಯರು, ಅಂಗವಿಕಲರು, ನಿರ್ಗತಿಕ ಮಹಿಳೆಯರಿಗೆ ವಿಶೇಶ ಆದ್ಯತೆ ನೀಡಲಾಗುವುದು.

ಯಾವ ಉದ್ಯಮಗಳಿಗೆ ಸಾಲ ನೀಡಲಾಗುವುದು? (for which industries loan available)

ಮೀನು ಮಾರಾಟ, ದಿನಸಿ ಅಂಗಡಿ, ಉಪ್ಪಿನಕಾಯಿ, ಅಗರಬತ್ತಿ, ಬೇಕರಿ, ಟೈಲರಿಂಗ್, ಬ್ಯೂಟಿ ಪಾರ್ಲರ್, ಹಿಟ್ಟಿನ ಗಿರಣಿ, ಕುಕ್ಕುಟೋದ್ಯಮ, ಹೈನುಗಾರಿಕೆ ,ಸೇರಿದಂತೆ ಇನ್ನಿತರ ಉದ್ಯಮಗಳಿಗೆ ಸಾಲ ನೀಡಲಾಗುವುದು.

ಬೇಕಾಗುವ ದಾಖಲೆಗಳು (what document needs for loan)

ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್, ಎಸ್.ಎಸ್.ಎಲ್.ಸಿ, ಅಂಕಪಟ್ಟಿ, ಬ್ಯಾಂಕ್ ಪಾಸ್ ಬುಕ್ ಸೇರಿದಂತೆ ಇನ್ನಿತರ ದಾಖಲೆ ಸಲ್ಲಿಸಬೇಕು.

ಉದ್ಯೋಗಿನಿ ಯೋಜನೆಯಡಿ ಸಾಲ ಪಡೆಯಲು ಅರ್ಹತಗಳು (Eligibility for loan)

ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಮಾತ್ರ ಸಾಲ ನೀಡಲಾಗುವುದು. 18 ರಿಂದ 55 ವಯೋಮಾನದೊಳಗಿರಬೇಕು. ಸಾಲಕ್ಕೆ ಅರ್ಜಿ ಸಲ್ಲಿಸುವ ಮಹಿಳಾ ಕುಟುಂಬದ ಆದಾಯ 1.5 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು. ವಿಧವೆಯರು, ಅಂಗವಿಕಲರು, ನಿರ್ಗತಿಕ ಮಹಿಳೆಯ ಕುಟುಂಬದವರಿಗೆ ಹೆಚ್ಚಿನ ಆದಾಯವಿದ್ದರೂ ಸಾಲ ನೀಡಲು ಪರಿಗಣಿಸಲಾಗುವುದು.

ಇದನ್ನೂ ಓದಿ : ಒಂದೇ ನಿಮಿಷದಲ್ಲಿ ನಿಮ್ಮ ಜಮೀನಿನ ಮ್ಯಾಪ್ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿ: ಇಲ್ಲಿದೆ ಮಾಹಿತಿ

ಆಯ್ಕೆಯಾದ ಅರ್ಹ ಮಹಿಳೆಯರಿಗೆ ಸ್ಥಳೀಯ ಬ್ಯಾಂಕುಗಳಿಂದ 3 ಲಕ್ಷ ರೂಪಾಯಿಯವರೆಗೆ ಬಡ್ಡಿರಹಿತ ಸಾಲ ನೀಡಲಾಗುವುದು. ಈ ಸಾಲದ ಮೇಲೆ ಸಾಮಾನ್ಯ ವರ್ಗದ ಮಹಿಳೆಯರಿಗೆ ಶೇ. 30 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಶೇ. 50 ರಷ್ಟು ಸಬ್ಸಿಡಿ ನೀಡಲಾಗುವುದು.

ಸಾಮಾಜಿಕ ಮತ್ತು ಆರ್ಥಿಕ ದುರ್ಬಲ ವರ್ಗದ ವಿದ್ಯಾವಂತ ನಿರುದ್ಯೋಗಿ ಮಹಿಳೆಯರಿಗೆ ಸ್ವಯಂ ಉದ್ಯೋಗ ಆರಂಭಿಸಲು ಮತ್ತು ಈ ಮೂಲಕ ನಗರ ಪ್ರದೇಶಗಳಿಗೆ ವಲಸೆಯನ್ನು ತಡೆಗಟ್ಟಲು ಉದ್ಯೋಗ ಸೃಷ್ಟಿ ಕಾರ್ಯಕ್ರಮ ರೂಪಿಸಲಾಗಿದೆ.

ಯಾವ ಬ್ಯಾಂಕುಗಳು ಸಾಲ ನೀಡುತ್ತವೆ?

ದೇಶದ ಖಾಸಗಿ ಹಾಗೂ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ಉದ್ಯೋಗಿನಿ ಯೋಜನೆಯಡಿಯಲ್ಲಿ 3 ಲಕ್ಷ ರೂಪಾಯಿಯವರೆಗೆ ಸಾಲ ನೀಡುತ್ತವೆ.

ಇದನ್ನೂ ಓದಿ : PM KISAN ಯೋಜನೆಯ ಹೊಸ ಪಟ್ಟಿಯಿಂದ ನಿಮ್ಮ ಹೆಸರು ತೆಗೆಯಲಾಗಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ

ವಾಣಿಜ್ಯ ಹಾಗೂ ಸಹಕಾರಿ ಬ್ಯಾಂಕುಗಳಿಂದಲೂ ಸಾಲ ಪಡೆಯಬಹುದು.

ಅರ್ಜಿ ಎಲ್ಲಿ ಸಲ್ಲಿಸಬೇಕು? (Where should apply for loan)

ಉದ್ಯೋಗಿನಿ ಯೋಜನೆಯಡಿಯಲ್ಲಿ ಸಾಲ ಪಡೆಯಲಿಚ್ಚಿಸುವ ಮಹಿಳೆಯರು ಸಂಬಂಧಪಟ್ಟ ಬ್ಯಾಂಕಿನಿಂದ ಅರ್ಜಿ ಪಡೆದು ಅರ್ಜಿಯಲ್ಲಿ ಕೇಳಲಾದ ಎಲ್ಲಾ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಬೇಕು. ನಂತರ ಎಲ್ಲಾದಾಖಲೆಗಳ ಪ್ರತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ಏನಿದು ಉದ್ಯೋಗಿನಿ ಯೋಜನೆ? (what is udyogini scheme)

ದೇಶದ ಆರ್ಥಿಕ ಬೆಳವಣಿಗೆಗಾಗಿ ಸಣ್ಣಉದ್ಯಮಗಳ ಸ್ಥಾಪನೆಗೆ ಪ್ರೋತ್ಸಾಹ ನೀಡುವುದಕ್ಕಾಗಿ ಹಾಗೂ ಮಹಿಳೆಯರ ಸಬಲೀಕರಣಕ್ಕಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಡಿಯಲ್ಲಿ ಮಹಿಳೆಯರಿಗೆ 3 ಲಕ್ಷ ರೂಪಾಯಿಯವರೆಗೆ ಬಡ್ಡಿರಹಿತ ಸಾಲ ನೀಡಲಾಗುವುದು.

Leave a Comment