ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸೇರಿದಂತೆ ಇನ್ನಿತರ ಯೋಜನೆಯಡಿಯಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಶೇ. 50 ರಿಂದ ಶೇ.90 ರವರೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಬಾಳೆ ಕಂದು, ಬಾಳೆ ಅಂಗಾಂಶ, ದ್ರಾಕ್ಷಿ, ಡ್ರ್ಯಾಗನ್ ಹಣ್ಣು, ಸಂಕರಣ ತರಕಾರಿ ಬೆಳೆಗಳ ವಿಸ್ತರಣೆ, ನೀರು ಸಂಗ್ರಹಣಾ ಘಟಕ, ಟ್ರ್ಯಾಕ್ಟರ್, ಪ್ಯಾಕ್ ಹೌಸ್, ಸಂಸ್ಕರಣಾ ಘಟಕ ಹಾಗೂ ಈರುಳ್ಳಿ ಶೇಖರಣಾ ಘಟಕಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೀರಿನಲ್ಲಿ ಕರಗುವ ರಸಗೊಬ್ಬರ, ಪಾಲಿ ಟನಲ್, ಹಣ್ಣು ಹೊದಿಕೆ, ವಿವಿಧ ಘಟಕಗಳಿಗೆ ರೈತರಿಗೆ ಸಹಾಯಧನ ನೀಡಲಾಗುವುದು.
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಹನಿ ನೀರಾವರಿ ಅಳವಡಿಸಿಕೊಳ್ಳಲು ರೈತರಿಗೆ ಶೇ. 90 ರಷ್ಟ್ರು ಸಹಾಯಧನ ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗದವರಿಗೆ ಶೇ. 75 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು.
ರಾಷ್ಟ್ರೀಯ ಎಣ್ಣೆ, ತಾಳೆ ಅಭಿವೃದ್ಧಿ ಯೋಜನೆಯಡಿ ತಾಳೆ ಬೆಳೆಯಲು ಆಸಕ್ತವಿದ್ದ ರೈತರಿಗೆ ವಿವಿಧ ಘಟಕಗಳಡಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಾಂತ್ರೀಕರಣ ಯೋಜನೆಯಡಿಯಲ್ಲಿ ತೋಟಗಾರಿಕೆಯಲ್ಲಿ ಬಳಸುವ ಯಂತ್ರೋಪಕರಣಗಳಿಗೆ ಸಹಾಯಧನ ನೀಡಲಾಗುವುದು.
ರೋಗ ಮತ್ತು ಕೀಟ ನಿಯಂತ್ರಣ ಯೋಜನೆಯಡಿ ಕೀಟ ಮತ್ತು ರೋಗಗಳ ಬಾಧೆ ತಡೆಯಲು ಸಹಾಯಧನ ನೀಡಲಾಗುವುದು.
ಮಧುವನ ಮತ್ತು ಜೇನು ಸಾಕಾಣಿಕೆ ಯೋಜನೆಯಡಿ ಜೇನು ಪೆಟ್ಟಿಗೆಗಳಿಗೆ ಸಹಾಯಧನ ನೀಡಲಾಗುವುದು.
ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ದ್ರಾಕ್ಷಿ, ದಾಳಿಂಬೆ, ನುಗ್ಗೆ ಬೆಳೆಗಳ ಪ್ರದೇಶ ವಿಸ್ತರಣೆಗೆ ಸಹಾಯಧನ ಲಭ್ಯವಿರುತ್ತದೆ.
ಈ ಮೇಲಿನ ಯೋಜನೆಗಳಡಿಯಲ್ಲಿ ಅರ್ಜಿ ಸಲ್ಲಿಸುವ ರೈತರು ಬಾಗಲಕೋಟೆ ಜಿಲ್ಲೆಯ ರೈತರಾಗಿರಬೇಕು.
ಬಾದಾಮಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮೊಬೈಲ್ ನಂಬರ್ 8884609727, ಬಾಗಲಕೋಟೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊಬೈಲ್ ನಂಬರ್ 9845696489, ಬೀಳಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮೊಬೈಲ್ ನಂಬರ್ 9886200574, ಹುನಗುಂದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮೊಬೈಲ್ ನಂಬರ್ 7353388515, 7019166396, ಜಮಖಂಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮೊಬೈಲ್ ನಂಬರ್ 9900002260 ಗೆ, ಮುಧೋಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮೊಬೈಲ್ ನಂಬರ್ 9902906750ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ರೈತರಿಂದಲೂ ಅರ್ಜಿ ಆಹ್ವಾನ
2022-23ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಇಲಾಖೆಯ ವತಿಯಿಂದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ರೈತರಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ : ರೈತರಿಗಿಲ್ಲಿದೆ ಗುಡ್ ನ್ಯೂಸ್, ರೈತರೇ ಜಮೀನಿನ ಪೋಡಿ ನಕ್ಷೆ ಮಾಡಬಹುದು- ಇಲ್ಲಿದೆ ಸಂಪೂರ್ಣ ಮಾಹಿತಿ
ತೆಂಗು, ಮಾವು, ಸಪೋಟ, ಅಂಗಾಶ ಬಾಳೆ, ನುಗ್ಗೆ, ಗೇರು, ಕೋಕೋ, ತೆಂಗು ತೋಟದಲ್ಲಿ ಕಾಳು ಮೆಣಸು ಅಭಿವೃದ್ಧಿ, ದಾಳಿಂಬೆ, ಸೀಬೆ, ಹೂವು ಬೆಳೆಗಳಾದ ಗುಲಾಬಿ, ಮತ್ತು ಮಲ್ಲಿಗೆ ಬೆಳೆಯಲು ಸಹಾಯಧನ ನೀಡಲಾಗುವುದು. ಆಸಕ್ತ ರೈತರು ಸಂಬಂಧಿಸಿದ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳನ್ನು ಅಥವಾ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಸಹಾಯಧನಕ್ಕೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ರೈತರು ಸಣ್ಣ, ಅತೀಸಣ್ಣ ರೈತರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಅರ್ಜಿ ಸಲ್ಲಿಸಬಹುದು. ರೈತರು ಗ್ರಾಮ ಪಂಚಾಯತ ವತಿಯಿಂದ ನೀಡುವ ಉದ್ಯೋಗ ಚೀಟಿ ಹೊಂದಿರುವುದು ಕಡ್ಡಾಯವಾಗಿದೆ.
ಹೆಚ್ಚಿನ ಮಾಹಿತಿಗಾಗಿ ರೈತರು ಹಳೇಕೋಟೆಯ ಸಹಾಯಕ ತೋಟಗಾರಿಕೆ ಅಧಇಕಾರಿ ವಿರೇಶ, ಗ್ರಾಮದ್ 7259152426, ಹಳ್ಳಿಮೈಸೂರ ಹೋಬಳಿಯಸಹಾಯಕ ತೋಟಗಾರಿಕೆ ಅಧಿಕಾರಿ ದೊಡ್ಡೇಗೌಡ 9972844710, ಕಸಬಾ ಹೋಬಳಿ ದೇವರಾಜ
9591549225 ಗೆ ಸಂಪರ್ಕಿಸಲು ಕೋರಲಾಗಿದೆ.
ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು?
ರೈತರು ಆಧಾರ್ ಕಾರ್ಡ್ ಹೊಂದಿರಬೇಕು. ಬ್ಯಾಂಕ್ ಪಾಸ್ ಬುಕ್ ಪ್ರತಿ ಇರಬೇಕು. ಇತ್ತೀಚಿನ ಪಾಸ್ ಪೋರ್ಟ್ ಸೈಜಿನ ಫೋಟೊ, ಜಮೀನಿನ ಪಹಣಿ ಇರಬೇಕು ಅರ್ಜಿಯೊಂದಿಗೆ ಇನ್ನಿತರ ದಾಖಲೆಗಳನ್ನು ತೋಟಗಾರಿಕೆ ಇಲಾಖೆಯಲ್ಲಿ ವಿಚಾರಿಸಿ ಸಲ್ಲಿಬೇಕು.