ಟ್ಯಾಕ್ಸಿ ಖರೀದಿಗೆ 3 ಲಕ್ಷ ಸಹಾಯಧನ ನೀಡಲು ಅರ್ಜಿ ಆಹ್ವಾನ

Written by Ramlinganna

Updated on:

taxi purchase subsidy ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ ಟ್ಯಾಕ್ಸಿ / ಸರಕು ವಾಹನಗಳ ಖರೀದಿ ಹಾಗೂ ಆಟೋ ರಿಕ್ಷಾ ಖರೀದಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಟ್ಯಾಕ್ಸಿ ಸರಕು ವಾಹನಗಳ ಖರೀದಿಗೆ ಪ್ರತಿ ಫಲಾನುಭವಿಗಳಿಗೆ ವಾಹನದ ಮೌಲ್ಯದ ಶೇ. 50 ರಷ್ಟು  ಅಥವಾ ಗರಿಷ್ಠ 3 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲಾಗುವದು.

ಅದೇ ರೀತಿ ಪ್ರಯಾಣಿಕ ಆಟೋ ರಿಕ್ಷಾ ಖರೀದಿಸಲು ಗರಿಷ್ಠ 75 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು. ವಾಹನದ ಉಳಿದದ ಮೊತ್ತಕ್ಕೆ ಬ್ಯಾಂಕ್ ಸಾಲ ಪಡೆದುಕೊಂಡ ಬಗ್ಗೆ ಬ್ಯಾಂಕ್ ಪತ್ರವನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 25 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕು?

ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ ಟ್ಯಾಕ್ಸಿ, ಸರಕು ವಾಹಣ ಹಾಗೂ ಆಟೋ ರಿಕ್ಷಾ ಖರೀದಿಗೆ ಸಹಾಯಧನ ಪಡೆಯಲು ಆಧಾರ್ ಕಾರ್ಡ್ (ನಿವಾಸದ ಪುರಾವೆಯಾಗಿ ಸಲ್ಲಿಸಬೇಕು). ವಾಹನ ಚಾಲನಾ ಪರವಾನಗಿ ಪ್ರತಿ ಸಲ್ಲಿಸಬೇಕು.  ಬ್ಯಾಂಕ್ ಪಾಸ್ ಬುಕ್ ಪ್ರತಿ ಸಲ್ಲಿಸಬೇಕು. ವಾಹನದ ಅಂದಾಜು ದರಪಟ್ಟಿ ಸಲ್ಲಿಸಬೇಕು.

ಇದನ್ನೂ ಓದಿ : ನಿಮ್ಮ ಜಮೀನನ ಖಾತಾ / ಪಟ್ಟಾ ಪ್ರತಿ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿ: ಇಲ್ಲಿದೆ ಮಾಹಿತಿ

ಸ್ವಯಂ ಘೋಷಣೆ ಪತ್ರ ಸಲ್ಲಿಸಬೇಕು. ಸಕ್ರಮ ಪ್ರಾಧಿಕಾರದಿಂದ ನೀಡಲಾದ ಜಾತಿ ಅಲ್ಪಸಂಖ್ಯಾತ ಪ್ರಮಾಣ ಪತ್ರ ಸಲ್ಲಿಸಬೇಕು. ಸಕ್ರಮ ಪ್ರಾಧಿಕಾರದಿಂದ ನೀಡಲಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು.

taxi purchase subsidy ಸ್ವಾವಲಂಬಿ ಸಾರಥಿ ಯೋಜನೆಯಡಿ ಸೌಲಭ್ಯ ಪಡೆಯಲು ಬೇಕಾಗುವ ಅರ್ಹತೆಗಳು

ಅರ್ಜಿದಾರರು ಕರ್ನಾಟಕ ರಾಜ್ಯದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಸೇರಿದವರಾಗಿರಬೇಕು. ಅರ್ಜಿದಾರರು ಕರ್ನಾಟಕ ಶಾಶ್ವತ ನಿವಾಸಿಯಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು. ಎಲ್ಲಾ ಮೂಲಗಳಿಂದ ಬರುವ ವಾರ್ಷಿಕ ಕುಟುಂಬದ ಆದಾಯವೂ 4,50,000 ಕ್ಕಿಂತ ಕಡಿಮೆ ಇರಬೇಕು.

ಅರ್ಜಿದಾರರು ಪ್ರಾದೇಶಿಕಸಾರಿಗೆ ಅಧಿಕಾರಿಯಿಂದ ನೀಡಲಾದ ಚಾಲನಾ ಪರವಾನಗಿ ಹೊಂದಿರಬೇಕು. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ ಅಥವಾ ರಾಜ್ಯ ಸರ್ಕಾರಿ ಉದ್ಯೋಗಿಯಾಗಿರಬಾರದು. ಕಳೆದ 5 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವರ ಕುಟುಂಬದ ಸದಸ್ಯರು ಸರ್ಕಾರದ ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ (ಅರಿವು ಯೋಜನೆ ಹೊರತು ಪಡಿಸಿ) ಸಾಲ ಸೌಲಭ್ಯ ಪಡೆದಿರಬಾರದು.

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ

https://kmdconline.karnataka.gov.in/Portal/login

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮಮೊಬೈಲ್ ನಂಬರ್ ನಮೂದಿಸಬೇಕು. ನಂತರ ಸಲ್ಲಿಸಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸದ ನಂತರ ಅರ್ಜಿ ತೆರೆದುಕೊಳ್ಳುತ್ತದೆ. ಅಲ್ಲಿ ಕೇಳಲಾದ ಅಗತ್ಯ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಬೇಕು.

ಅರ್ಜಿ ಸಲ್ಲಿಸಿದ ನಂತರ ಸ್ಟೇಟಸ್ ಚೆಕ್ ಮಾಡಿ

ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದ ನಂತರ ನಿಮ್ಮ ಅರ್ಜಿಯ ಸ್ಟೇಟಸ್ ಸಹ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು,  ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಪೇಜ್ ನಲ್ಲಿ ಕಾಣುವ ಅರ್ಜಿಯ ಸ್ಥಿತಿ ಮೇಲೆ ಕ್ಲಿಕ್ ಮಾಡಬೇಕು. ನಂತರ  ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ಹುಟ್ಟಿದ ದಿನಾಂಕ ಹಾಕಬೇಕು.  ನಂತರ ಅರ್ಜಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ ನಿಮ್ಮ ಅರ್ಜಿಯ ಸ್ಟೇಟಸ್ ಚೆಕ್ ಮಾಡಬಹುದು.

ಯೋಜನೆ ಹಾಗೂ ಅರ್ಜಿ ಕುರಿತಂತೆ ಇಲ್ಲಿ ಸಂಪರ್ಕಿಸಿ

ಹೆಚ್ಚಿನ ಮಾಹಿತಿಗಾಗಿ 080 276817867 ಗೆ ಸಂಪರ್ಕಿಸಬಹುದು. ಅಥವಾ ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment