ಸೋಲಾರ್ ಪಂಪ್ ಸೆಟ್ ಗೆ 1 ಲಕ್ಷ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Ramlinganna

Updated on:

Up to 1 lakh rupees subsidy ಸೋಲಾರ್ ಪಂಪ್ ಸೆಟ್ ಘಟಕಕ್ಕೆ 1 ರಿಂದ 1.50 ಲಕ್ಷ ರೂಪಾಯಿಯವರೆಗೆ ಸಹಾಯದನ ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, 2023-24ನೇ ಸಾಲಿನ ಸಿಎಚ್.ಡಿ ಯೋಜನೆಯ ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಾಂತ್ರೀಕರಣ ಕಾರ್ಯಕ್ರಮವನ್ನು ಮೈಸೂರು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿಯಲ್ಲಿ ಯಂತ್ರೋಪಕರಣಗಳನ್ನು ಖರೀದಿಸಿಲು ಸಹಯದನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

Up to 1 lakh rupees subsidy ಸೋಲಾರ್ ಪಂಪ್ ಸೆಟ್ ಖರೀದಿ

ಸೋಲಾರ್ ಪಂಪ್ ಸೆಟ್ ಖರೀದಿಸಲು ಸಾಮಾನ್ಯ ವರ್ಗದವರಿಗೆ ಶೇ. 40 ರಷ್ಟು ಸಹಾಯಧನ, ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದ ರೈತರಿಗೆ ಶೇ. 50 ರಷ್ಟು ಸಹಾಯಧನ ನೀಡಲಾಗುವುದು. ಅದೇ ರೀತಿ ಸಣ್ಣ ಹಾಗೂ ಅತೀಸಣ್ಣ  ಹಾಗೂ ಸಾಮಾನ್ಯ ಮಹಿಳಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ. 50 ರಷ್ಟು ಸಹಾಯಧನ ನೀಡಲಾಗುವುದು.

ಸೌರಶಕ್ತಿ ಆಧಾರಿತ 3 ಹೆಚ್.ಪಿ ಸೋಲಾರ್ ಪಂಪ್ ಸೆಟ್ ಗಳ ಘಟಕ ವೆಚ್ಚ 2 ಲಕ್ಷ ರೂಪಾಯಿಗಳ ಶೇ. 50 ರಂತೆ 1 ಲಕ್ಷರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು. ಅದೇ ರೀತಿ 5 ಹೆಚ್.ಪಿ ಗಿಂತ ಮೇಲ್ಪಟ್ಟ ಸೋಲಾರ್ ಪಂಪ್ ಸೆಟ್ ಗಳಿಗೆ ಘಟಕ ವೆಚ್ಚ 3 ಲಕ್ಷ ರೂಪಾಯಿಗಳನ್ನು ಶೇ. 50 ರಂತೆ 1.50 ಲಕ್ಷ  ರೂಪಾಯಿಗಳಿಗೆ ಮಿತಗೊಳಿಸಿ ಸಹಾಯಧನ ನೀಡಲಾಗುವುದು.

ರೈತರು ಅನುಮೋದಿತ ಸಂಸ್ಥೆಯಿಂದ ಸೋಲಾರ್ ಪಂಪ್ ಸೆಟ್ ಗಳನ್ನು ಖರೀದಿಸುವುದು ಕಡ್ಡಾಯವಾಗಿದೆ. ಪಂಪ್ ಸೆಟ್ ಖರೀದಿಗೆ ಮುನ್ನ ರೈತರು ಈ ಕುರಿತು ತಮ್ಮ ಹತ್ತಿರದ ತೋಟಗಾರಿಕೆ ಇಲಾಖೆಯಲ್ಲಿ ವಿಚಾರಿಸಿ ಅರ್ಜಿಯ ಕುರಿತಂತೆ ಮಾಹಿತಿ ಪಡೆದುಕೊಳ್ಳಬೇಕು.

ಇದನ್ನೂಓದಿನಿಮ್ಮ ಜಮೀನಿನ ಒರಿಜಿನಲ್ ಸರ್ವೆ ಟಿಪ್ಪಣಿ ಪುಸ್ತಕ ಒಂದೇ ನಿಮಿಷದಲ್ಲಿ ಮೊಬೈಲ್ ನಲ್ಲೇ ಚೆಕ್ ಮಾಡಿ

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ, ದಾಖಲಾತಿಗಳ ವಿವರಗಳಿಗಾಗಿ ಮೈಸೂರು 0821 2430450, ಎಚ್.ಡಿ ಕೋಟೆ 08228 255261, ಹುಣಸೂರು 08222 252447, ಕೆ.ಆರ್. ನಗರ 08223 262791, ನಂಜನಗೂಡು 08221 226201, ಪಿರಿಯಾಪಟ್ಟಣ 08223 273535, ಟಿ. ನರಸೀಪುರ 08227 260086 ಗೆ ಸಂಪರ್ಕಿಸಬಹುದು ಎಂದು ಮೈಸೂರು ಜಿಲ್ಲೆಯ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲೆಯಿಂದ ವಿವಿಧ ಯೋಜನೆಗಳಡಿಯಲ್ಲಿ ಅರ್ಜಿ ಆಹ್ವಾನ

ಬಳ್ಳಾರಿ ತೋಟಗಾರಿಕೆ ಇಲಾಖೆಯ ವತಿಯಂದ ಪ್ರಸಕ್ತ 2023-24ನೇ ಸಾಲಿನ ವಿವಿಧ ಯೋಜನೆಗಳಡಿಯಲ್ಲಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, ಸಂಡೂರು, ಬಳ್ಳಾರಿ ಮತ್ತು ಸಿರಗುಪ್ಪ ತಾಲೂಕುಗಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈರುಳ್ಳಿ ಶೇಖರಣಾ ಘಟಕ, ಮಾವು, ಸೀತಾಫಲ, ಸೀಬೆ, ಗೇರು, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆಗೆ  ಸಾಹಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಹಿರಿಯ ಸಹಾಯಕತೋಟಗಾರಿಕೆ ನಿರ್ದೇಶಕರಕಚೇರಿ ಅಥವಾ 08392 278179 ಗೆ ಸಂಪರ್ಕಿಸಲು ಕೋರಲಾಗಿದೆ.

ತೋಟಗಾರಿಕೆ ಇಲಾಖೆಯಿಂದ ಸಹಾಯಧನ ಪಡೆಯಲು ಯಾವ ಯಾವ ದಾಖಲೆ ಬೇಕು?

ತೋಟಗಾರಿಕೆ ಇಲಾಖೆಯಿಂದ ಸಹಾಯದನ ಪಡೆಯಲು ರೈತರ ಬಳಿ ಆಧಾರ್ ಕಾರ್ಡ್ ಇರಬೇಕು. ಜಮೀನಿನ ದಾಖಲೆ ಅಂದರೆ ಜಮೀನು ಹೊಂದಿರುವ ಪಹಣಿ ಇರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದರೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು. ಲಭ್ಯತೆಯ ಆಧಾರದ ಮೇಲೆ ರೈತರಿಗೆ ಯಂತ್ರೋಪಕರಣಗಳನ್ನು ವಿತರಿಸಲಾಗುವುದು. ಈ ಮೇಲಿನ ದಾಖಲೆಗಳೊಂದಿಗೆ ಅರ್ಜಿಯಲ್ಲಿ ಕೇಳಲಾದ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ನಿಮ್ಮ ತಾಲೂಕಿನ ತೋಟಗಾರಿಕೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು. ಮೈಸೂರು ಜಿಲ್ಲೆಯಿಂದ ಅರ್ಜಿ ಆಹ್ವಾನಿಸಿದಂತೆ ಮುಂದಿನ ದಿನಗಳಲ್ಲಿ ಇತರ ಜಿಲ್ಲೆಯಿಂದಲೂ ಅರ್ಜಿ ಆಹ್ವಾನಿಸಿದಾಗ ರೈತರು ಅರ್ಜಿ ಸಲ್ಲಿಸಬಹುದು.

Leave a Comment