ಆಟೋ ರಿಕ್ಷಾ ಖರೀದಿಗೆ 2.5 ಲಕ್ಷ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Ramlinganna

Updated on:

subsidy for purchase Auto rickshaw  ಆಟೋ ರಿಕ್ಷಾ ಹಾಗೂ ಟ್ಯಾಕ್ಸಿ ವಾಹನ ಚಲಾಯಿಸುವವರಿಗೆ ಗುಡ್ ನ್ಯೂಸ್. ಸರ್ಕಾರದ ವತಿಯಿಂದ ಟ್ಯಾಕ್ಸಿ ವಾಹನ ಹಾಗೂ ಆಟೋ ರಿಕ್ಷಾ ಖರೀದಿಗೆ ಶೇ. 2.5 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2022-23ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ಯಾಸೆಂಜರ್ ಆಟೋ ರಿಕ್ಷಾ, ಟ್ಯಾಕ್ಸಿ ಗೂಡ್ಸ್ ಯೋಜನೆಯಡಿ ಆಟೋ ರಿಕ್ಷಾ ವಾಹನ ಖರೀದಿಗೆ 75 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು. ಅದೇ ರೀತಿ ಟ್ಯಾಕ್ಸಿ ವಾಹನ ಖರೀದಿಗೆ ಶೇ. 33 ಹಾಗೂ ಗರಿಷ್ಠ 2.5 ಲಕ್ಷ ರೂಪಾಯಿಯಗಳ ಸಹಾಯಧನ ನೀಡಲಾಗುವುದು.

ಈ ಯೋಜನೆಯಡಿಯಲ್ಲಿ ಟ್ಯಾಕ್ಸಿ ಅಥವಾ ಗೂಡ್ಸ್ ವಾಹನ ಖರೀದಿಸಲು ವಾಹನದ ಮೌಲ್ಯ ಗರಿಷ್ಠ 7.50 ಲಕ್ಷ ರೂಪಾಯಿ ಆಗಿರಬೇಕು. ಅಭ್ಯರ್ಥಿಗಳ ವಾರ್ಷಿಕ ಆದಾಯ 4.50 ಲಕ್ಷ ಒಳಗಿರಬೇಕು.  ಅರ್ಜಿ ಸಲ್ಲಿಸಲು 18 ರಿಂದ 45 ಹಾಗೂ 55 ವರ್ಷದೊಳಗೆ ವಯೋಮಿತಿ ಇರಬೇಕು. ಈ ಹಿಂದೆ ನಿಗಮದಿಂದ ಸೌಲಭ್ಯಪಡೆದಿರುವವರು ಮತ್ತೆ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ.

ಯಾವ ಯಾವ ದಾಖಲೆ ಬೇಕು?

ಅರ್ಜಿದಾರರು ಆಧಾರ್ ಕಾರ್ಡ್ ಹೊಂದಿರಬೇಕು. ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿ ಸಲ್ಲಿಸಬೇಕು. ಆಧಾರ್ ಕಾರ್ಡ್ ಬ್ಯಾಂಕ್ ಅಕೌಂಟಿಗೆ ಲಿಂಕ್ ಮಾಡಿರಬೇಕು. ಫಲಾನುಭವಿಗಳು ರಾಜ್ಯದ ಮತೀಯ ಅಲ್ಪಸಂಖ್ಯಾತರಾಗಿರಬೇಕು. ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಪ್ಯಾಸೆಂಜರ್ ಆಟೋ ಅಥವಾ ಟ್ಯಾಕ್ಸಿ ಗೂಡ್ಸ್ ಯೋಜನೆಗೆ ವಾಹನ ಪರವಾನಗಿ ಹೊಂದಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು.

ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನಾಂಕವಾಗಿದೆ.  ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅರ್ಜಿಗಳನ್ನು ಪ್ರಿಂಟ್ ತೆಗೆದುಕೊಂಡು ಸಂಬಂಧಿಸಿದ ಎಲ್ಲಾ ದಾಖಲಾತಿಗಳೊಂದಿಗೆ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.

subsidy for purchase Auto rickshaw  ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ

https://kmdconline.karnataka.gov.in/Portal/home

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವೆಬ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಆಟೋ ರಿಕ್ಷಾ, ಟ್ಯಾಕ್ಸಿ ಸರಕು ವಾಹನಗಳ ಖರೀದಿಗೆ ಸಹಾಯಧನ ಬಾಕ್ಸ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಇನ್ನೊಂದ ಪೇಜ್ ತೆರೆದುಕೊಳ್ಳುತ್ತದೆ.ಅಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗಿರುವ ಅರ್ಹತೆಗಳು ಕಾಣುತ್ತದೆ. ಅಲ್ಲಿ ಚೆಕ್ ಮಾಡಿಕೊಂಡು ಯಾವ ಯಾವ ದಾಖಲೆಗಳು ಬೇಕು ಎಬ ಮಾಹಿತಿಯೂಇರುತ್ತದೆ.  ಅದನ್ನೆಲ್ಲಾ ಒಮ್ಮೆ ಓದಿಕೊಳ್ಳಬೇಕು. ನಂತರ ಮೇಲ್ಗಡೆ ಕಾಣುವ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮೇಲೆ ಕ್ಲಿಕ್ ಮಾಡಬೇಕು.  ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಸಲ್ಲಿಸು ಮೇಲೆ ಕ್ಲಿಕ್ ಮಾಡಬೇಕು. ನಿಮ್ಮಮೊಬೈಲಿಗೆ ಆರು ಅಂಕಿಯ ಓಟಿಪಿ ಬರುತ್ತದೆ. ಓಟಿಪಿಯನ್ನು ನಮೂದಿಸಿದ ನಂತರ ಅಲ್ಲಿ ಕೇಳಲಾದ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಸ್ಟೇಟಸ್ ಸಹ ಚೆಕ್ ಮಾಡಿಕೊಳ್ಳಬಹುದು. ನಿಮಗದ ಮುಖ ಪುಟದಲ್ಲಿ ಅರ್ಜಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ ಅರ್ಜಿಯ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

ಇದನ್ನೂ ಓದಿ: live location map ಬಳಸಿ ವಿಳಾಸ ಹುಡುಕುವುದು ಹೇಗೆ?

ಹೆಚ್ಚಿನ ಮಾಹಿತಿಗಾಗಿ ಬೆಳಗ್ಗೆ 10 ರಿಂದ ಸಾಯಂಕಾಲ 5.30 ರವರೆಗೆ 080 22860999 ಗೆ ಸಂಪರ್ಕಿಸಬಹುದು. ಅಥವಾ ಉಚಿತ ಸಹಾಯವಾಣಿ 8277799990 ಗೆ ಕರೆ ಮಾಡಿ ಸಂಪರ್ಕಿಸಬಹುದು.  ಇನ್ನೂ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು  ತಮ್ಮ ಜಿಲ್ಲೆಯ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಬಹುದು.

Leave a Comment