200 ಯೂನಿಟ್ ವರೆಗೆ ಉಜಿತ್ ವಿದ್ಯುತ್ ಪಡೆಯುವ ಗೃಹಜ್ಯೋತಿ ಗೆ ಇಲ್ಲೇ ಅರ್ಜಿ ಸಲ್ಲಿಸಿ

Written by Ramlinganna

Published on:

ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದ ಐದು ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಆನ್ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಸಾರ್ವಜನಿಕರು ಎಲ್ಲಿಯೂ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು ತಮ್ಮ ಬಳಿಯಿರುವ ಮೊಬೈಲ್ ನಿಂದ ಅರ್ಜಿ ಸಲ್ಲಿಸಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಆನ್ಲೈನ್ ನಲ್ಲಿ ಗೃಹಜ್ಯೋತಿಗೆ ಅರ್ಜಿ ಸಲ್ಲಿಸಿ

ಗೃಹಜ್ಯೋತಿ ಯೋಜನೆಗೆ ಫಲಾನುಭವಿಯಾಗಲು ಆನ್ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಫಲಾನುಭವಿಯಾಗಲು ಈ

https://sevasindhugs.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಕರ್ನಾಟಕ ಸರ್ಕಾರ ಖಾತ್ರಿ ಯೋಜನೆಗಳ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಎಂಬ ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ಗೃಹಜ್ಯೋತಿ ಮೇಲೆ ಕ್ಲಿಕ್ ಮಾಡಬೇಕು.  ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದಕ್ಕಿಂತ ಮೊದಲು ನಿಮ್ಮ ಆಧಾರ್ ಸಂಖ್ಯೆ, ನಿಮ್ಮ ವಿದ್ಯುತ್ ಸಂಪರ್ಕದ ಖಾತೆ ಸಂಖ್ಯೆ ಹಾಗೂ ಆಧಾರ್ ನ ಮೊಬೈಲ್ ಸಂಖ್ಯೆಯನ್ನು ನಿಮ್ಮಲ್ಲಿ ಇಟ್ಟುಕೊಳ್ಳಬೇಕು.

ನಾನು ಒದಗಿಸಿದ ಮಾಹಿತಿಯನ್ನು ಓದಿದ್ದೇನೆ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ಅದರ ಕೆಳಗಡೆ ಕಾಣುವ captcha ಕೋಡ್ ನ್ನು ನಮೂದಿಸಿ Agree ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಿ Get Details ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಸಮಸ್ಯೆಯಾಗುತ್ತಿದ್ದರೆ ನಿಮ್ಮ ಹತ್ತಿರದ ವಿದ್ಯುತ್ ಕಚೇರಿ, ಬೆಂಗಳೂರು ಒನ್. ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಥವಾ ನಿಮ್ಮ ಹತ್ತಿರದ ಆನ್ಲೈನ್ ಅರ್ಜಿ ಸಲ್ಲಿಸುವ ಸೇವಾ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು.

ಗೃಹ ಜ್ಯೋತಿಗೆ ಏನೇನು ದಾಖಲೆ ಬೇಕು?

ಗೃಹ ಜ್ಯೋತಿ ಯೋಜನೆಗೆ ಆಧಾರ್ ಕಾರ್ಡ್ ಸಲ್ಲಿಸಬೇಕು. ವಿದ್ಯುಚ್ಛಕ್ತಿ ಬಿಲ್ ನೀಡಬೇಕು. ಒಂದು ವೇಳೆ ನೀವು ಬಾಡಿಗೆ ಮನೆಯಲ್ಲಿ ವಾಸವಾಗುತ್ತಿದ್ದರೆ ಕರಾರು ಪತ್ರವನ್ನು ಸಹ ನೀಡಬೇಕಾಗುತ್ತದೆ.

ಇದನ್ನೂ ಓದಿ ಬೆಳೆ ವಿಮೆಗೆ ಅರ್ಜಿ ಆಹ್ವಾನ : ಯಾವ ಬೆಳೆಗಳಿಗೆ ಎಷ್ಟು ವಿಮೆ ಹಣ ಜಮೆಯಾಗುತ್ತದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ನೋಂದಣಿ ಸಮಯದಲ್ಲಿ ಸರಿಯಾಗಿ ಮಾಹಿತಿಯನ್ನು ಭರ್ತಿ ಮಾಡಬೇಕಾಗುತ್ತದೆ. ನಿಮ್ಮಹೆಸರು, ಆಧಾರ್ ಕಾರ್ಡ್, ಎಸ್ಕಾಂನಲ್ಲಿರುವ ವಿಳಾಸ, ನಿಮ್ಮ ಮೊಬೈಲ್ ನಂಬರ್ ಸರಿಯಾಗಿ ನಮೂದಿಸಬೇಕು.

ಗೃಹಜ್ಯೋತಿ ಯೋಜನೆ ಸೌಲಭ್ಯ ಪಡೆಯಲು ಬೇಕಾಗುವ ಷರತ್ತುಗಳು

ಈ ಯೋಜನೆಯನ್ನು ಜುಲೈ  ತಿಂಗಳು ವಿದ್ಯುತ್ ಬಳಕೆಗೆ ಆಗಸ್ಟ್  ತಿಂಗಳಿಂದ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ ಈ ಕೆಳಕಂಡ ಷರತ್ತುಗಳನ್ವಯ ಜಾರಿಗೆತರಲಾಗುವುದು.

ಈ ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ. ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ. ಪ್ರತಿ ತಿಂಗಳು ಮೀಟರ್ ರೀಡಿಂಗ್ ಮಾಡಿದಾಗ ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸಬೇಕು.  ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್ಲಿನಲ್ಲಿ ಕಡಿತಗೊಳಿಸಿ ಉಳಿತ ಮೊತ್ತವನ್ನು ಗ್ರಾಹಕರಿಗೆ ನೆಟ್ ಬಿಲ್ ನೀಡಲಾಗುವುದು.

ಅರ್ಹ ಯೂನಿಟ್ ಒಳಗೆ ಅಂದರೆ200 ಯೂನಿಟ್ ಒಳಗಡೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ ನ್ನು ನೀಡಲಾಗುವುದು. ಪ್ರತಿ ಫಲಾನುಭವಿಯು ತನ್ನ ಕನೆಕ್ಷನ್ ಐಡಿ ಅಕೌಂಟ್ ಐಡಿಯನ್ನು ಆಧಾರ್ ಗೆ ಕಡ್ಡಾಯವಾಗಿ ಜೋಡಣೆ ಮಾಡಬೇಕು. ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದರೆ ಒಂದು ಸ್ಥಾವರಕ್ಕೆ ಮಾತ್ರಈ ಯೋಜನೆಯಡಿ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಈ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಚಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು.

Leave a Comment