ಸರಕು ಸಾಗಾಣಿಕೆ ವಾಹನ ಖರೀದಿ ಮಾಡಲಿಚ್ಚಿಸುವ ರೈತರಿಗಿಲ್ಲಿದೆ ಸಂತಸದ ಸುದ್ದಿ. ಹೌದು, ವಿವಿಧ ನಿಗಮಗಳ ವತಿಯಿಂದ ಸರಕು ಸಾಗಾಣಿಕೆ ವಾಹನ ಖರೀದಿಗೆ 3.50 ಲಕ್ಷ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು,ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದದ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನಿಸಲಾಗಿದೆ.
2022-23ನೇ ಸಾಲಿನ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ 3.50 ಲಕ್ಷ ರೂಪಾಯಿಯವರೆಗೆ ಲಘು ಸರಕು ಸಾಗಣೆ ಹಾಗೂ ದ್ವಿಚಕ್ರ ವಾಹನ ಖರೀದಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜನವರಿ 16 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?
ಸರಕು ಸಾಗಾಣಿಕೆ ವಾಹನ ಹಾಗೂ ದ್ವಿಚಕ್ರ ವಾಹನ ಖರೀದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ
https://sevasindhu.karnataka.gov.in
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಸೇವಾ ಸಿಂಧು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಹೊಸ ಬಳಕೆದಾರರು ಇಲ್ಲಿ ನೋಂದಾಯಿಸಿ ಕೆಳಗಡೆಯಿರುವ ಬಾಕ್ಸ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಬೇಕು. ಕ್ಯಾಪ್ಚ್ಯಾ ಕೋಡ್ ಹಾಕಿ Next ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಕೇಳಲಾದ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಲು ತಾಂತ್ರಿಕ ಸಮಸ್ಯೆಯಾಗುತ್ತಿದ್ದರೆ ಹತ್ತಿರದ ಗ್ರಾಮ ಒನ್, ಸಿ.ಎಸ್.ಸಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು
ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಶೈಕ್ಷಣಿಕ ಪ್ರಮಾಣ ಪತ್ರಗಳು, ಚಾಲನಾ ಪರವಾನಗಿ ಪ್ರಮಾಣ ಪತ್ರ, ಅರ್ಜಿದಾರರ ಭಾವಚಿತ್ರಗಳು, ಆಧಾರ್ ಕಾರ್ಡ್ ಇರಬೇಕು.
ಇದನ್ನೂ ಓದಿ : ನಿಮ್ಮ ಹೊಲದ ಸರ್ವೆ ಟಿಪ್ಪಣಿ, ಪೋಡಿ ಟಿಪ್ಪಣಿ ಪುಸ್ತಕ ಮೊಬೈಲ್ ನಲ್ಲೇ ಚೆಕ್ ಮಾಡಿ
ಪಡಿತರ ಚೀಟಿ ಪ್ರಮಾಣ ಪತ್ರ ಇರಬೇಕು. ಅಗತ್ಯ ಇರುವ ಇತರ ದಾಖಲೆಗಳು ಹೊಂದಿರಬೇಕು. ಅರ್ಜಿಯನ್ನು ಆನ್ಲೈನ್ನಲ್ಲೇ ಸಲ್ಲಿಸಬೇಕು.
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಮಗದಿಂದಲೂ ಅರ್ಜಿ ಆಹ್ವಾನ
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ2022-23ನೇ ಸಾಲಿನ ಉದ್ಯಮಶೀಲತಾ ಯೋಜನೆ (ದ್ವಿಚಕ್ರ ಹಾಗೂ ತ್ರಿಚಕ್ರ ಸರಕು ಸಾಗಾಣಿಕೆ ವಾಹನ) ಮತ್ತು ನೇರ ಸಾಲ ಯೋಜನೆಯಡಿಯಲ್ಲಿಯೂ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಗಳಡಿಯಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 16 ರವರೆಗೆ ವಿಸ್ತರಿಸಲಾಗಿದೆ.
ಅರ್ಹತೆಗಳು
ಅರ್ಜಿ ಸಲ್ಲಿಸುವವರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿ ಷ್ಟ ಪಂಗಡದವರಾಗಿರಬೇಕು. ಅರ್ಜಿದಾರರು ಅಥವಾ ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದಿದಲ್ಲಿ ಅಂತಹ ಫಲಾನುಭವಿಗಳು ಅರ್ಹರಿರುವುದಿಲ್ಲ. ಅರ್ಜಿದಾರರು ಆಯ್ಕೆ ಸಮಿತಿಯಿಂದ ಆಯ್ಕೆಯಾಗಿರಬೇಕು. ಅರ್ಜಿದಾರರ ಕುಟುಂಬ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದವರಿಗೆ 1,50 ಲಕ್ಷ ಹಾಗೂ ನಗರ ಪ್ರದೇಶದವರಿಗೆ 2 ಲಕ್ಷ ಗಳ ಮಿತಿಯೊಳಗೆ ಇರಬೇಕು. ಅರ್ಜಿದಾರರು 20 ವರ್ಷದಿಂದ 50 ವರ್ಷದೊಳಗಿನ ವಯೋಮಾನದವರಾಗಿರಬೇಕು. ಮಂಜೂರಾತಿಪಡೆದ ಫಲಾನುಭವಿಯು ಅನರ್ಹರೆಂದು ಕಂಡುಬಂದಲ್ಲಿ ಮಂಜೂರಾತಿಯನ್ನು ಯಾವುದೇ ಹಂತದಲ್ಲಿ ರದ್ದುಪಡಿಸಲಾಗುವುದು. ಫಲಾನುಭವಿಯ ಹೆಸರಿನಲ್ಲಿ ಸಹಾಯಧನವನ್ನು ಬ್ಯಾಂಕಿಗೆ ಬಿಡುಗಡೆ ಮಾಡಲಾಗುವುದು.
ಅರ್ಜಿಯನ್ನು ಆನ್ಲೈನ್ ನಲ್ಲಿ ಸಲ್ಲಿಸಿದ ನಂತರ ಎರಡು ಪ್ರತಿಯಲ್ಲಿ ಪ್ರಿಂಟ್ ಪಡೆದುಕೊಳ್ಳಬೇಕು. ಒಂದು ಪ್ರತಿಯನ್ನು ಅರ್ಜಿದಾರರು ಯಾವ ನಿಗಮದಡಿಯಲ್ಲಿಬರುತ್ತಾರೋ ಆ ನಿಗಮಕ್ಕೆ ಸಲ್ಲಿಸಬೇಕಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅರ್ಜಿದಾರರು ಆಯಾ ನಿಗಮಗಳಲ್ಲಿ ವಿಚಾರಿಸಬಹುದು.