ಪಶುಪಾಲನೆಯಲ್ಲಿ ಆಸಕ್ತಿಯಿರುವ ರೈತರಿಗಿಲ್ಲಿದೆ ಸಂತಸದ ಸುದ್ದಿ, ಪಶುಪಾಲನೆ ಮಾಡಲು ರೈತರಿಗೆ ಶೇ. 33 ರಷ್ಚು ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ 2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ –ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿಯಲ್ಲಿ ಒಂದು ಮಿಶ್ರ ತಳಿ ಹಸು/ಎಮ್ಮೆ ಘಟಕ ಸ್ಥಾಪನೆಗೆ ಫಲಾನುಭವಿಗಳ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ.
ಒಂದು ಮಿಶ್ರ ತಳಿ ಹಸು ಎಮ್ಮೆ ಘಟಕ ಸ್ಥಾಪನೆಗೆ 62,200 ರೂಪಾಯಿ ಘಟಕ ವೆಚ್ಚವೆಂದು ನಿಗದಿಪಡಿಸಲಾಗಿದೆ. ಘಟಕ ಸ್ಥಾಪನೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಶೇ. 33 ರಂತೆ 20,665 ರೂಪಾಯಿ ಮತ್ತು ಸಾಮಾನ್ಯ ವರ್ಗದವರಿಗೆ ಶೇ. 25 ರಂತೆ 15,500 ರೂಪಾಯಿ ಸಹಾಯಧನ ನೀಡಲಾಗುವುದು. ಉಳಿದ ಮೊತ್ತವನ್ನು ಫಲಾನುಭವಿಗಳು ವಂತಿಕೆ ಅಥವಾ ಬ್ಯಾಂಕಿನಿಂದ ಸಾಲ ಪಡೆದು ಭರಿಸಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಕಲಬುರಗಿ ಉಪನಿರ್ದೇಶಕ ಡಾ.ಎಸ್.ಡಿ. ಅವಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ಸಾಮಾನ್ಯ, ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡ, ಕೂಲಿ, ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆಯಲ್ಲಿ ತೊಡಗಿಸಿಕೊಂಡರೈತರು ಆಯಾ ತಾಲೂಕಿನಲ್ಲಿರುವ ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ (ಪಶು ಆಸ್ಪತ್ರೆ)ಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಅದರೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಬೇಕು ಕಚೇರಿಗೆ 2023ರ ಜನವರಿ 3 ರ ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ರೈತರು ಅರ್ಜಿ ಸಲ್ಲಿಸುವಂತಿಲ್ಲ
ಕಳೆದ ಐದು ವರ್ಷಗಳಲ್ಲಿ ಪಶು ಪಾಲನಾ ಇಲಾಖೆಯಲ್ಲಿ ವಿವಿಧ ಯೋಜನೆಗಳಲ್ಲಿ ಹೈನುಗಾರಿಕೆಗೆ ಸಹಾಯಧನ ಸವಲತ್ತು ಪಡೆದಿರುವ ಕುಟುಂಬಗಳು ಮತ್ತೇ ಈ ಯೋಜನೆಯ ಸವಲತ್ತು ಪಡೆಯಲು ಅರ್ಹರಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ತಾಲೂಕಿನ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು.
ಹಸು ಎಮ್ಮೆ ಘಟಕ ಸ್ಥಾಪನೆಗೆ 54 ಸಾವಿರ ರೂಪಾಯಿ ಸಹಾಯಧನ
2022-23ನೇ ಸಾಲಿನ ಹಾಲು ಉತ್ಪಾದಕರಿಗೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಕಲಬುರಗಿ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಒಂದು ಮಿಶ್ರ ತಳಿ ಹಸು ಅಥವಾ ಸುಧಾರಿತ ತಳಿ ಎಮ್ಮೆ ಘಟಕ ಸ್ಥಾಪನೆಗೂ ಅರ್ಜಿಆಹ್ವಾನಿಸಲಾಗಿದೆ.
ಇದನ್ನೂ ಓದಿ : ನಿಮ್ಮ ಹೆಸರಿನಲ್ಲಿರುವ ಪಹಣಿ ಎಷ್ಟು ವರ್ಷಗಳ ಹಳೆಯದ್ದು? ಮೊಬೈಲ್ ನಲ್ಲೇ ಚೆಕ್ ಮಾಡಿ
ವಿಶೇಷ ಘಟಕ ಯೋಜನೆಹಾಾಗೂ ಗಿರಿಜನ ಉಪೋಯಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಘಟಕ ವೆಚ್ಚ 60 ಸಾವಿರ ರೂಪಾಯಿಯಿದ್ದು, ಇದರಲ್ಲಿ ಶೇ. 90 ರಷ್ಟು ಸಹಾಯಧನ ನೀಡಲಾಗುವುದು.
ಅರ್ಹ ರೈತ ಫಲಾನುಭವಿಗಳು ತಮ್ಮ ಸಮೀಪದ ತಾಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಕಚೇರಿಯಿಂದ ಅರ್ಜಿ ಪಡೆದು ಡಿಸೆಂಬರ್ 30 ರೊಳಗೆ ಆಯಾ ತಾಲೂಕಿನ ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ದೂರವಾಣಿ ಸಂಖ್ಯೆ 08472 226139, ಮೊಬೈಲ್ ಸಂಖ್ಯೆ 9448636316 ಗೆ ಸಂಪರ್ಕಿಸಲು ಕೋರಲಾಗಿದೆ.
ಪ್ರಾಣಿ ಕಲ್ಯಾಣಿ ಸಹಾಯವಾಣಿ
ಪಶುಪಾಲನೆ, ಹೈನುಗಾರಿಕೆ, ಕುರಿ, ಕೋಳಿ ಸಾಕಾಣಿಕೆ ಕುರಿತಂತೆ ಮಾಹಿತಿ ಕೇಳಲು ದಿನದ 24 ಗಂಟೆಗಳ ಕಾಲ ರೈತರು 8277 100 200 ಗೆ ಕರೆ ಮಾಡಬಹುದು. ಈ ಉಚಿತ ಸಹಾಯವಾಣಿ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ.