ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿಯಲ್ಲಿ upto 4 lakh subsidy ನೀಡಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹೌದು, ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗಳಡಿಯಲ್ಲಿ ಸಹಾಯಧನ ಹಾಗೂ ಸಾಲ ಸೌಲಭ್ಯ ನೀಡಲಾಗುವುದು.
ಸ್ವಾವಲಂಬಿ ಸಾರಥಿ ಯೋಜನೆ
ಹಿಂದುಳಿದ ವರ್ಗಗಳ ನಿರುದ್ಯೋಗಿ ಯುವ ಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ ಬ್ಯಾಂಕುಗಳಿಂದ ಪಡೆಯುವ ಸಾಲಕ್ಕೆ ಶೇ. 50 ರಷ್ಟು ಗರಿಷ್ಠ 3 ಲಕ್ಷ ರೂಪಾಯಿಗಳ ಸಹಾಯಧನ ಮಂಜೂರು ಮಾಡಲಾಗುವುದು. ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ -1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ)ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98 ಸಾವಿರ ರೂಪಾಯಿಗಳು ಪಟ್ಟಣ ಪ್ರದೇಶದವರಿಗೆ 1.20 ಲಕ್ಷರೂಪಾಯಿಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
ಸ್ವಯಂ ಉದ್ಯೋಗಕ್ಕೆ ಅರ್ಜಿ ಆಹ್ವಾನ
ಹಿಂದುಳಿದ ವರ್ಗಕ್ಕೆ ಸೇರಿದ ನಿರುದ್ಯೋಗಿ ಫಲಾನುಭವಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ 2 ಲಕ್ಷ ರೂಪಾಯಿಯವರೆಗೆ ಆರ್ಥಿಕ ನೆರವು, ಕನಿಷ್ಠ 1 ಲಕ್ಷ ರೂಪಾಯಿಯವರಿಗೆ ಸಾಲದಲ್ಲಿ ಶೇ. 20 ರಷ್ಟು ಗರಿಷ್ಠ 20 ಸಾವಿರ ರೂಪಾಯಿಗಳ ಸಹಾಯಧನ ಹಾಗೂ ಗರಿಷ್ಠ 1 ಲಕ್ಷ ರೂಪಾಯಿಯಿಂದ 2 ಲಕ್ಷ ರೂಪಾಯಿಯವರೆಗೆ ಶೇ. 15 ರಷ್ಟು ಗರಿಷ್ಠ 30 ಸಾವಿರ ರೂಪಾಯಿ ಸಹಾಯಧನ ಉಳಿಕೆ ಮೊತ್ತಶೇ. 4 ರ ಬಡ್ಡಿದರದಲ್ಲಿ ನಿಗಮದಿಂದ ನೇರ ಸಾಲ ಸೌಲಭ್ಯ ಪಡೆಯಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.
(ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕೊಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ) ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98 ಸಾವಿರ ರೂಪಾಯಿಗಳು, ಪಟ್ಟಣ ಪ್ರದೇಶದವರಿಗೆ 1.20 ಲಕ್ಷ ರೂಪಾಯಿಗಳ ಒಳಗಿರಬೇಕು.
ಇದನ್ನೂ ಓದಿ : Bele vime ಹಣ ಬಿಡುಗಡೆ: ನಿಮಗೂ ಜಮೆಯಾಗಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ
ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಪ್ರವರ್ಗ-1 ರಡಿಯಲ್ಲಿನ ಜಾತಿಗಳಲ್ಲಿ ಬರುವ ಅರ್ಜಿದಾರರು ಕನಿಷ್ಠ 7ನೇ ತರಗತಿ ಹಾಗೂ ಉಳಿದ ಇತರ ಪ್ರವರ್ಗಗಳಲ್ಲಿನ ಅರ್ಜಿದಾರರು 10ನೇ ತರಗತಿ ವಿದ್ಯಾರ್ಹತೆ ಹೊಂದಿರಬೇಕು.
ಗಂಗಾ ಕಲ್ಯಾಣ ನೀರಾವರಿ ಯೋಜನೆ
ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಒಟ್ಟು ಘಟಕ ವೆಚ್ಚ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ 4.75 ಲಕ್ಷ ( upto 4 lakh subsidy )ಇದರಲ್ಲಿ ವಿದ್ಯುದೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ 75 ಸಾವಿರ ರೂಪಾಯಿಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು.
ಇನ್ನುಳಿದ ಜಿಲ್ಲೆಗಳಿಗೆ 3.75 ಲಕ್ಷ ಲಕ್ಷ ಇದರಲ್ಲಿ ವಿದ್ಯುದೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ 50 ಸಾವಿರ ರೂಪಾಯಿಗಳ ಸಾಲವನ್ನು ಶೇ. 4 ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು. ಈ ಯೋಜನೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಉಳಿಕೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡತೆ ಇರುವ ಕನಿಷ್ಠ 2 ಎಕರೆ ಜಮೀನು ಇರಬೇಕು.
ಅರ್ಜಿಗಳನ್ನು ಸೇವಾ ಸಿಂಧು ಮೂಲಕವೇ ಸಲ್ಲಿಸಬೇಕು. ಅಕ್ಟೋಬರ್ 31 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 080 22374832, 8050770004 ಅಥವಾ 8050770005 ಗೆ ಸಂಪರ್ಕಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗೆ https://dbcdc.karnataka.gov.in/storage/pdf-files/Dbcdcprakatane.pdf ಲಿಂಕ್ ಮೇಲೆ ಕ್ಲಿಕ್ ಮಾಡಬಹುದು.