up to 50 thousand scholarship : ಎಸ್ಎಸ್ಎಲ್ಸಿ ಪಿಯುಸಿಯಲ್ಲಿ ಫಸ್ಟ್ ಕ್ಲಾಸ್ ನಲ್ಲಿ ಪಾಸಾದವರಿಗೆ 7500 ರಿಂದ 50 ಸಾವಿರ ರೂಪಾಯಿವರೆಗೆ ಸ್ಕಾಲರಶಿಪ್ ಸಿಗಲಿದೆ
ಹೌದು, ಪ್ರಥಮ ಹಂತದಲ್ಲಿ ಪ್ರಥಮ ದರ್ಜೆಯಲ್ಲಿ ಅಂದರೆ ಫಸ್ಟ್ ಕ್ಲಾಸ್ ನಲ್ಲಿ ಪಾಸಾಗಿದ್ದ ವಿದ್ಯಾರ್ಥಿಗಳಿಗೆ 50 ಸಾವಿರ ರೂಪಾಯಿಯವರಗೆ ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಜಮೆಯಾಗಲಿದೆ. ಯಾವ ವಿದ್ಯಾರ್ಥಿಗಳಿಗೆ ಎಷ್ಟು ಅಂಕ ಸಿಗಲಿದೆ. ಅರ್ಜಿ ಎಲ್ಲಿ ಸಲ್ಲಿಸಬೇಕೆಂಬುದು ಸೇರಿದತೆ ಇನ್ನಿತರ ಎಲ್ಲಾ ಮಾಹಿತಿ ಮೊಬೈಲ್ ನಲ್ಲಿ ಸಿಗಲಿದೆ.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಸರ್ಕಾರದ ಪ್ರೋತ್ಸಾಹಧನ ಯೋಜನೆಯಡಿ ಎಸ್ಎಸ್ಎಲ್ಸಿಯಿಂದ ಸ್ನಾತಕೋತ್ತರ ಪದವೀಧರರಿಗೆ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದವರಿಗೆ 7500 ರೂಪಾಯಿಯಿಂದ 50 ಸಾವಿರ ರೂಪಾಯಿಗಳವರೆಗೆ ಆರ್ಥಿಕ ನೆರವು, ನಿಮ್ಮ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಆಗಲಿದೆ. ಪ್ರೋತ್ಸಾಹ ಧನ ಯೋಜನೆ ಅಥವಾ ಪ್ರೈಸ್ ಮನಿ ಸ್ಕಾಲರ್ಶಿಪ್ ಶಿಕ್ಷಣದ ವಿವಿಧ ಹಂತಗಳಲ್ಲಿ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಈ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ. ಹಣದ ಕೊರತೆಯಿಂದಾಗಿ ಯಾವುದೇ ವಿದ್ಯಾರ್ಥಿ ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ.
up to 50 thousand scholarship ಯಾವ ಯಾವ ವಿದ್ಯಾರ್ಥಿಗಳಿಗೆ ಎಷ್ಟು ಸ್ಕಾಲರ್ಶಿಪ್ ಸಿಗಲಿದೆ
ಪ್ರೋತ್ಸಾಹ ಧನ ಯೋಜನೆ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣದತ್ತ ಪ್ರೇರೇಪಿಲು ಈ ಯೋಜನೆ ಜಾರಿಗೆ ತರಲಾಗಿದೆ.
ಹತ್ತನೇ ತರಗತಿಯಲ್ಲಿ ಶೇ. 60 ರಿಂದ ಶೇ. 75 ರಷ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ 7500 ರೂಪಾಯಿ ನೀಡಲಾಗುವುದು.ಶೇ. 75 ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ 15 ಸಾವಿರ ರುಪಾಯಿ ನೀಡಲಾಗುತ್ತದೆ.
ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮಾ ಕೋರ್ಸ್ ಗಳನ್ನು ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ 20 ಸಾವಿರ ರೂಪಾಯಿ ಧನಸಹಾಯ ಸಿಗಲಿದೆ.
ಬಿ.ಎ, ಬಿ.ಎಸ್ಸಿ, ಬಿಕಾಂ, ನಂತರ ಯಾವುದೇ ಸಾಮಾನ್ಯ ಪದವಿಗಳನ್ನು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದವರಿಗೆ ಸರ್ಕಾರದಿಂದ 25 ಸಾವಿರ ರೂಪಾಯಿ ಪ್ರೋತ್ಸಾಹ ಧನ ದೊರೆಯಲಿದೆ. ಎಂಎ, ಎಂಎಸ್ಸಿ ಅಥವಾ ಎಂಕಾಂ ನಂತಹ ಸ್ನಾತಕೋತ್ತರ ಪದವಿಗಳನ್ನು ಯಶಸ್ವಿಯಾಗಿ ಮುಗಿಸಿದ ಅಭ್ಯರ್ಥಿಗಳಿಗೆ 30 ಸಾವಿರ ರೂಪಾಯಿ ನೀಡಲಾಗುವುದು.
ಇದನ್ನೂ ಓದಿ ಜಮೀನಿನ podi ನಕ್ಷೆ ಮೊಬೈಲ್ ನಲ್ಲಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಎಂಜನಿಯರಿಂಗ್, ವೈದ್ಯಕೀಯ, ಕೃಷಿ ವಿಜ್ಞಾನ ಅಥವಾ ಪಶು ವೈದ್ಯಕೀಯದಂತಹ ಉನ್ನತ ವೃತ್ತಿಪರ ಪದವಿಗಳನ್ನು ಪೂರ್ಣಗೊಳಿಸಿದವರಿಗೆ 35 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು. ಸ್ನಾತಕೋತ್ತರ ಪದವಿಯಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ 1 ರಿಂದ 5ನೇ ರ್ಯಾಂಕ್ ಪಡೆದ ಸಾದಕರಿಗೆ ವಿಶೇಷವಾಗಿ 50 ಸಾವಿರ ರೂಪಾಯಿ ಭಾರಿ ಮೊತ್ತದ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು
ಅಭ್ಯರ್ಥಿಯು ಕಡ್ಡಾಯವಾಗಿ ಕರ್ನಾಟಕದವರಾಗಿರಬೇಕು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದವರರಾಗಿರಬೇಕು. ಅಭ್ಯರ್ಥಿಯು ಪ್ರಥಮ ಪ್ರಯತ್ನದಲ್ಲೇ ಪೂರ್ಣಗೊಳಿಸಿರಬೇಕು. ಕನಿಷ್ಟ ಶೇ. 60 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಸೀಡಿಂಗ್ ಆಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು
ಪ್ರಥಮ ದರ್ಜೆಯಲ್ಲಿ ಪಾಸಾದ ಅಂಕಪಟ್ಟಿ, ಆಧಾರ್ ಕಾರ್ಡ್,ಬ್ಯಾಂಕ್ ಪಾಸ್ ಬುಕ್ ಪ್ರತಿ, ವಿದ್ಯಾರ್ಥಿಯ ಇತ್ತೀಚನ ಫೋಟೋ,
ಅರ್ಜಿ ಎಲ್ಲಿ ಸಲ್ಲಿಸಬೇಕು
ಅರ್ಜಿ ಸಲ್ಲಿಸಲು
https://swd.karnataka.gov.in/
ಈ ಮೇಲಿನ ಲಿಂಕ್ ಗೆ ಭೇಟಿ ನೀಡಬೇಕು. ನಂತರ ಪ್ರೈಜ್ ಮನಿ ಸ್ಕಾಲರ್ಶಿಪ್ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಆಧಾರ್ ಕಾರ್ಡ್ ಸಂಖ್ಯೆ ಮತ್ತು ವೈಯಕ್ತಿಕ ವಿವರಗಳನ್ನು ನಮೂದಿಸಿ ನೋಂದಣಿ ಮಾಡಬೇಕು. ಅರ್ಜಿಯಲ್ಲಿ ಕೇಳಲಾದ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಬೇಕು.





