subsidy for fishery vehicle purchase ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ದ್ವಿಚಕ್ರ, ತ್ರಿಚಕ್ರ ಹಾಗೂ ಇನ್ಸುಲೇಟರ್ ಟ್ರಕ್ ಖರೀದಿಗೆ ಸೇರಿದಂತೆ ಇತರ ಚಟುವಟಿಕೆಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, 2022-23 ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು ವಿವಿಧ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲು ಗುರಿಗಳನ್ನು ಹಂಚಿಕೆ ಮಾಡಿರುವುದರಿಂದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಹೊಸದಾಗಿ ಮೀನು ಕೃಷಿಕೊಳ, ಸಿಹಿನೀರು ಬಯೋಪ್ಲಾಕ್ ಘಟಕ ಸ್ಥಾಪನೆ, ದ್ವಿಚಕ್ರ ವಾಹನ, ತ್ರಿಚಕ್ರವಾಹನ ವಿಚ್ ಐಸ್ ಬಾಕ್ಸ್ ಇನ್ಸುಲೇಟರ್ ಟ್ರಕ್ ವಿತ್ ಐಸ್ ಬಾಕ್ಸ್ ಖರೀದಿಗೆ ಸಹಾಯಧನ ನೀಡಲಾಗುವುದು.
ಸಾಮಾನ್ಯ ಫಲಾನುಭವಿಗಳಿಗೆ ಶೇ. 40 ರಷ್ಟು ಸಹಾಯಧನ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಮಹಿಳಾ ಫಲಾನುಭವಿಗಳಿಗೆ ಶೇ. 60 ರಷ್ಟು ಸಹಾಯಧನ ನೀಡಲಾಗುವುದು.
subsidy for fishery vehicle purchase ಯಾದಗಿರಿ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ
ಮೀನುಗಾರಿಕೆ ಇಲಾಖೆಯಿಂದ 2022-23ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಯಾದಗಿರಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲು ಗುರಿಗಳನ್ನು ಹಂಚಿಕೆ ಮಾಡಿರುವುದರಿಂದ ಯಾದಗಿರಿ ಜಿಲ್ಲೆಯಲ್ಲಿ ಹೊಸದಾಗಿ ಮೀನು ಕೃಷಿಕೊಳ, ಬಯೋಪ್ಲಾಕ್, ದ್ವಿಚಕ್ರ ವಾಹನ, ತ್ರಿಚಕ್ರ ವಾಹನ ಇನ್ಸುಲೇಟರ್ ಟ್ರಕ್ ಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಈ ಎಂಟು ಕಾರಣಗಳಿಂದ ಈ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗಲ್ಲ ಇಲ್ಲಿದೆ ಸಂಪೂರ್ಣ ಮಾಹಿತಿ
ಈ ಯೋಜನೆಗೆ ಅರ್ಜಿ ಸಲ್ಲಿಸಲು ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 7 ರವರೆಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಯಾದಗಿರಿ, ಶಹಾಪುರ, ಸುರಪುರ, ಮತ್ತು ಮೀನುಗಾರಿಕೆ ಉಪನಿರ್ದೇಶಕರು ಯಾದಗಿರಿ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08473 253753 ಗೆ ಸಂಪರ್ಕಿಸಬಹುದು.
ದಾವಣಗೆರೆ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ
ಮೀನುಗಾರಿಕೆ ಇಲಾಖೆಯ ವತಿಯಿಂದ 2022-23ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಸಹಾಯಧನಕ್ಕಾಗಿ ಫಲಾನುಭವಿಗಳಿಂದಅರ್ಜಿ ಆಹ್ವಾನಿಸಲಾಗಿದೆ. ಮೀನು ಕೃಷಿ ಕೊಳಗಳ ನಿರ್ಮಾಣ, ಸಿಹಿನೀರು ಬಯೋಪ್ಲಾಕ್ ಘಟಕ ಸ್ಥಾಪನೆಗೆ ಸಹಾಯಧನ, ಮೀನುಕೃಷಿ ಕೊಳದ ಹೂಡಿಕೆ ವೆಚ್ಚಕ್ಕೆ ಸಹಾಯ, ಬೃಹತ್, ಮಧ್ಯಮ ಹಾಗೂ ಸಣ್ಮ ಆರ್.ಎಎಸ್ ಘಟಕ, ಮೊಟಾರ್ ಸೈಕಲ್ ವಿತ್ ಐಸ್ ಬಾಕ್ಸ್ ಖರೀದಿಗೆ ಸಹಾಯಧನ , ಮೀನು ಮಾರಾಟ ಮಳಿಗೆ ಜೊತೆಗೆ ಅಲಂಕಾರಿಕಾ ಮೀನುಗಳ ಘಟಕ ಆರಂಭಿಸಲು ಸಹಾಯಧನ ನೀಡಲಾಗುವುದು. ಅರ್ಜಿ ಸಲ್ಲಿಸಲು ಅಕ್ಚೋಬರ್ 31 ಕೊನೆಯ ದಿನವಾಗಿದೆ.
ಚಾಮರಾಜನಗರ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ
ಮೀನುಗಾರಿಕೆ ಇಲಾಖೆ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಉಪ ಯೋಜನೆಗಳಿಗೆ ನೀಡುವ ಸಹಾಯಧಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಉಪಯೋಜನೆಗಳಾದ ಮೀನುಕೃಷಿ ಕೊಳಗಳ ನಿರ್ಮಾಣ, ಬಯೋಪ್ಲಾಕ್ ಕೊಳಗಳ ನಿರ್ಮಾಣ, ಸಣ್ಣ ಮತ್ತು ಮಧ್ಯಮ ಬಯೋಪ್ಲಾಕ್ ಕೊಳಗಳ ನಿರ್ಮಾಣ, ದ್ವಿಚಕ್ರವಾಹನ ಮತ್ತು ತ್ರಿಚಕ್ರವಾಹನಗಳ ಖರೀದಿಗೆ ಸಹಾಯಧನ ನೀಡಲಾಗುವುದು.
ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ತಾಲೂಕು ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಕಚೇರಿಗೆ ಅಕ್ಟೋಬರ್ 27 ರೊಳಗೆ ಸಲ್ಲಿಸುವಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ
ಮೀನುಗಾರಿಕೆ ಇಲಾಖೆಯ ವತಿಯಿಂದ 2022-23ನೇ ಸಾಲಿನಲ್ಲಿ ಪಿಎಂಎಂಎಸ್.ವೈ ವಿವಿಧ ಯೋಜನೆಗಳ ಘಟಕಗಳಡಿ ಮೀನು ಕೃಷಿಕರಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಬಯೋಪ್ಲಾಕ್ ಕೊಳಗಳ ನಿರ್ಮಾಣ, ಮೀನು ಕೊಳಗಳ ನಿರ್ಮಾಣ ಮತ್ತು ಹೂಡಿಕೆ ವೆಚ್ಚ, ಮಧ್ಯಮ ಆರ್.ಎ.ಎಸ್ ಘಟಕ ನಿರ್ಮಾಣಕ್ಕೆ ಸೌಲಭ್ಯ ನೀಡಲಾಗುವುದು. ಅರ್ಹ ಫಲಾನುಭವಿಗಳು ಅಕ್ಟೋಬರ್ 29 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಕಚೇರಿಯ ಮೊಬೈಲ್ ನಂಬರ್ 7349711866, ಗಂಗಾವತಿ ಕಚೇರಿಯ ಮೊಬೈಲ್ ನಂಬರ್ 9632338221, ಕುಷ್ಟಗಿ ಕಚೇರಿಯ ಮೊಬೈಲ್ ನಂಬರ್ 7019520084 ಗೆ ಸಂಪರ್ಕಿಸಬಹುದು.