ಕೃಷಿ ಯಂತ್ರಗಳ ವಿತರಣೆಗೆ ಶೇ. 90 ರಷ್ಟು ಸಹಾಯಧನ

Written by Ramlinganna

Updated on:

Up to 90 percentage Subsidy  2022-23ನೇ ಸಾಲಿನ ಕೃಷಿ ಸಂಸ್ಕರಣೆ ಯೋಜನೆಯಡಿಯಲ್ಲಿ ರಾಗಿ ಕ್ಲೀನಿಂಗ್ ಮಿಲ್, ಪ್ಲೋರ್ ಮಿಲ್, ಪಲ್ವ ರೈಸರ್, ಬೇಳೆ ಮಾಡುವ ಯಂತ್ರ, ಕಬ್ಬಿನ ಹಾಲು ತೆಗೆಯುವ ಯಂತ್ರ, ಮೋಟಾರ್ ಚಾಲಿತ ಸಣ್ಣ ಎಣ್ಣೆ ಗಾಣಗಳ ಕೃಷಿ ಉಪಕರಣಗಳನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ.

ಸಾಮಾನ್ಯ ವರ್ಗದವರಿಗೆ ಶೇ. 50 ರಷ್ಟು ಸಹಾಯಧನ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಆಸಕ್ತ ರೈತರು ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಯಾವ ಯಾವ ದಾಖಲೆ ನೀಡಬೇಕು?

ಜಮೀನಿನ ಪಹಣಿ (ಆರ್.ಟಿ.ಸಿ) ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿಯೊಂದಿಗೆ ಒಂದು ಫೋಟೋ ನೀಡಬೇಕು.

ಇದನ್ನೂ ಓದಿ : Job card list ನಿಂದ ನಿಮ್ಮ ಹೆಸರು ರದ್ದುಗೊಳಿಸಲಾಗಿದೆಯೇ? ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಆಸಕ್ತ ರೈತರು ಆಯಾ ಗ್ರಾಮ ಪಂಚಾಯತಿ ವತಿಯಿಂದ ಜನರಲ್ ಲೈಸೆನ್ಸ್, ತ್ರಿಫೇಸ್ ಕರೆಂಟ್ ಬಿಲ್ ಹಾಗೂ 20 ರೂಪಾಯಿನ ಛಾಪಾ ಕಾಗದ ಒಳಗೊಂಡಂತ ಅರ್ಜಿ ಸಲ್ಲಿಸಲು ಈ ಮೂಲಕ ಕೋರಲಾಗಿದೆ.

Up to 90 percentage Subsidy ತುಂತುರು ನೀರಾವರಿ ಘಟಕ ಸ್ಥಾಪಿಸಲು ಅರ್ಜಿ ಆಹ್ವಾನ

ಲಘು ನೀರಾವರಿ ಯೋಜನೆಯಡಿಯಲ್ಲಿ 2022-23ನೇ ಸಾಲಿನಲ್ಲಿ ತುಂತುರು ನೀರಾವರಿ ಘಟಕಗಳನ್ನು ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನದಲ್ಲಿ ಪ್ರತಿ ಸೆಟ್ ಗೆ 1746 ರೂಪಾಯಿ ರೈತರ ವಂತಿಗೆ ಪಾವತಿಸಿ ಅಗತ್ಯ ದಾಖಲೆಗಳನ್ನು ನೀಡಿ ಪಡೆಯಬಹುದು.

ಹೆಚ್ಚಿನ ವಿವರಗಳಿಗೆ ಆಯಾಯ ಹೋಬಳಿಯ ಸಮೀಪದ ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ ಎಂದು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕ ಎಚ್. ನಾಗರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವಿಧ ಯಂತ್ರಗಳ ವಿತರಣೆಗೆ ಅರ್ಜಿಆಹ್ವಾನ

2022-23ನೇ ಸಾಲಿನ ಕೃಷಿ ಸಂಸ್ಕರಣೆ ಯೋಜನೆಯಡಿ ರಾಗಿ ಕ್ಲೀನಿಂಗ್ ಮಿಲ್, ಪ್ಲೋರ್ ಮಿಲ್, ಮೋಟಾರ್ಚಾಲಿತ ಸಣ್ಣ ಎಣ್ಣೆಗಾಳಗಳ ಉಪಕರಣಗಳು ಹಾಗೂ ಕಬ್ಬಿನ ಹಾಲು ತೆಗೆಯುವ ಯಂತ್ರ, ಬೇಳೆ ಮಾಡುವ ಯಂತ್ರಗಳನ್ನು ಸಹಾಯಧನದಲ್ಲಿ ವಿತರಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ನಿರ್ದೇಶಕ ಆರ್. ರಂಗನಾಥ ಪ್ರಕಟಣೆಯಲ್ಲಿ ತಿಳಿಸಿದದ್ದಾರೆ.

ಇದನ್ನೂ ಓದಿ : ನಿಮ್ಮ ಅಕ್ಕಪಕ್ಕದ ಜಮೀನು ಯಾರ ಹೆಸರಿನಿಂದ ಯಾರಿಗೆ ವರ್ಗಾವಣೆಯಾಗಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಸಾಮಾನ್ಯ ವರ್ಗದ ರೈತರಿಗೆ ಶೇ. 50 ರಷ್ಟು, ಎಸ್.ಸಿ, ಎಸ್.ಟಿಯವರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಆಸಕ್ತ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ರೈತರು ಆಯಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅಱ್ಜಿ ಸಲ್ಲಿಸಬಹುದು.

ಹೆಚ್ಚಿನ ವಿವರಗಳಿಗೆ ಸಮೀಪದ ರೈತ ಸಂಪರ್ಕೇ ಕೇಂದ್ರಕ್ಕೆ ಭೇಟಿ ನೀಡಲು ಕೋರಲಾಗಿದೆ.

ಕೃಷಿ ಉತ್ಪನ್ನಗಳ ಸಂಸ್ಕರಣಾ ಘಟಕಗಳ ವಿತರಣೆಗೆ ಅರ್ಜಿ ಆಹ್ವಾನ

2022-23ನೇ ಸಾಲಿನಲ್ಲಿ ಕೃಷಿ ಇಲಾಖೆಯಿಂದ ಕೃಷಿ ಉತ್ಪನ್ನಗಳಾದ ದಾಲಿ ಪ್ರೊಸೆಸರ್, ಪ್ಲೋರ್ ಮಿಲ್, ಮಿನಿ ರೈಸ್ ಮಿಲ್, ಮಿನಿ ಆಯಿಲ್ ಎಕ್ಸಪೆಲ್ಲರ್, ರಾಗಿ ಕ್ಲೀನಿಂಗ್ ಮಿಷನ್, ಶಾವಿಗೆ ಮಷಿನ್, ಶುಗರ್ ಕೇನ್ ಜ್ಯೂಸ್ ಮೇಕಿಂಗ್ ಮಷಿನ್ ಹಾಗೂ ಇನ್ನಿತರ ಕೃಷಿ ಸಂಸ್ಕರಣಾ ಘಟಕಗಳು ಲಭ್ಯವಿರುತ್ತದೆ. ಈ ಉಪಕರಣಗಳಿಗೆ ಸಹಾಯಧನ ಪಡೆಯಲು ಹಾಸನ ಜಿಲ್ಲೆಯ ರೈತರು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ  ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment