ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಬೆಳೆಗಳಿಗೆ ನೀರಿನ ಮಿತ ಬಳಕೆಗಾಗಿ ಹನಿ ನೀರಾವರಿ ಅಳವಡಿಸಲು ಶೇ. 90 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, 2022-23ನೇ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.  ಅರ್ಹ ರೈತರು ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬೇಕೆಂದು ಕಲಬುರಗಿ (ಜಿಲ್ಲಾ ಪಂಚಾಯತ) ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾನ್ಯ ವರ್ಗದ ರೈತರಿಗೆ ಶೇ. 75 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ. 90 ರಷ್ಟು ಸಹಾಯಧನ ನಿಗದಿಪಡಿಸಿದ್ದು, ಆಸಕ್ತಿಯುಳ್ಳ ರೈತರು ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬಹುದು.

ಇದನ್ನೂ ಓದಿ ಈ ಪಟ್ಟಿಯಲ್ಲಿರುವ ರೈತರಿಗಷ್ಟೇ ಪಿಎಂ ಕಿಸಾನ್ ಹಣ ಜಮೆ- ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಚೆಕ್ ಮಾಡಿ

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಹೋಬಳಿಮಟ್ಟದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ.

ಯಾವ ತಾಲೂಕಿನ ರೈತರು ಯಾರಿಗೆ ಸಂಪರ್ಕಿಸಬೇಕು?

ಅಫಜಲ್ಪುರ ತಾಲೂಕಿನ ರೈತರು ಮೊಬೈಲ್ ಸಂಖ್ಯೆ 7259163755, ಆಳಂದ ತಾಲೂಕಿನ ರೈತರು 9740212165, ಚಿಂಚೋಳಿ ತಾಲೂಕಿನ ರೈತರು 9341221518, ಚಿತ್ತಾಪುರ ತಾಲೂಕಿನ ರೈತರು 9845224716, ಕಲಬುರಗಿ ತಾಲೂಕಿನ ರೈತರು 9900431657 ಗೆ ಸಂಪರ್ಕಿಸಬಹುದು.ಇದೇ ರೀತಿ ಜೇವರ್ಗಿ ತಾಲೂಕಿನ ರೈತರು 9448651017, ಹಾಗೂ ಸೇಡಂ ತಾಲೂಕಿನ ರೈತರು 9945699193 ಗೆ ಸಂಪರ್ಕಿಸಬಹುದು.

ತುಂತುರು ನೀರಾವರಿ ಘಟಕ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ (sprinkler subsidy)

2022-23ನೇ ಸಾಲಿನಲ್ಲಿ ತುಂತುರು ನೀರಾವರಿ ಘಟಕಗಳನ್ನು ಸ್ಥಾಪಿಸಲು ಲಘು ನೀರಾವರಿ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು ತುಮಕೂರು ಜಿಲ್ಲೆಯ ಕೊರಟಗೇರೆ ತಾಲೂಕಿನ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಯಾವ ರೈತರಿಗೆ ಎಷ್ಟು ಸಹಾಯಧನ ನೀಡಲಾಗುವುದು? How much subsidy will get farmer)

ಸಾಮಾನ್ಯ ವರ್ಗದ ರೈತರಿಗೆ ಶೇ. 75 ರಷ್ಟು ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಸಹಾಯಧನದಲ್ಲಿ ಪ್ರತಿ ತುಂತೂರು ನೀರಾವರಿ ಘಟಕಕ್ಕೆ ರೈತರು 1746 ರೂಪಾಯಿ ವಂತಿಕೆ ಪಾವತಿಸಬೇಕು. ಉಳಿದ ಹಣವನ್ನು ಆಯಾ ಸಮುದಾಯಕ್ಕನುಗುಣವಾಗಿ ಸಹಾಯಧನ ನೀಡಲಾಗುವುದು.

ಇದನ್ನೂ ಓದಿ ಬೆಳೆ ವಿಮೆ ಮಾಡಿಸಿದ ರೈತರಿಗೆ ಯಾವ ಬೆಳೆಗೆ ಎಷ್ಟು ವಿಮೆ ಹಣ ಜಮೆ- ಮೊಬೈಲ್ ನಲ್ಲೇ ಚೆಕ್ ಮಾಡಿ

ರೈತರು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದಕ್ಕ್ಕಿಂತ ಮುಂಚಿತವಾಗಿ ಈ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದಿರಬಾರದು. ಲಭ್ಯತೆಯ ಆಧಾರದ ಮೇಲೆ ಮೊದಲು ಅರ್ಜಿ ಸಲ್ಲಿಸಿದವರಿಗೆಆದ್ಯತೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕಕೆ ಭೇಟಿ ನೀಡಬಹುದು. ಅಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ತುಂತುರು ನೀರಾವರಿ ಘಟಕಕ್ಕೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ( These document need for get subsidy)

ತುಂತುರು ನೀರಾವರಿ ಘಟಕ ಅಳವಡಿಸಲು ರೈತರ ಬಳಿ ಆಧಾರ್ ಕಾರ್ಡ್ ಇರಬೇಕು. ಜಮೀನು ಹೊಂದಿರುವ ಪಹಣಿ (ಆರ್.ಟಿ.ಸಿ) ಹೊಂದಿರಬೇಕು. ಬ್ಯಾಂಕ್ ಪಾಸ್ ಬುಕ್ ಇರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಆರ್.ಡಿ. ಸಂಖ್ಯೆ ಹೊಂದಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು. ಈ ಹಿಂದೆ ಸೌಲಭ್ಯ ಪಡೆದಿಲ್ಲವೆಂಬ ದಾಖಲೆ ಸಲ್ಲಿಸಬೇಕು.

One Reply to “ತುಂತುರು ನೀರಾವರಿ, ಹನಿ ನೀರಾವರಿ ಘಟಕ ಸ್ಥಾಪಿಸಲು ಶೇ. 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನ”

Leave a Reply

Your email address will not be published. Required fields are marked *