ತೋಟಗಾರಿಕೆ ಇಲಾಖೆಯ ವತಿಯಿಂದ 2022-23ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಹನಿ ನೀರಾವರಿ ಅಳವಡಿಸಲು ಶೇ. 90 ರವರೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋಟಗಾರಿಕೆ ಇಲಾಖೆಯ ವತಿಯಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಕೋಕೋ ಪ್ರದೇಶ ವಿಸ್ತರಣೆ, ಕಾಳು ಮೆಣಸು ಪ್ರದೇಶ ವಿಸ್ತರಣೆ (ತೆಂಗು ಮತ್ತು ಅಡಿಕೆ ಬೆಳೆಯೊಂದಿಗೆ) ಹಾಗೂ ಗೇರು ಪ್ರದೇಶ ವಿಸ್ತರಣೆ ಮತ್ತು ಹನಿ ನೀರಾವರಿ ಅಳವಡಿಸಲು ಅರ್ಜಿ ಕರೆಯಲಾಗಿದೆ.
ಆಸಕ್ತ ರೈತರು ಜೂನ್ 30 ರೊಳಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ರೈತರು 08138 295577 ಗೆ ಸಂಪರ್ಕಿಸಲು ಕೋರಲಾಗಿದೆ.
ಏನಿದು ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ?
ತೋಟಗಾರಿಕೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸುವುದು ಹಾಗೂ ಒಂದೇ ಕಡೆಯಲ್ಲಿ ಹಣ್ಣುಗಳನ್ನು ಬೆಳೆಯುವ ಮೂಲಕ ರೈತರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಲು ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯನ್ನು ರಾಜ್ಯ ಸರ್ಕಾರವು ಚಾಲನೆ ನೀಡಿದೆ.
ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಅಳವಡಿಸುವ ಎಲ್ಲಾ ವರ್ಗದ ರೈತರಿಗೆ ನಿಯಮಾನುಸಾರ ಶೇ. 90 ರವರೆಗೆ ಸಹಾಯಧನವನ್ನು ಗರಿಷ್ಠ ಮಿತಿಗೆ ಒಳಪಟ್ಟು ನೀಡಲಾಗುವುದು. ಪ್ರತಿ ಫಲಾನುಭವಿಗೆ ಗರಿಷ್ಠ 5 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ನೀಡಲಾಗುವುದು. ಎಲ್ಲಾ ವರ್ಗದ ಅರ್ಹ ರೈತ ಕುಟುಂಬಗಳಿಗೆ ಮೊದಲ 2 ಹೆಕ್ಟೇರ್ ಪ್ರದೇಶಕ್ಕೆ ಶೇ. 90 ರಂತೆ ಮತ್ತು ಉಳಿದ 3 ಹೆಕ್ಟೇರ್ ಪ್ರದೇಶಕ್ಕೆ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಶೇಕಡವಾರು ಮಿತಿಯೊಳಗೆ ಸಹಾಯಧನ ನೀಡಾಲಗುವುದು. ಹೂ ಬೆಳೆಗಳಿಗೆ ಗರಿಷ್ಠ 2 ಹೆಕ್ಟೇರ್ ವರೆಗೆ ಸಹಾಯಧನ ನೀಡಲಾಗುವುದು.
ಇದನ್ನೂಓದಿ : ಬೆಳೆ ವಿಮೆ ಮಾಡಿಸಿದ ನಂತರ ಬೆಳೆ ವಿಮೆ ಹಣ ಜಮೆಯಾಗಲು ರೈತರೇನು ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ
ಅಡಕೆ ಹಾಗೂ ತೆಂಗು ತೋಟಗಳಿಗೆ ಮಿಶ್ರ ಬೆಳೆಗಳನ್ನು ಬೆಳೆದು ಈ ಬೆಳೆಗೆ ಹನಿ ನೀರಾವರಿ ಅಳವಡಿಸಿದಲ್ಲಿ ಅಂತಹ ರೈತರಿಗೆ ಆದ್ಯತೆ ನೀಡಲಾಗುವುದು.
ಹನಿ ನೀರಾವರಿಯಿಂದಾಗುವ ಪ್ರಯೋಜನ
ತೋಟಗಾರಿಕೆಯ ಯಾವುದೇ ಬೆಳೆಗಳಿಗೆ ಸೂಕ್ಮ ನೀರಾವರಿ ಪದ್ದತಿಯನ್ನು ಬಳಸಿದಲ್ಲಿ ನೀರಿನ ಮಿತವ್ಯಯವಾಗುವುದು. ರೈತ ವಿದ್ಯುತ್ ಮತ್ತು ಕೂಲಿ ವೆಚ್ಚವೂ ಕಡಿಮೆಯಾಗುತ್ತದೆ. ಸೂಕ್ಮ ನೀರಾವರಿಯಲ್ಲಿ ರಸಾವರಿ ಪದ್ಧತಿಯ ಮೂಲಕ ರಾಸಾಯನಿಕ ಗೊಬ್ಬರ ಬಳಕೆಯಲ್ಲಿ ಶೇ. 30-40 ರಷ್ಠು ಮಿತವ್ಯಯ ಸಾಧಿಸಬಹುದುದಾಗಿದೆ. ಈ ಪದ್ದತಿಯಿಂದ ಬೆಳೆಯುವ ಯಾವುದೇ ಬೆಳೆಗಳ ಇಳುವರಿ ಹಾಗೂ ಉತ್ಪಾದನೆಯನ್ನು ಹೆಚ್ಚಿ,ಸಬಹುದು.
ಅರ್ಜಿ ಸಲ್ಲಿಸಲು ರೈತರು ಯಾವ ಯಾವ ದಾಖಲೆ ಸಲ್ಲಿಸಬೇಕು?
ತೋಟಗಾರಿಕೆ ಬೆಳೆ ಬೆಳೆಯುವ ಫಲಾನುಭವಿ ರೈತ ಹೆಸರಿನಲ್ಲಿ ಜಮೀನು ಇರಬೇಕು. ಜಂಟಿ ಖಾತೆಯಿದ್ದಲ್ಲಿ ಇತರ ಖಾತೆದಾರರ ಒಪ್ಪಿಗೆ ಪತ್ರ ಪಡೆದುಕೊಳ್ಳಬೇಕು. ತೋಟಗಳಲ್ಲಿ ಸೂಕ್ಮ ನೀರಾವರಿ ಘಟಕಗಳು ಕಾರ್ಯನಿರ್ವಹಿಸಲು ಅಗತ್ಯ ವಿದ್ಯುತ್ ಶಕ್ತಿ ಇಲ್ಲದಿದ್ದಲ್ಲಿ ಇತರ ಶಕ್ತಿಮೂಲವನ್ನು ಹೊಂದಿರಬೇಕು.
ತೋಟಗಾರಿಕೆ ಬೆಳೆಗಾರರು ನಿಗದಿತ ನಮೂನೆಯಲ್ಲಿ ನೋಂದಣಿ ಅರ್ಜಿಯನ್ನು ತೋಟಗಾರಿಕೆ ಇಲಾಖೆಗೆ ಸಲ್ಲಿಸಬೇಕು. ಅರ್ಜಿಸಲ್ಲಿಸುವಾಗ ಪಹಣಿ, ಚಕ್ ಬಂದಿ, ನೀರಿನ ಮೂಲ, ಮಣ್ಣು ಮತ್ತು ವಿಶ್ಲೇಷಣಾ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹೊಂದಿರಬೇಕು. ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದವರಾಗಿದ್ದರೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು.ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿ ಇರಬೇಕು. ರೈತರು ಅರ್ಜಿ ಸಲ್ಲಿಸುವಾಗ ಯಾವ ಯಾವ ದಾಖಲೆ ಸಲ್ಲಿಸಬೇಕು ಹಾಗೂ ಸಹಾಯಧನ ಪಡೆಯುವ ಪ್ರಕ್ರಿಯೆ ಬಗ್ಗೆ ತಿಳಿದುಕೊಳ್ಳಬೇಕು.