ಎಸ್.ಎಮ್.ಎ.ಎಮ್ ಯೋಜನೆಯಡಿಯಲ್ಲಿ ಕೃಷಿ ಇಲಾಖೆಯ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಖರೀದಿಗೆ ಶೇ. 90 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರು ಅರ್ಜಿ ಸಲ್ಲಿಸಿ ಕೃಷಿ ಯಂತ್ರೋಪಕರಣಗಳನ್ನು ಪಡೆದುಕೊಳ್ಳಬಹುದು.

ಸಾಮಾನ್ಯ ರೈತರಿಗೆ ಶೇ. 50 ರಷ್ಟು ಸಬ್ಸಿಡಿ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು.

ಕಳೆ ಕತ್ತರಿಸುವ, ಹುಲ್ಲು ಕತ್ತರಿಸುವ ಯಂತ್ರ, ರೋಟರಿ, ವವರ್ ವೀಡರ್, ಯಂತ್ರ ಚಾಲಿತ ಕೈಗಾಡಿಗಳು, ಡೀಸೆಲ್ ಪಂಪ್ಸೆಟ್, ಹಿಟ್ಟಿನ ಗಿರಣಿ ಯಂತ್ರ, ಗುಂಡಿ ತೆಗೆದಯುವ ಡಿಗ್ಗರ್, ಪವರ್ ಟಿಲ್ಲರ್ ಇತ್ಯಾದಿ ಉಪಕರಣಗಳ ಖರೀದಿಗೆ ಸಹಾಯಧನ ನೀಡಲಾಗುವುದು.

ರೈತರು ಪಹಣಿ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ಇತರೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ ಜಮೀನಿನ ಓರಿಜಿನಲ್ ಸರ್ವೆ ಟಿಪ್ಪಣಿ ಪುಸ್ತಕ ಮೊಬೈಲಿನಲ್ಲಿ ಒಂದೇ ನಿಮಿಷದಲ್ಲಿ ಡೌನ್ಲೋಡ್ ಮಾಡಿ

ಈಗಾಗಲೇ ಸೌಲಭ್ಯ ಪಡೆದುಕೊಂಡವರಿಗೆ ಸಬ್ಸಿಡಿ ನೀಡಲಾಗುವುದಿಲ್ಲ. ಹೆಚ್ಚಿನ ವಿವರಗಳಿಗೆ ಕೃಷಿ ಇಲಾಖೆ, ರೈತ ಸಂಪರ್ಕ ಕೇಂದ್ರಕ್ಕೆ ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಚಿನ್ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಿಯಾಯಿತಿ ತರದಲ್ಲಿ ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ

2022-23ನೇ ಸಾಲಿನ ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿ ಮತ್ತು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರಿಯಾಯಿತಿ ದರದಲ್ಲಿ ಕೃಷಿ ಯಂತ್ರಗಳನ್ನು ಸಹಾಯಧನದಲ್ಲಿ ವಿತರಣೆ ಮಾಡಲಾಗುತ್ತಿದೆ ಎಂದು  ಮಾಲೂರು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕ ಚಂದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಅರ್ಹ ರೈತರು ಅರ್ಜಿ ಸಲ್ಲಿಸಬಹುದು. ಸಾಮಾನ್ಯ ವರ್ಗದವರಿಗೆ ಶೇ. 50 ರಷ್ಟು ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 90 ರಷ್ಟು ಸಹಾಯಧನವಿದೆ.

ಆಸಕ್ತರು ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಫೋಟೋ, ಪಹಣಿ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿ ಸಲ್ಲಿಸಬೇಕು. 20 ರೂಪಾಯಿಯ ಛಾಪಾ ಕಾಗದ, ಟ್ರ್ಯಾಕ್ಟರ್ ಚಾಲಿತ ಉಪಕರಣಗಳಿಗೆ ಆರ್.ಸಿ ಬುಕ್ ಪ್ರತಿ ಲಗತ್ತಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಲಗತ್ತಿಸಬೇಕು. ಕೃಷಿ ಸಂಸ್ಕರಣಾ ಉಪಕರಣಗಳಿಗೆ ಎಲ್ಲಾದಾಖಲಾತಿಗಳೊಂದಿಗೆ ಒಂದು ಫೋಟೋ, ಆಯಾ ಗ್ರಾಮ ಪಂಚಾಯತ್ ವತಿಯಿಂದ ಜನರಲ್ ಲೈಸೆನ್ಸ್, ತ್ರಿಫೇಸ್ ಕರೆಂಟ್ ಬಿಲ್ ಒಳಗೊಂಡಂತೆ ಅರ್ಜಿ ಸಲ್ಲಿಸಲು ಈ ಮೂಲಕ ಕೋರಲಾಗಿದೆ.

ಇದನ್ನೂ ಓದಿ ಯಾವ ಯೋಜನೆಯಿಂದ ಎಷ್ಟು ಸಬ್ಸಿಡಿ ಸಾಲ ಪಡೆಯಲು ಅರ್ಹರಾಗಿದ್ದೀರೀ? ಇಲ್ಲೇ ಚೆಕ್ ಮಾಡಿ

ತಾಲೂಕಿನಲ್ಲಿ ಸೂಕ್ಷ್ಮ ನೀರಾವರಿ ಯೋಜನೆಯಡಿ ಹನಿ ನೀರಾವರಿ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಆಸಕ್ತ ರೈತರು ಸೂಕ್ತ ದಾಖಲೆಗಳೊಂದಿಗೆ ರೈತ ಸಂಪರ್ಕಕೇಂದ್ರ್ಕಕೆ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.

ತುಮಕೂರು ಜಿಲ್ಲೆಯ ರೈತರಿಂದ ತುಂತುರು ನೀರಾವರಿ ಘಟಕ್ಕೆ ಅರ್ಜಿ ಅಹ್ವಾನ

ತುಮಕೂರು ಜಿಲ್ಲೆಯ ಕೃಷಿ ಇಲಾಖೆಯ ವತಿಯಿಂದ 2022-23ನೇ ಸಾಲಿನ ಸೂಕ್ಷ್ಮ ನೀರಾವರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಶೇ. 90 ರಷ್ಟು ರಿಯಾಯಿತಿ ದರದಲ್ಲಿ ತುಂತುರು ನೀರಾವರಿ ಘಟಕಗಳನ್ನು ವಿತರಿಸುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.

ರೈತರು ಪಹಣಿ, ಆಧಾರ್ ಕಾರ್ಡ್, ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಪುಸ್ತಕದ ಝರಾಕ್ಸ್ ಪ್ರತಿ ಲಗತ್ತಿಸಬೇಕು. ಬೆಳೆ ಹಾಗೂ ಕೊಳವೆ ಬಾವಿ ದೃಢೀಕರಣ ಪತ್ರಗಳ ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಯ ಹೋಬಳಿ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಲು ತುಮಕೂರು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *