ತೋಟಗಾರಿಕೆ ಇಲಾಖೆಯಲ್ಲಿ 2022-23ನೇ ಸಾಲಿನಲ್ಲಿ ಪಿ.ಎಂ.ಕೆ.ಎಸ್.ವೈ ಯೋಜನೆಯಡಿಯಲ್ಲಿ ಹನಿ ನೀರಾವರಿ, ತುಂತುರು ನೀರಾವರಿ, ಕೃಷಿ ಹೊಂಡ ಸೇರಿದಂತೆ ಇನ್ನಿತರ ಚಟುವಟಿಕೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಪ್ರತಿ ವರ್ಷದಂತೆ ಈ ವರ್ಷವೂ ಸಹ ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಗಳಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕು ಹಾಗೂ ಚಾಮರಾಜಗನರ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 26 ಕೊನೆಯ ದಿನವಾಗಿದೆ. ಅರ್ಜಿಗಳನ್ನು ಡಿಸೆಂಬಸ 19 ರಿಂದ 26 ರವರೆಗೆ ಸ್ವೀಕರಿಸಲಾಗುವುದು.
2022-23ನೇ ಸಾಲಿನಲ್ಲಿ ಪಿಎಂಕೆಎಸ್ವೈ ಯೋಜನೆಯಡಿ ಹನಿ ನೀರಾವರಿ, ತುಂತುರು ನೀರಾವರಿಗೆ ಸಹಾಯಧನ ನೀಡಲಾಗುವುದು. ತಾಳೆ ಬೆಳೆ ಅಭಿವೃದ್ಧಿಗೆ ಸಹಾಯಧನ ನೀಡಲಾಗುವುದು. ಇದರೊಂದಿಗೆ ಆರ್.ಕೆ.ವಿವೈ ಯೋಜನೆಯಡಿ ಸೋಲಾರ್ ಟನಾಲ್ ಡ್ರೈಯರ್ ಹಾಗೂ ಸಹಾಯಧನ ನೀಡಲಾಗುವುದು. ಜಿಲ್ಲಾವಲಯ ಯೋಜನೆಯಡಿ ಜೇನು ಪೆಟ್ಟಿಗೆಗೆ ಸಹಾಯದನ ನೀಡಲಾಗುವುದು.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಮುದಾಯ ಕೃಷಿ ಹೊಂಡ ಕಾರ್ಯಕ್ರಮ ಮತ್ತು ಕಾಳುಮೆಣಸು ಬೆಳೆಗೆ ಲಘು ಪೋಷಕಾಂಶ ಪರಿಕರ ವಿತರಣೆ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ : ನಿಮ್ಮ ಸರ್ವೆ ನಂಬರ್ ಅಕ್ಕಪಕ್ಕದ ಯಾವ ಮಾಲಿಕರಿಗೆ ಎಷ್ಟು ಜಮೀನಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ
ನರಸಿಂಹರಾಜಪುರ ತಾಲೂಕಿನ ರೈತರು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಇಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರೈತರು ಮೊಬೈಲ್ ನಂಬರ್ 9741814440, 9008102037 ಗೆ ಸಂಪರ್ಕಿಸಲು ಕೋರಲಾಗಿದೆ.
ಚಾಮರಾಜನಗರ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆಯ ವತಿಯಿಂದ 2022-23ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ, ಸೂಕ್ಷ್ಮ ಹನಿ ನೀರಾವರಿ (ಪಿಎಂಕೆಎಸ್ವೈ) ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಉಪಕರಣಗಳಿಗೆ ಸಹಾಯಧನ ನೀಡಲು ಅರ್ಜಿ ಅಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಈಗಾಗಲೇ ಈ ಯೋಜನೆಯಡಿ ಸಹಾಯಧನ ಪಡೆದು 7 ವರ್ಷ ಪೂರ್ಣಗೊಂಡಿದ್ದಲ್ಲಿಎರಡನೇ ಬಾರಿ ಅದೇ ಫಲಾನುಭವಿಗಳು ಹನಿ ನೀರಾವರಿ ಪದ್ಧತಿ ಅಳವಡಿಸಿಕೊಳ್ಳಲು ಸಹಾಯಧ ನೀಡಲಾಗುವುದು.
ಆಸಕ್ತ ರೈತರು ಅಗತ್ಯ ದಾಖಲೆಗಳನ್ನು ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಲ್ಲಿಸಿ ಕಾರ್ಯದೇಶ ಪಡೆದು ತೋಟಗಾರಿಕೆ ಇಲಾಖೆ ಅನುಮೋದಿತ ಡ್ರಿಪ್ ಕಂಪನಿ, ಸಂಸ್ಥೆಗಳಿಂದ ಐಎಸ್ಐ ಗುಣಮಟ್ಟದ ಹನಿ ನೀರಾವರಿ ಉಪಕರಣ ಅಳವಡಿಸಿಕೊಂಡು ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗದಗ ಜಿಲ್ಲೆಯಿಂದಲೂ ಅರ್ಜಿ ಆಹ್ವಾನ
ಗದಗ ಜಿಲ್ಲೆಯ ತೋಟಗಾರಿಕೆ ಇಲಾಖೆಯ ವತಿಯಿಂದಲೂ ಹನಿ ನೀರಾವರಿ ಘಟಕ ಅಳವಡಿಸಲು ಸಹಾಯಧನ ನೀಡಲಾಗುವುದು. ಇದರೊಂದಿಗೆ ತೋಟಗಾರಿಕೆ ಬೆಳೆಗಳ ವಿಸ್ತರಣೆಗೆ ಸಹಾಯಧನ ನೀಡಲಾಗುವುದು. ಈ ಯೋಜನೆಯಡಿಯಲ್ಲಿ ಸಾಮಾನ್ಯ ವರ್ಗದ ರೈತರಿಗೆ 2 ಹೆಕ್ಟೇರಿಗೆ ಶೇ. 75 ರಷ್ಟು,2 ರಿಂದ 5 ಹೆಕ್ಟೇರಿಗೆ ಶೇ. 45 ರಷ್ಟು ಸಹಾಯಧ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ 2 ಹೆಕ್ಟೇರ್ ವರೆಗೆಶೇ. 90 ರಷ್ಟು ಸಹಾಯಧನ ನೀಡಲಾಗುವುದು.
ಸಹಾಯಧನ ಪಡೆಯಲು ಬೇಕಾಗುವ ದಾಖಲೆಗಳು
ತೋಟಗಾರಿಕೆ ಇಲಾಖೆಯ ವತಿಯಿಂದ ಸಹಾಯಧನ ಪಡೆಯಲು ರೈತರ ಬಳಿ ಆಧಾರ್ ಕಾರ್ಡ್ ಇರಬೇಕು. ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿ ಇರಬೇಕು. ಜಮೀನಿನ ಪಹಣಿ ಇರಬೇಕು. ಇತ್ತೀಚಿನ ಫೋಟೋ ಇರಬೇಕು. ಇನ್ನಿತರ ದಾಖಲಗಳನ್ನು ತೋಟಗಾರಿಕೆ ಇಲಾಖೆಯಲ್ಲಿ ವಿಚಾರಿಸಿ ಅರ್ಜಿಯೊಂದಿಗೆ ಸಲ್ಲಿಸಬೇಕು.