ಹನಿ ನೀರಾವರಿ ಘಟಕಕ್ಕೆ ಶೇ. 90 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನ

Written by Ramlinganna

Updated on:

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಘಟಕಗಳನ್ನು ಅಳವಡಿಸಲು ಶೇ. 90 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ರೈತರು ಕಡಿಮೆ ಖರ್ಚಿನಲ್ಲಿ ಹೆಚ್ಚು ಇಳುವರಿ ಪಡೆಯುವುದಕ್ಕಾಗಿ ಹಾಗೂ ನೀರಿನ ಸಮರ್ಪಕ ಬಳಕೆಗಾಗಿ ಶೇ.45 ರಿಂದ 90 ರವರೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಘಟಕಗಳನ್ನು ಅಡಿಕೆ ಬೆಳೆ ಹೊರತುಪಡಿಸಿ ಇತರೆ ತೋಟಗಾರಿಕೆ ಬೆಳೆಗಳಿಗೆ ಅಳವಡಿಸಿಕೊಳ್ಳಲು ಸೌಲಭ್ಯ ಕಲ್ಪಿಸಲಾಗುವುದು. ರೈತರು ನೀರಿನ ಸಮರ್ಪಕ ಬಳಕೆಯೊಂದಿಗೆ ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆದು ಅವರ ಆರ್ಥಿಕಮಟ್ಟ ಸುಧಾರಿಸಲು ಇದು ಸಹಕಾರಿಯಾಗಿದೆ ಎಂದು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಎಚ್.ಆರ್. ಚಂದ್ರಶೇಖರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಯೋಜನೆಯಡಿ ಎಲ್ಲಾ ವರ್ಗದ ರೈತರು ಅರ್ಜಿ ಸಲ್ಲಿಸಬಹುದು. ಹನಿ ನೀರಾವರಿ ಅಳವಡಿಕೆಗೆ ಪ್ರತಿ ಫಲಾನುಭವಿಗೆ ಗರಿಷ್ಠ 5 ಹೆಕ್ಟೇರ್ ಪ್ರದೇಶದವರಿಗೆ ಹಾಗೂ ತರಕಾರಿ ಮತ್ತು ವಾಣಿಜ್ಯ ಹೂ ಬೆಳೆಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶದವರಿಗೆ ಇತರೆ ವರ್ಗದ ರೈತರಿಗೆ ಶೇ. 75 ರಷ್ಟು ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡ  ವರ್ಗದ ರೈತರಿಗೆ ಶೇ. 90 ರಷ್ಟು ಮತ್ತು ನಂತರದ 3 ಹೆಕ್ಟೇರ್ ಪ್ರದೇಶದವರೆಗೆ ಎಲ್ಲಾ ವರ್ಗದ ರೈತರಿಗೆ ಶೇ. 45 ರಷ್ಟು ಸಹಾಯಧನ ನೀಡಲಾಗುವುದು.

ಇದನ್ನೂ ಓದಿ ನಿಮ್ಮ ಹೊಲದ ಸರ್ವೆ ಟಿಪ್ಪಣಿ, ಪೋಡಿ ಟಿಪ್ಪಣಿ ಪುಸ್ತಕ ಮೊಬೈಲ್ ನಲ್ಲೇ ಚೆಕ್ ಮಾಡಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಮಾತ್ರ ಈ ಹಿಂದೆ ಅಳವಡಿಸಿಕೊಂಡಿದ್ದಸೂಕ್ಷ್ಮ ನೀರಾವರಿ ಪದ್ದತಿ ಹಾಳಾಗಿದಲ್ಲಿ7 ವರ್ಷಗಳ ನಂತರ ಅದೇ ಜಮೀನಿಗೆ ಮತ್ತೊಮ್ಮೆ ಸೂಕ್ಷ್ಮ ನೀರಾವರಿ ಪದ್ಧತಿ ಅಳವಡಿಸಿಕೊಂಡಲ್ಲಿ ಸಹಾಯಧನ ನೀಡಲಾಗುವುದು. ಅಲ್ಲದೆ ವಿಕಲಚೇತನರಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮಹಿಳೆ ಮತ್ತು ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಆದ್ಯತೆ ಮೇರಿಗೆ ಸಹಾಯಧನ ವಿತರಿಸಲಾಗುವುದು.

ತೋಟಗಾರಿಕೆ ಇಲಾಖೆಯಿಂದ ಅನುಮೋದನೆಗೊಂಡಿರುವ ಕಂಪನಿಗಳಿಂದ ಮಾತ್ರ ಹನಿ ನೀರಾವರಿ ಘಟಕಗಳನ್ನು ಅಳವಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ಈ ಯೋಜನೆಯಡಿಯಲ್ಲಿ ಆಸಕ್ತ ರೈತ ಫಲಾನುಭವಿಗಳು ತಾಲೂಕು ತೋಟಗಾರಿಕೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬೇಕೆಂದು ಚಂದ್ರಶೇಖರ ಮನವಿ ಮಾಡಿದ್ದಾರೆ.

ಸೂಕ್ಷ್ಮ ನೀರಾವರಿ ಘಟಕ ಪಡೆಯಲು ಬೇಕಾಗುವ ಅರ್ಹತೆಗಳು

ಸೂಕ್ಷ್ಮ ನೀರಾವರಿ ಘಟಕ ಸೌಲಭ್ಯ ಪಡೆಯಲು ರೈತರು ಫ್ರೂಟ್ಸ್ ನಲ್ಲಿ ನೋಂದಾಯಿಸಿಕೊಳ್ಳಬೇಕು. ನೋಂದಾಯಿಸಿಕೊಂಡ ರೈತರು ಮಾತ್ರಈ ಸವಲತ್ತು ಪಡೆಯಲು ಅರ್ಹರಾಗಿರುತ್ತಾರೆ. ರೈತರು ನಿಗದಿತ ಅರ್ಜಿಯೊಂದಿಗೆ ಜಮೀನಿನ ಪಹಣಿ (ಆರ್.ಟಿ.ಸಿ) ಪ್ರಮಾಣ ಪತ್ರ ಇರಬೇಕು. ಚೆಕ್ಕಬಂಧಿ, ನೀರಿನ ಲಭ್ಯತೆಯ ಪ್ರಮಾಣಪಪತ್ರ (ನೀರಿನ ಮೂಲದ ಪತ್ರ ಇರಬೇಕು) ಆಧಾರ್ ಕಾರ್ಡ್ ಪ್ರತಿ ಇರಬೇಕು. ಚುನಾವಣಾ ಗುರುತಿನ ಚೀಟಿ ಇರಬೇಕು. ಇದರೊಂದಿಗೆ ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿ ಸಲ್ಲಿಸಬೇಕು. ರೈತರ ವಂತಿಕೆ ಪಾವತಿಸಿದ ಬಗ್ಗೆ ರಸೀದಿ ಹೊಂದಿರಬೇಕು.

ಅನುದಾನದ ಲಭ್ಯತೆಯ ಆಧಾರದ ಮೇಲೆ ಸೂಕ್ಷ್ಮ ನೀರಾವರಿ ಘಟಕ ವಿತರಣೆ

ಸೂಕ್ಷ್ಮ ನೀರಾವರಿ ಘಟಕಕ್ಕೆ ಅರ್ಜಿ ಸಲ್ಲಿಸಿದ  ರೈತರಿಗೆ ಅನುದಾನದ ಲಭ್ಯತೆಯ ಆಧಾರದ ಮೇಲೆ ಸಹಾಯಕ ಕೃಷಿ ನಿರ್ದೇಶಕರು ರೈತರ ವಂತಿಕೆ ಪಾವತಿಸಲು ಮಂಜೂರಾತಿ ಪತ್ರ (Sanction letter) ರೈತರಿಗೆ ನೀಡಲಾಗುವುದು. ರೈತರ ವಂತಿಕೆಯನ್ನು ರೈತರ ಬ್ಯಾಂಕ್ ಖಾತೆಯಿಂದ ಆರ್.ಟಿ.ಜಿ.ಎಸ್. ಅಥವಾ NEFT ಮೂಲಕವೇ ತಯಾರಕ ಸಂಸ್ಥೆಗೆ ಪಾವತಿಸಲು ಕ್ರಮವಹಿಸಲಾಗುವುದು.

Leave a Comment