ರೈತರಿಗೆ ಶೇ. 90 ರಷ್ಟು ಸಬ್ಸಿಡಿಯಲ್ಲಿ ಸ್ಪ್ರಿಂಕ್ಲರ್ ನೀಡಲು ಅರ್ಜಿ ಆಹ್ವಾನ

Written by Ramlinganna

Updated on:

subsidy for Sprinkler unit ಅಟಲ್ ಭೂ ಜಲ್ ಲಘು ನೀರಾವರಿ ಯೋಜನೆಯಡಿ ಕೃಷಿ ಇಲಾಖೆಯಿಂದ ಶೇ. 90 ರಷ್ಟು ಸಹಾಯಧನದಲ್ಲಿ ತುಂತುರು ನೀರಾವರಿ ಸ್ಪ್ರಿಂಕ್ಲರ್ ಸೆಟ್ ಗಳನ್ನು ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತುಂತುರು ನೀರಾವರಿ, ಹನಿ ನೀರಾವರಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರಸೀಕೆರೆ ತಾಲೂಕಿನಲ್ಲಿ ಅಟಲ್ ಭೂ ಜಲ್ ಲಘು ನೀರಾವರಿ ಯೋಜನೆಯಡಿ ಸ್ಪ್ರಿಂಕ್ಲರ್ ಸೆಟ್ ಒದಗಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಎ.ಪಿ. ಶಿವಕುಮಾರ್ ಮನವಿ ಮಾಡಿದ್ದಾರೆ.

ಆಸಕ್ತ ರೈತರು ನಿಗದಿತ ಅರ್ಜಿ ನಮೂನೆಯಲ್ಲಿ ಇತ್ತೀಚಿನ ಭಾವಚಿತ್ರದೊಂದಿಗೆ ಅರ್ಜಿಯನ್ನು ಲಗತ್ತಿರಿಸಿ ತಮ್ಮ ಜಮೀನಿನ ಪಹಣಿ ಪ್ರತಿ, ಆಧಾರ್ ನಕಲು ಪ್ರತಿ, ಜಾತಿ ಪ್ರಮಾಣ ಪತ್ರ, ಇಚ್ಚಿಸುವ ಸರಬರಾಜು ಸಂಸ್ಥೆಗೆ ವಂತಿಕೆ ಹಣವನ್ನು ಪಾವತಿಸುವ ಬ್ಯಾಂಕ್ ಪಾಸ್ ಬುಕ್ ಪ್ರತಿ, ನೀರಿನ ಲಭ್ಯತೆ ಬಗ್ಗೆ ದೃಢೀಕರಣ ಪ್ರತಿ, ರೇಷ್ಮೆ ಹಾಗೂ ಇತರ ದಾಖಲೆಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳು ಅಥವಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಮನಗರ ಜಿಲ್ಲೆಯಿಂದ ಹನಿ ನೀರಾವರಿಗೆ ಅರ್ಜಿ ಆಹ್ವಾನ

ರಾಮನಗರ ಜಿಲ್ಲೆಯ ತೋಟಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಹನಿ ನೀರಾವರಿ ಕಾರ್ಯಕ್ರಮದಡಿ ಎಲ್ಲಾ ರೀತಿಯ ತೋಟಗಾರಿಕೆ ಬೆಳೆಗಳಿಗೆ (ಅಡಿಕೆ ಬೆಳೆಗೆ ಹೊರತುಪಡಿಸಿ) ಸಹಾಯಧನ ನೀಡಲಾಗುವುದು.

ಸಾಮಾನ್ಯ ವರ್ಗದ ರೈತರಿಗೆ ಮೊದಲು 2 ಹೆಕ್ಟೇರ್ ಗೆ ಶೇ. 75 ರಷ್ಟು ಹಾಗೂ 2 ಹೆಕ್ಟೇರ್ ಯಿಂದ 5 ಹೆಕ್ಟೇರ್ ವರೆಗೆ ಶೇ. 45 ರಂತೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ ನಿಮ್ಮ ಜಮೀನಿನ ಒರಿಜಿನಲ್ ಟಿಪ್ಪಣಿ ಮೊಬೈಲ್ ನಲ್ಲೇ ಚೆಕ್ ಮಾಡಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಮೊದಲು 2 ಹೆಕ್ಟೇರಿಗೆ ಶೇ. 90 ರಷ್ಟು ಹಾಗೂ 2 ಹೆಕ್ಟೇರ್ ಯಿಂದ 5 ಹೆಕ್ಟೇರ್ ವರೆಗೆ ಶೇ. 45 ರಷ್ಟು ಸಬ್ಸಿಡಿ ನೀಡಲಾಗುವುದು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರು ಈಗಾಗಲೇ ಸಹಾಯಧನ ಪಡೆದು 7 ವರ್ಷಗಳು ಕಳೆದಿದ್ದರೆ ಮತ್ತೊಮ್ಮೆ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ.

ಹೆಚ್ಚಿನ ಮಾಹಿತಿಗೆ ಕಸಬಾ, ಮಳೂರ, ವಿರೂಪಾಕ್ಷಿಪುರ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಚನ್ನಪಟ್ಟಣ ಈ ಕಚೇರಿಯನ್ನು ಸಂಪರ್ಕಿಸುವಂತೆ ಚನ್ನಪಟ್ಟಣ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

subsidy for Sprinkler unit ಕೃಷಿ ಹೊಂಡ, ತುಂತುರು ನೀರಾವರಿ ಘಟಕ ನಿರ್ಮಾಣಕ್ಕೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ, ಬದು ನಿರ್ಮಾಣ, ಪಾಲಿಥಿನ್ ಲೈನಿಂಗ್, ತಂತಿಬೇಲಿ, ಡೀಸೆಲ್ ಪಂಪ್ ಸೆಟ್ ಹಾಗೂ ತುಂತುರು ನೀರಾವರಿ ಘಟಕಗಳನ್ನು ಅಳವಡಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಚನ್ನರಾಯಪಟ್ಟಣ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಂ. ಎಸ್. ಜನಾರ್ಧನ್ ತಿಳಿಸಿದ್ದಾರೆ.

ರೈತರ ನೋಂದಣಿ ಸಂಖ್ಯೆ ಕಡ್ಡಾಯವಾಗಿದ್ದು, ಎಫ್ಐಡಿ ಹೊಂದಿರುವವರಿಗೆ ಮಾತ್ರಕೇಂದ್ರದ ಪ್ರಯೋಜನಗಳ ಪ್ರಯೋಜನ ದೊರೆಯಲಿದೆ.

ರೈತರಿಗೆ ಶೇ. 50 ರಷ್ಟು ರಿಯಾಯಿತಿ ದರದಲ್ಲಿ ರಾಗಿ ಕ್ಲೀನಿಂಗ್ ಹಾಗೂ ಪ್ಲೋರ್ ಮಿಲ್ ಉಪಕರಣಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದು ತಿಳಿಸಿದ್ದಾರೆ.

Leave a Comment