ಯಾದಗಿರಿ ಹಾಗೂ ಬಿಜಾಪುರ ಜಿಲ್ಲೆ ಸೇರಿದಂತೆ ವಿವಿಧೆಡೆ ಸಬ್ಸಿಡಿಯಲ್ಲಿ ತಾಡಪತ್ರಿಗಳ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ.
ಯಾದಗಿರಿ ಜಿಲ್ಲೆಯ ಶಹಾಪೂರ ಮತ್ತು ವಡಗೇರಾ ತಾಲೂಕಿನಲ್ಲಿ ಕೃಷಿ ಇಲಾಖೆಯ ವಿವಿಧ ಯೋಜನೆಗಳಡಿ 2022-23 ನೇ ಸಾಲಿನಲ್ಲಿ ರೈತರಿಗೆ ಸಹಾಯಧನದಲ್ಲಿ ಟಾರ್ಪಲಿನ್ (ತಾಡಪತ್ರಿ) ವಿತರಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ತಾಡಪತ್ರಿ ಪಡೆಯಲು ಜೂನ್ 3 ರ ಒಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರ ಸುನೀಲ್ ಕುಮಾರ ತಿಳಿಸಿದ್ದಾರೆ.
ಟಾರ್ಪಲಿನ್ ಒಟ್ಟು ಮೊತ್ತ 2750 ರೂಪಾಯಿ ಆಗಿದ್ದು, ಇದರಲ್ಲಿಸಾಮಾನ್ಯ ವರ್ಗದ ರೈತರಿಗೆ ಶೇ. 50 ರಷ್ಟು ಸಹಾಯಧನ ಸಿಗಲಿದೆ. ಅಂದರೆ ರೈತರು 1570 ರೂಪಾಯಿ ವಂತಿಕೆ ಕಟ್ಟಿ ತಾಡಪತ್ರಿ ಪಡೆಯಬಹುದು. ಅದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ ಸಿಗಲಿದೆ. ಅಂದರೆ ಎಸ್.ಸಿ, ಎಸ್.ಟಿ ರೈತರು ಕೇವಲ 626 ರೂಪಾಯಿ ಪಾವತಿಸಿ ತಾಡಪತ್ರಿ ಪಡೆಯಬಹುದು.
ತಾಡಪತ್ರಿ ಪಡೆಯಲು ಬೇಕಾಗುವ ಅಗತ್ಯ ದಾಖಲೆಗಳು
ಆಸಕ್ತ ರೈತರು ತಾಡಪತ್ರಿ ಪಡೆಯಲು ಜೂನ್ 3 ರೊಳಗಾಗಿ ಕೃಷಿ ಇಲಾಖೆಯಲ್ಲಿ ಅರ್ಜಿ ಸಲ್ಲಿಸಬಹುದು. ರೈತ ಸಂಪರ್ಕ ಕೇಂದ್ರಗಳಾದ ಶಹಾಪುರ, ದೋರನಹಳ್ಳಿ, ಗೋಗಿ, ಹೈಯ್ಯಾಳ ಹಾಗೂ ವಡಗೇರಾ ಕೇಂದ್ರಗಳಲ್ಲಿ ಒಂದು ವೇಳೆ ಹೋಬಳಿ ನಿಗದಿಪಡಿಸಿದ ಗುರಿಗಿಂತ ಹೆಚ್ಚು ಅರ್ಜಿಗಳು ಬಂದರೆ ಲಾಟರಿ ಮುಖಾತಂರ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇದನ್ನೂಓದಿ : ಪಿಎಂ ಕಿಸಾನ್ ಫಲಾನುಭವಿಗಳು ಇಕೆವೈಸಿ ಮಾಡಿಸಿದರೆ ಮಾತ್ರ ಹಣ ಜಮೆ- ಮೊಬೈಲ್ ನಲ್ಲೇ ಚೆಕ್ ಮಾಡಿ
ಅರ್ಜಿಯೊಂದಿಗೆ ಎಫ್ಐಡಿ ಸಂಖ್ಯೆ, ಆಧಾರ್ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಇತ್ತೀಚಿನ ಪಾಸ್ ಪೋಟ್ ಸೈಜ್ ಫೋಟೋ, ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ) ಹಾಗೂ ಸ್ವಯಂ ದೃಢೀಕರಣ ಪತ್ರ ಲಗತ್ತಿಸಬೇಕು ಎಂದು ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾರ್ಪಲಿನ್ ನ ಅವಶ್ಯಕತೆ ಏಕಿರುತ್ತದೆ?
ರೈತರಿಗೆ ಮಳೆ, ಗಾಳಿ, ಧೂಳಿನಿಂದ ರಾಶಿ ಮಾಡಿದ ಬೆಳೆ ಹಾಗೂ ದವಸಧಾನ್ಯಗಳನ್ನು ರಕ್ಷಿಸಿಕೊಳ್ಳಲು ಟಾರ್ಪಲನ್ ತುಂಬಾ ಅವಶ್ಯಕತೆಯಿರುತ್ತದೆ. ಅಕಾಲಿಕವಾಗಿ ಸುರಿದ ಮಳೆ, ಸುಳಿಗಾಳಿಯಿಂದಾಗಿ ದವಸಧಾನ್ಯ ಹಾಳಾಗುತ್ತಿರುತ್ತದೆ. ಹೀಗಾಗಿ ರೈತರ ಬೆಳೆ, ದವಸಧಾನ್ಯಗಳ ಕಾಪಾಡಲು ಸರ್ಕಾರದ ವತಿಯಿಂದ ಸಬ್ಸಿಡಿಯಲ್ಲಿ ತಾಡಪತ್ರಿ ವಿತರಿಸಲಾಗುವುದು. ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಗಳನ್ನು ಪಡೆದು ತಾಡಪತ್ರಿ ಪಡೆಯಬಹುದು ಎಂದು ಕೋರಲಾಗಿದೆ.
ತಾಡಪಾಲ್ ವಿತರಣೆಗೆ ರೈತರಿಂದ ಅರ್ಜಿ ಆಹ್ವಾನ
ಬಿಜಾಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನಿಂದಲೂ ತಾಡಪತ್ರಿ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. 2022-23ನೇ ಸಾಲಿನ ಕೃಷಿ ಸಂಸ್ಕರಣೆ ಯೋಜನೆಯಡಿ ತಾಡಪಾಲ್ ಪಡೆದುಕೊಳ್ಳಲು ರೈತರಿಂದ ಅರ್ಜಿ ಕರೆಯಲಾಗಿದೆ ಎಂದು ರೈತ ಸಂಪರ್ಕ ಕೇಂದ್ರದ ಅಧಿಕಾರಿ ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮಾನ್ಯ ರೈತರು ಎಫ್ಐಡಿ ಸಂಖ್ಯೆ, ಆಧಾರ್ ಕಾರ್ಡ್ , ಪಹಣಿ, ಭಾವಚಿತ್ರದೊಂದಿಗೆ ಸಲ್ಲಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರು ಜಾತಿ ಪ್ರಮಾಣ ಪತ್ರದ ಪ್ರತಿಗಳೊಂದಿಗೆ ನಿಗದಿತ ಅರ್ಜಿ ನಮೂನೆಯೊಂದಿಗೆ ಲಗತ್ತಿಸಿ ಖುದ್ದಾಗಿ ರೈತ ಸಂಪರ್ಕ ಕೇಂದ್ರಕೇಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ರೈತರು ಕಡ್ಡಾಯವಾಗಿ ಎಫ್ಐಡಿ ಸಂಖ್ಯೆ ಹೊಂದಿರಬೇಕು. ಕಳೆದ ವರ್ಷಿ ತಾಡಪಲ್ ಪಡೆದ ರೈತರು ಈ ವರ್ಷ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ. ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನವಾಗಿದೆ. ಜೂನ್ 1 ರಂದು ಲಾಟರಿ ಮುಖಾಂತರ ರೈತರನ್ನು ಆಯ್ಕೆ ಮಾಡಿ ತಾಡಪಲ್ಗಳನ್ನು ವಿತರಿಸಲಾಗುವುದು. ಲಾಟರಿಯಲ್ಲಿ ಆಯ್ಕೆಯಾದ ರೈತರು ತಮ್ಮ ಸ್ವೀಕೃತಿ ಪತ್ರ ನೀಡಿ ತಾಡಪಲ್ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ರೈತರು ಕೊನೆಯ ದಿನಾಂಕದವರೆಗೆ ಕಾಯದೆ ಬೇಗನೆ ಅರ್ಜಿ ಸಲ್ಲಿಸಲು ಸಬ್ಸಿಡಿಯಲ್ಲಿ ತಾಡಪತ್ರಿ ಪಡೆದುಕೊಳ್ಳಲು ಕೋರಲಾಗಿದೆ.