ಈ ಜಿಲ್ಲೆಗಳಲ್ಲಿ ಜೂನ್ 27 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ

Written by Ramlinganna

Updated on:

ಕರಾವಳಿಯಲ್ಲಿ ಮುಂದಿನ ನಾಲ್ಕು ದಿನಗಳ ಭಾರಿ ಮಳೆಯಾಗಲಿದೆ. ಆದರೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಉತ್ತಮ ಮಳೆಗಾಗಿ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾನುವಾರ ಮತ್ತು ಸೋಮವಾರ ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಮುಂದಿನ ಐದು ದಿನ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 27 ರವರೆಗೆ ಭಾರಿ ಮಳೆಯಾಗಲಿದೆ ಎಂಬ ಸೂಚನೆ ಇರುವುದರಿಂದ ಈ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅದೇ ರೀತಿ ಬಳ್ಳಾರಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಿಗೆ ಶುಕ್ರವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಅಥವಾ ತುಂತುರು ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶುಕ್ರವಾರ ಶನಿವಾರ ಭಾನುವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ಯೆಲ್ಲೋ ಅಲರ್ಟೋ ಘೋಷಿಸಲಾಗಿದೆ. ಅಂದು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ : Panchatantra 2.0 : ನಿಮ್ಮ ಗ್ರಾಮ ಪಂಚಾಯತಿಯ ಎಲ್ಲಾ ಮಾಹಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ಇನ್ನೂ ಉತ್ತರ ಒಳನಾಡಿನ ಜಿಲ್ಲೆಗಳ ಕೆಲವೆಡೆ ಗುರುವಾರ, ಶುಕ್ರವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶನಿವಾರ ಹಲವೆಡೆ ಮಳೆಯಾಗುವ ಮುನ್ಸೂಚನೆ ಇದೆ. ಆದರೆ ಭಾನುವಾರ ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟೋ ಘೋಷಿಸಲಾಗಿದಗ್ದು, ಸೋಮವಾರ ಬೀದರ್ ನಲ್ಲಿ ಮಾತ್ರ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಭಾರಿ ಮಳೆ ಸಾಧ್ಯತೆ

ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುರುವಾರ ರಾತ್ರಿ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕಲಬುರಗಿ, ದಾವಣಗೆರೆ, ಕೋಲಾರ ವಿಜಯನಗರ  ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ .

ಮೇಘದೂತ್ ಆ್ಯಪ್ ನೀಡಲಿದೆ ಐದು ದಿನ ಮೊದಲೇ ಮಳೆಯ ಮಾಹಿತಿ

ಮೇಘದೂತ್ ಎಂಬ ಆ್ಯಪ್ ರೈತರಿಗೆ ಐದು ದಿನ ಮೊದಲೇ ಮಳೆಯ ಮಾಹಿತಿ ನೀಡುತ್ತದೆ. ಗಾಳಿಯ ವೇಗ, ಯಾವ ದಿಕ್ಕಿಗೆ ಗಾಳಿ ಬೀಸುತ್ತಿದೆ? ಮಳೆಯಾದರೆ ಮಳೆಯ ಪ್ರಮಾಣ ಹೇಗಿರುತ್ತದೆ ಎಂಬುದರ ಕುರಿತು ಮಾಹಿತಿ ನೀಡುತ್ತದೆ. ಈ ಮಾಹಿತಿ ಪಡೆಯಲು ರೈತರನು ಮಾಡಬೇಕು? ರೈತರು ಮೇಘದೂತ್ ಆ್ಯಪ್ ಡೌನ್ಲೋಡ್ ಮಾಡಿಕೊಂಡರೆ ಸಾಕು,

ಮೇಘದೂತ್ ಆ್ಯಪ್ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ?

ರೈತರು ಮೇಘದೂತ್ ಆ್ಯಪ್ ನ್ನು ತಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿಇನಸ್ಟಾಲ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಭಾಷೆ ಆಯ್ಕೆ ಮಾಡಿಕೊಳ್ಳಬೇಕು.  ಮುಂದೆ ಕ್ಲಿಕ್ ಮಾಡಿದ ನಂತರ ಲಾಗಿನ್ ಮೇಲೆ ಕ್ಲಿಕ್ ಮಾಡಬೇಕು.ನಂತರ ನಿಮಗೆ ಅಂದಿನ ಕನಿಷ್ಠ ತಾಪಮಾನ, ಮುಂದಿನ ಯಾವ ದಿನಾಂಕದಂದು ಮಳೆಯಾಗುತ್ತದೆ? ಗಾಳಿಯ ವೇಗ ಎಷ್ಟಿದೆ ಹಾಗೂ ಯಾವ ಪ್ರಮಾಣದಲ್ಲಿ ಮಳೆಯಾಗುತ್ತದೆ ಎಂಬುದರ ಮಾಹಿತಿಯನ್ನು ರೈತರು ಮನೆಯಲ್ಲಿ ಕುಳಿತು ಪಡೆಯಬಹುದು.

Leave a Comment