ಮತದಾರರ ಪಟ್ಟಿಯಲ್ಲಿ ( Voter list ) ಯಾರ ಯಾರ ಹೆಸರು ಸೇರಿಸಲಾಗಿದೆ ಯಾರ ಹೆಸರು ರದ್ದುಪಡಿಸಲಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಿಕೊಳ್ಳಬಹುದು. ಹೌದು, ಯುವಕ ಯುವತಿಯರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಮತದಾರರ ಪಟ್ಟಿಯಲ್ಲಿ ( Voter list ) ನಿಮ್ಮ ಹೆಸರು ಚೆಕ್ ಮಾಡಿ
ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು
https://electoralsearch.eci.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ಮತದಾರರ ಪಟ್ಟಿಯಲ್ಲಿ ಹೆಸರು ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಹೆಸರು, ತಂದೆಯ/ಪತಿಯ ಹೆಸರು ಬರೆಯಬೇಕು. ನಿಮ್ಮ ವಯಸ್ಸು ಸೆಲೆಕ್ಟ್ ಮಾಡಿಕೊಳ್ಳಬೇಕು.
ಲಿಂಗ, ರಾಜ್ಯ, ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಅಲ್ಲಿಕಾಣುವ ಕ್ಯಾಪ್ಚ್ಯಾ ಕೋಡ್ ಆಯ್ಕ ಮಾಡಿ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೋ ಇಲ್ಲವೋ ಎಂಬುದು ಕಾಣಿಸುತ್ತದೆ. ಅಲ್ಲಿ ನಿಮ್ಮ ಹೆಸರು ವಯಸ್ಸು, ತಂದೆಯ ಹೆಸರು ಕಾಣಿಸುತ್ತದೆ.
ವೀವ್ ಡಿಟೇಲ್ ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮ್ಮ ಅಸೆಂಬ್ಲಿ ಕ್ಷೇತ್ರದ ಸಂಖ್ಯೆ, ಜಿಲ್ಲೆ. ನಿಮ್ಮ ಹೆಸರು, ತಂದೆಯ ಹೆಸರು, ಕಾಣಿಸುತ್ತದೆ. ಅದರ ಕೆಳಗಡೆ ಮತದಾರರ ಸಿರಿಯಲ್ ನಂಬರ್ ಸಹ ಕಾಣಿಸುತ್ತದೆ.
ಇದನ್ನೂ ಓದಿ ಪಿಎಂ ಕಿಸಾನ್ ಜಮೆ ಸ್ಟೇಟಸ್ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
ಸಾರ್ವಜನಿಕರು ತಮ್ಮ ವೋಟರ್ ಐಡಿಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯೋ ಇಲ್ಲವೋ ಎಂಬದನ್ನು ಸಹ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಅತೀ ಸುಲಭವಾಗಿ ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು. ಅದೇ ರೀತಿ ಹೊಸದಾಗಿ ಅರ್ಜಿ ಸಲ್ಲಿಸಿದವರು ತಮ್ಮ ಮೊಬಲ್ ನಲ್ಲೇ ಚನಾವಣೆ ಗುರುತಿನ ಚೀಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಮತದಾರರ ಪಟ್ಟಿಯಲ್ಲಿ ( Voter list ) ಹೆಸರು ನೋಂದಾಯಿಸಲು ಅವಕಾಶ
ಮತದಾನದ ಪ್ರಕ್ರಿಯೆಯಲ್ಲಿ ಯುವ ಮತದಾರರು ಪ್ರಮುಖ ಪಾತ್ರವಹಿಸಿದ್ದು, 18 ವರ್ಷ ತುಂಬಿದ ಎಲ್ಲಾ ಯುವ ಮತದಾರರು ತಪ್ಪದೆ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮನವಿ ಮಾಡಿದರು.
ಯಲಹಂಕಾ ಶೇಷಾದ್ರಿಪುರಂ ಕಾಲೇಜಿನಲ್ಲಿ ವಿಶೇಷ ನೋಂದಣಿ ಅಭಿಯಾನದ ಭಾಗವಾಗಿ ಕಾಲೇಜು ವಿದ್ಯಾರ್ಥಿಗಳ ಜೊತೆ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಯುವ ಮತದಾರರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗುವದರ ಜೊತೆಗೆ ಮತದಾರರಪಟ್ಟಿಯಲ್ಲಿ ನೋಂದಣಿಯಾಗಲು ಪ್ರೇರೇಪಿಸಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಮಾಡಬೇಕೆಂದು ತಿಳಿಸಿದರು.
ಜಿಲ್ಲಾ ಚುನಾವಣಾ ಕಚೇರಿಯಿಂದ ನಗರದ ಕಾಲೇಜುಗಳಲ್ಲಿ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಕೊಳ್ಳುವ ಕಾರ್ಯ ಸಕ್ರೀಯವಾಗಿ ನಡೆಯುತ್ತಿದೆ.
18 ವರ್ಷ ತುಂಬುವ ಎಲ್ಲರೂ ಆನ್ಲೈನ್ ಮುಖಾಂತರ ಸ್ವಯಂ ಪ್ರೇರಿತವಾಗಿ ವೆಬ್ ಪೋರ್ಟಲ್
https://voters.eci.gov.in/
ಮೂಲಕ ನೋಂದಾಯಿಸಿಕೊಳ್ಳಬೇಕು. ಈ ಅವಕಾಶವನ್ನು ಎಲ್ಲರೂ ಸದುಪಯೋಗಪಡಿಸಿಕೊಂಡು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಬೇಕೆಂದು ತಿಳಿಸಿದರು.
ಪ್ರತಿ ಚುನಾವಣೆಯಲ್ಲಿಯೂ ಎಲ್ಲರೂ ತಪ್ಪದೆ ಮತದಾನ ಮಾಡಲು ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಮತದಾನದದಿನ ರಜೆ ನೀಡುವ ಉದ್ದೇಶ ಎಲ್ಲರೂ ತಪ್ಪದೆ ಮತಗಟ್ಟೆಗಳಿಗೆ ಬಂದು ಮತದಾನ ಮಾಡಬೇಕೆಂಬುದಾಗಿದೆ. ಆದರೆ ಸಾಕ ಷ್ಟು ಮಂದಿ ಮತದಾನ ಮಾಡಲು ಮುಂದೆ ಬರುವುದಿಲ್ಲ. ಈ ಬಗ್ಗೆ ಎಲ್ಲಾ ಯುವ ಮತದಾರರು ಮತದಾನದ ಪ್ರಾಮುಖ್ಯತೆಯನ್ನು ತಿಳಿಸಿ ಎಲ್ಲರೂ ಮತದಾನ ಮಾಡುವಂತೆ ಮಾಡಬೇಕೆಂದು ತಿಳಿಸಿದರು.