ಚುನಾವಣೆಯ ಹೊಸ Voter listನಲ್ಲಿ ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ

Written by Ramlinganna

Updated on:

Voter list released ಅಂತೂ ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಯಿತು. ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮತ ಏಣಕೆ ಜೂನ್ 4 ರಂದು ಆಗಲಿದೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.  ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರೀಲ್ 26 ರಂದು ನಡೆಯಲಿದೆ. ಅದೇ ರೀತಿ ಎರಡನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ.

ಮತದಾರರ ಹೊಸ ಪಟ್ಟಿಯಲ್ಲಿ ಯಾರ ಯಾರ ಹೆಸರು ಸೇರ್ಪಡೆ ಮಾಡಲಾಗಿದೆ ಯಾರ ಹೆಸರು ರದ್ದುಗೊಳಿಸಲಾಗಿದೆ ಎಂಬುದನ್ನು ಸಾರ್ವಜನಿಕರು ಈಗ ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಈಗಲೇ ನಿಮ್ಮ ಹೆಸರು ಪರಿಶೀಲಿಸಿಕೊಳ್ಳಬಹುದು. ಇಲ್ಲದಿದ್ದರೆ ನಿಮಗೆ ಮತಹಾಕಲು ಅವಕಾಶ ಸಿಗುವುದಿಲ್ಲ. ಇನ್ನೇಕೆ ತಡ ಈಗಲೇ ಚೆಕ್ ಮಾಡಿಕೊಳ್ಳಬೇಕು.

18 ವರ್ಷಕ್ಕಿಂತ ಮೇಲ್ಪಟ್ಟವರು ವೋಟರ್ ಲಿಸ್ಟ್ ನಲ್ಲಿ ತಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ಲೋಕಸಭಾ ಚುನಾವಣೆಗೆ ಇನ್ನೆರಡು ತಿಂಗಳು  ಮಾತ್ರ ಬಾಕಿ ಇದೆ. ಮುಂದಿನ ತಿಂಗಳಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ. ಹಾಗಾಗಿ 18 ವಯೋಮಾನಕ್ಕಿಂತ ಹೆಚ್ಚಿನವರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಜಿ ಸಲ್ಲಿಸಿದವರು ತಮ್ಮಹೆಸರು ಪಟ್ಟಿಯಲ್ಲಿ ಸೇರಿಸಲಾಗಿದೆಯೇ? ಹೆಸರು ಸರಿಯಾಗಿದೆಯೇ? ಮತ್ತು ಚುನಾವಣೆಯಲ್ಲಿ ಮತದಾನ ಎಲ್ಲಿ ಸಲ್ಲಿಸಲು ಅವಕಾಶವಿದೆ ಎಂಬುದನ್ನುಸಹ ಚೆಕ್ ಮಾಡಬಹುದು. ಹೊಸದಾಗಿ ಅರ್ಜಿ ಸಲ್ಲಿಸಿದವರು ತಮ್ಮ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗಿದೆಯೋ ಇಲ್ಲವೋ ಎಂಬುದನ್ನು ನಲ್ಲಿ ಚೆಕ್ ಮಾಡಬಹುದು.

ಇದನ್ನೂ ಓದಿ Gruha lakshmi scheme 6 ನೇ ಕಂತಿನ ಹಣ ಜಮೆ: ಇಲ್ಲೇ ಚೆಕ್ ಮಾಡಿ

ಚುನಾವಣಾ ಆಯೋಗ ಈಗಾಗಲೇ ಮತದಾರರ ಪಟ್ಟಿಯನ್ನು ಸಿದ್ದಪಡಿಸಿದೆ. ಇದರೊಂದಿಗೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇಪರ್ಡೆ ಮಾಡಲು ಇನ್ನೂ ಕಾಲವಕಾಶವಿದೆ. 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾನ ಮಾಡಲು ಅರ್ಹರಾಗಿರುವುದರಿಂದ ಹೊಸದಾಗಿ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಬಹುದು.

ಈಗಾಗಲೇ ಅರ್ಜಿ ಸಲ್ಲಿಸಿದ್ದರೆ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಪರಿಶೀಲಿಸಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Voter list released : ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು

https://electoralsearch.eci.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ಮತದಾರರ ಪಟ್ಟಿಯಲ್ಲಿ ಹೆಸರು ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ.  ಅಲ್ಲಿ ನಿಮ್ಮ ಹೆಸರು, ತಂದೆಯ/ಪತಿಯ ಹೆಸರು ಬರೆಯಬೇಕು.  ನಿಮ್ಮ ವಯಸ್ಸು ಸೆಲೆಕ್ಟ್ ಮಾಡಿಕೊಳ್ಳಬೇಕು.

ಲಿಂಗ, ರಾಜ್ಯ, ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು.  ನಂತರ ಅಲ್ಲಿಕಾಣುವ ಕ್ಯಾಪ್ಚ್ಯಾ ಕೋಡ್ ಆಯ್ಕ ಮಾಡಿ ಸರ್ಚ್  ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೋ ಇಲ್ಲವೋ ಎಂಬುದು ಕಾಣಿಸುತ್ತದೆ.  ಅಲ್ಲಿ ನಿಮ್ಮ ಹೆಸರು ವಯಸ್ಸು, ತಂದೆಯ ಹೆಸರು ಕಾಣಿಸುತ್ತದೆ.

ಇದನ್ನೂ ಓದಿ ಈ ಪಟ್ಟಿಯಲ್ಲಿದ್ದ ರೈತರಿಗೆ ಪಿಎಂ ಕಿಸಾನ್ ಹಣ ಜಮೆ

ವೀವ್ ಡಿಟೇಲ್ ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮ್ಮ ಅಸೆಂಬ್ಲಿ ಕ್ಷೇತ್ರದ ಸಂಖ್ಯೆ, ಜಿಲ್ಲೆ. ನಿಮ್ಮ ಹೆಸರು, ತಂದೆಯ ಹೆಸರು, ಕಾಣಿಸುತ್ತದೆ. ಅದರ ಕೆಳಗಡೆ ಮತದಾರರ ಸಿರಿಯಲ್ ನಂಬರ್ ಸಹ ಕಾಣಿಸುತ್ತದೆ.

Leave a Comment