
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ ಮಂಡ್ಯ, ಮೈಸೂರು ಕೊಡಗಿನಲ್ಲಿ ಇಂದು (ಮಾರ್ಚ್ 28) ಮಳೆಯಾಗುವ ಸಾದ್ಯತೆಯಿದೆ (Weather forecast five days rain alert) ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೊಡಗಿನಲ್ಲಿ 29 ರಂದು ಸಹ ಅಲ್ಲಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು, ಮಂಡ್ಯದಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಕನ್ನಡ, ದಕ್ಷಿಣಕನ್ನಡ, ಬೆಳಗಾವಿ, ಬೆಂಗಳೂರು, ಹಾಸನ, ರಾಮನಗರ, ಬಿಜಾಪುರ, ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಗದಗ, ದಾವಣಗೇರೆ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಮಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಎಂದಿನಂತೆ ಒಣಹವೆ ಮುಂದುವರೆಯಲಿದೆ.