ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿಐದು ದಿನ ಮಳೆ

Written by Ramlinganna

Updated on:

Weather forecast: 5 days rain ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸುಚನೆ ನೀಡಿದೆ. ಹೌದು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳನ್ನು ಹೊರತು ಪಡಿಸಿ ರಾಜ್ಯದ ವಿವಿಧೆಡೆ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು, ಚಾಮರಾಜನಗರ, ಚಿಕ್ಕಮಗಳೂರಿನ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿರಿುವುದರಿಂದ  ಏಪ್ರೀಲ್್ 27 ರಂದು  ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಳ್ಲದೆ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಏಪ್ರೀಲ್ 30 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ  ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಬೆಳಗಾವಿ, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯೂ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನರಗ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸರನ, ಮಂಡ್ಯ, ಮೈಸೂರು, ಕೋಲಾರ, ಕೊಡಗು, ತುಮಕೂರು, ರಾಮನಗರ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ  ಮಂದಿನ 24 ಗಂಟೆಗಳಲ್ಲಿ ಕೆಲವು ಕಡೆ ಮಳೆಯಾಗಲಿದೆ.

ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕಲಬುರಗಿ, ಬೀದರ್, ರಾಯಚೂರು, ಹಾವೇರಿ, ಬಾಗಲಕೋಟೆ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ  ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Weather forecast: 5 days rain ನಿಮ್ಮೂರಿನಲ್ಲಿ ಮಳೆಯ ಮಾಹಿತಿ ಬೇಕೇ?

ನಿಮ್ಮೂರಿನಲ್ಲಿ ಮಳೆ ಯಾವಾಗ ಆಗುತ್ತದೆ? ದಿನದ ಹವಾಮಾನ ಹೇಗಿರುತ್ತದೆ? ಎಂಬಿತ್ಯಾದಿ ಮಾಹಿತಿಯನ್ನು ಒಂದು ಕರೆ ಮಾಡಿ ಪಡೆಯಬಹುದು. ಹೌದು, 24*7  ಸಹಾಯವಾಣಿ ವರುಣಮಿತ್ರ ಆರಂಭಿಸಲಾಗಿದೆ. 82433 45433 45433ಈ ನಂಬರಿಗೆ ಕರೆ ಮಾಡಿ ಮಳೆಯ ಮಾಹಿತಿಯನ್ನು ಪಡೆಯಬಹುದು.

ಇದನ್ನೂ ಓದಿ : ನಿಮ್ಮ ಜಮೀನಿನ ಮ್ಯಾಪ್ ನ್ನು ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

ವೈಜ್ಞಾನಿಕವಾಗಿ ಸಂಗ್ರಹಿಸಿದ ಹವಾಮಾನ ಮಾಹಿತಿ ಹಾಗೂ ಗ್ರಾಮ ಪಂಚಾಯತಿ ಮಟ್ಟದ ಹವಾಮಾನ ಮುನ್ಸೂಚನೆಯನ್ನು ನೇರವಾಗಿ ತಲುಪಿಸುವ ಸಲುವಾಗಿ ಈ ಕೇಂದ್ರವು ವಾರದ ಏಳು ದಿನಗಳ ಕಾಲ ಹವಾಮಾನ ಮಾಹಿತಿ ನೀಡಲಾಗುವುದು.  ರೈತರು, ಸಾರ್ವಜನಿಕರು ಈ ಉಚಿತ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

ಪ್ರತಿ 15 ನಿಮಿಷಕ್ಕೊಮ್ಮೆ ಮಳೆ ಮಾಹಿತಿ

ಅತೀವೃಷ್ಟಿಯಿಂದ ಸಂಭವನೀಯ ಹಾನಿ ತಪ್ಪಿಸಲು, ಉಪಗ್ರಹ ನಿಯಂತ್ರಿತ ಸ್ವಯಂ ಚಾಲಿನ ಮಳೆ ಮಾಪನ ಯಂತ್ರಗಳ ನೆರವು ಪಡೆಯಲು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಉಸ್ತುವಾರಿ ಕೇಂದ್ರ ಮುಂದಾಗಿದೆ.

ಬಿದ್ದ ಮಳೆಯ ಪ್ರಮಾಣದ ಮಾಹಿತಿಯನ್ನು ಪ್ರತಿ 15 ನಿಮಿಷಕ್ಕೊಮ್ಮೆ ನಿಯಂತ್ರಣ ಕೊಠಡಿಗೆ ಕಳುಹಿಸುವ ಯಂತ್ರಗಳನ್ನು ವಿವಿಧೆಡೆ ಅಳವಡಿಸಲಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ

ಕಲಬುರಗಿ ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದೆ. ಬೆಳಗ್ಗೆ ಚದುರಿದ ಸಣ್ಣ ಮಳೆಯಾಯಿತು. ಇದರೊಂದಿಗೆ ತಂಪಾದ ಗಾಳಿ ಬಿಸುತ್ತಿರುವುದರಿಂದ ಬಿಸಿಲ ಝಳಕ್ಕೆ ತತ್ತರಿಸಿದ ಕಲಬುರಗಿ ಜನತೆಗೆ ತಂಪಿನ ವಾತಾವರಣ ಮುದ ನೀಡುತ್ತಿದೆ.

ಬಿಸಿಲಿನ ಝಳದಿಂದ ಮನೆಯಿಂದ ಹೊರಬರಲು ಹೆದರುತ್ತಿದ್ದ ಕಲಬುರಗಿ ಜನತೆಗೆ ಬುಧವಾರದ ವಾತಾವರಣ ಖುಷಿ ನೀಡಿದೆ. ಇದೇ ರೀತಿ ವಾತಾವರಣ ಇದ್ದರೆ ತುಂಬಾ ಚೆನ್ನಾಗಿರುತ್ತದೆ. ಮೊದಲೇ ಈ ಬಿಸಿಲನ ಝಳಕ್ಕೆ ತತ್ತರಿಸಿರುವ ಜನತೆ ಈ ವಾತಾವರಣಕ್ಕೆ ಮೊರೆ ಹೊಗುತ್ತಿದ್ದಾರೆ.

ಕಲಬುರಗಿ ಭಾಗದಲ್ಲಿ ಬಿಸಿಲು ಹೆಚ್ಚಿರುತ್ತದೆ. ರಾತ್ರಿಯೂ ಮನೆಗಳು ಕಾದು ಫ್ಯಾನ್ ಗಾಳಿಯಿದ್ದರೂ ಬಿಸಿಲಿನ ಗಾಳಿಯಾಗಿರುತ್ತದೆ. ಹಾಗಾಗಿ ರಾತ್ರಿ ಜನತೆ ನೆಮ್ಮದಿಯಾಗಿ ನಿದ್ದೆ ಮಾಡುವುದಿಲ್ಲ. ಅದರಲ್ಲಿ ವಿದ್ಯುತ್ ಕೈಕೊಟ್ಟರೆ ಇಡೀ ರಾತ್ರಿ ಜಾಗರಣ ಮಾಡುವ ಪರಿಸ್ಥಿತಿ ಇರುತ್ತದೆ.

Leave a Comment