ಇಂದಿನಿಂದ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ

Written by Ramlinganna

Updated on:

Weather forecast heavy rain :ರಾಜ್ಯದ ವಿವಿಧೆಡೆ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು ಹಗೂ ಚಾಮರಾಜನಗರ ಜಿಲ್ಲೆಗೆ ಶನಿವಾರ ಯೆಲ್ಲೋ ಅಲರ್ಟ್ ನೀಡಲಾಗಿದೆ.ದಕ್ಷಿಣ ಕನ್ನಡ ಒಳನಾಡಿನ ಜಿಲ್ಲೆಗಳಲ್ಲಿ ಭಾನುವಾರ ಮಳೆ ವ್ಯಾಪಿಸಿಕೊಳ್ಳುವ ಸಂಭವವಿದ್ದು, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಯ ಜತೆಗೆ ಮಂಡ್ಯ, ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಸಾದಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆತಿಳಿಸಿದೆ.

ಬೆಂಗಳೂರಿನಲ್ಲಿ ಎರಡು ದಿನಗಳು ಮೋಡ ಕವಿದ ವಾತಾವರಣ ಇರಲಿದೆ. ಗುಡುಗುಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಲಿದೆ.

ಗೃಹಲಕ್ಷ್ಮೀ ಹಣ ಯಾವಾಗ ಜಮೆಯಾಗುತ್ತದೆ? ಯಾರಿಗೆ ಜಮೆಯಾಗುತ್ತದೆ ಎಂಬ ಮಾಹಿತಿ ನೋಡಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

ಗೃಹಲಕ್ಷ್ಮೀ ಹಣ ಜಮೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಹಾಗೂ ಶಿವಮೊಗ್ಗ ಜಿಲ್ಲೆಯ ಹಲವೆಡೆ ಇದೇ ಅಕ್ಟೋಬರ್ 11 ರವರೆಗೆ ಸಾಧಾರಣಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Weather forecast heavy rain ಮೇಘದೂತ್ ಆ್ಯಪ್  ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

Weather forecast heavy rain ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?  

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಇನ್ನೇಕೆ ತಡ, ಈಗಲೇ ಕರೆ ಮಾಡಿ ನೋಡಿ, ನಿಮ್ಮೂರಲ್ಲಿ ಮಳೆಯ ಆಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ.ಈ ಮಾಹಿತಿ ನಿಮಗೆ ಉಪಯುಕ್ತವಾಗಿದೆ ಎಂದುಕೊಂಡಿದ್ದೇನೆ.

ಸಿಡಿಲಿನಿಂದ ಆಗುವ ಅಪಾಯ

ಮಳೆ ಬಂದಾಗ ಸಿಡಿಲಿನಆರ್ಭಟ ಇದ್ದೇ ಇರುತ್ತದೆ. ನಿಮಗೆಲ್ಲಾ ಗೊತ್ತಿದ್ದ ಹಾಗೆ ಸಿಡಿಲುಗಳಿಂದ ರೈತರೇ ಹೆಚ್ಚು ಬಲಿಯಾಗುತ್ತಾರೆ. ನಗರ ಪ್ರದೇಶಗಳಿಗಿಂತ ಗ್ರಾಮಾಂತರ ಪ್ರದೇಶದಲ್ಲಿಯೇ ಹೆಚ್ಚು ಸಿಡಿಲುಗಳು ಬೀಳುತ್ತವೆ. ಇದರಿಂದಾಗಿ ಕುರಿಕಾಯುವವರು, ಜಮೀನಿನಲ್ಲಿ ಕೆಲಸ ಮಾಡುತ್ತಿರುವ ರೈತರು ಸಿಡಿಲಿಗೆ ತಮ್ಮ ಪ್ರಾಣ ಕಳೆದುಕೊಳ್ಳುತ್ತಾರೆ. ರೈತರ ಜಾನುವಾರುಗಳು ಸಾಯುತ್ತವೆ.

ಇದನ್ನೂ ಓದಿ Land podi ನಕ್ಷೆ ಮೊಬೈಲ್ ನಲ್ಲಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಮಳೆ ಬಂದಾಗ ಮರಗಳ ಕೆಳಗಡೆ ನಿಲ್ಲಬಾರದೆಂದು ಹೇಳಿದರೂ ರೈತರು ಸಾಮಾನ್ಯವಾಗಿ ಮರಗಳ ಆಸರೆ ಪಡೆಯುತ್ತಾರೆ. ಸಿಡಿಲುಗಳು ಸಹ ಮರಗಳ ಮೇಲೆ ಹೆಚ್ಚು ಬೀಳುತ್ತವೆ. ಮರಗಳು ಮಿಂಚನ್ನು ಆಕರ್ಶಿಸುತ್ತದೆ. ಅವು ಎತ್ತರವಾಗಿರುತ್ತವೆ ಹಾಗಾಗಿ ರೈತರು ಹೆಚ್ಚು ಪ್ರಾಣ ಕಳೆದುಕೊಳ್ಳುತ್ತಾರೆ. ಪಾಪ, ರೈತರಿಗೆ ತಮ್ಮ ಜಮೀನುಗಳಲ್ಲಿ ಕೆಲಸ ಮಾಡುವಾಗ ಮರಗಳ ಆಸರೆ ಬಿಟ್ಟರೆ ಮತ್ತೇನು ಇರುವುದಿಲ್ಲ.

Leave a Comment