ಕರ್ನಾಟಕ ರಾಜ್ಯದ ಎಂಟು ಜಿಲ್ಲಗಳಲ್ಲಿ ಮಾರ್ಚ್ 24 ರವರೆಗೆ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡದ ಕೆಲವು ಭಾಗ, ದಕ್ಷಿಣ ಕನ್ನಡ ಜಿಲ್ಲೆ, , ಬೀದರ್, ಕಲಬುರಗಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮಳೆಯ ನಂತರ ಹಲವು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಏರಿಕೆ ಉಂಟಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ತಾಪಮಾನ ಎಂದಿನಂತೆ ಏರಲಿದೆ.