ಕರಾವಳಿಯ ಉಡುಪಿ, ಉತ್ತರಕನ್ನಡ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂನ್ 15 ಮತ್ತು 16 ರಂದು ಭಾರಿ ಮಳೆ (Heavy rain) ಯಾಗುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಜೂನ್ 15 ರಂದು ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಯಾವ ಯಾವ ಜಿಲ್ಲೆಗಳಲ್ಲಿ red alert ಅಲರ್ಟ್
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಿಗೆ ಜೂನ್ 16 ಮತ್ತು 17 ರಂದು ಭಾರಿ ಮಳೆಯಾಗಲಿರುವುದರಿಂದ ಆ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಚಿತ್ರದುರ್ಗ, ದಾವಣಗೇರೆ, ಬಳ್ಳಾರಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಜೂನ್ 17 ರವರೆಗೆ ಮಳೆಯಾಗಲಿರುವುದರಿಂದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ (Yellow alert) ಘೋಷಿಸಲಾಗಿದೆ.
ಇದನ್ನೂ ಓದಿ ಅನ್ನಭಾಗ್ಯ ಹಣ ನಿಮಗೆ ಜಮೆಯಾಗಿಲ್ಲವೇ? ಸ್ಟೇಟಸ್ ಚೆಕ್ ಮಾಡಿ
ಕರಾವಳಿ ತೀರ ಪ್ರದೇಶದಲ್ಲಿ ಪ್ರತಿ ಗಂಟೆಗೆ ಗಾಳಿಯ ವೇಗವು 45 ರಿಂದ 55 ಕಿ.ಮೀ ಇರುವ ಸಾಧ್ಯತೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬೆಣ್ಣೆತೋರಾ ಜಲಾಶಯದಿಂದ ನದಿಗೆ ನೀರು ಬಿಡುವ ಸಂಭವ:ನದಿಯ ಅಕ್ಕಪಕ್ಕದ ಜನರು ಎಚ್ಚರಿಕೆಯಿಂದಿರಲು ಸೂಚನೆ
ಬೆಣ್ಣೆತೋರಾ ಯೋಜನೆ ಜಲಾಶಯದ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ನಿರಂತರಬಾಗಿ ಒಳಹರಿವು ಬರುತ್ತಿದೆ. ಅಲ್ಲದೇ ಮೇಲ್ಭಾಗದ ಜಲಾಯಶದಿಂದ ನೀರು ಬಿಡುವ ಸಂಭವವಿರುವುದರಿಂದ ಈ ಜಲಾಶಯವು ಯಾವುದೇ ಕ್ಷಣದಲ್ಲಿ ಭರ್ತಿಯಾಗುವ ಹಂತದಲ್ಲಿದೆ. ಗರಿಷ್ಠ ಮಟ್ಟದ ನಂತರ ಬಂದ ಒಳಹರಿವಿನ ನೀರನ್ನು ಆಣೆಕಟ್ಟೆ ಕೋಡಿ ಮುಖಾಂತರ ನದಿಗೆ ಹರಿಬಿಡಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಹೆಬ್ಬಾಳ ಬೆಣ್ಣೆತೋರಾ ಯೋಜನೆ ವಿಭಾಗದ-4ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಆದ್ದರಿಂದ ಬೆಣ್ಣೆತೋರಾ ನದಿ ಸುತ್ತಮುತ್ತಲಿನ ಗ್ರಾಮಗಳು ನದಿ ಪ್ರವಾಹದಿಂದ ತೊಂದರೆ ಉಂಟಾಗಬಹುದಾಗಿದೆ. ನದಿಯ ಅಕ್ಕಪಕ್ಕದ ಜನರು, ಸಾರ್ವಜನಿಕರು ನದಿಯಲ್ಲಿ ಇಳಿದು ಈಜುವುದಾಗಲಿ, ಬಟ್ಟೆ ಒಗೆಯುವುದಾಗಲಿ, ದನಕರುಗಳಿಗೆ ನೀರು ಕುಡಿಸುವುದಾಗಲಿ ಹಾಗೂ ಇನ್ನಿತರ ಯಾವುದೇ ಕಾರಣಕ್ಕಾಗಿ ನದಿಯಲ್ಲಿ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಪಿಎಂ ಕಿಸಾನ್ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿರಿ
ರೈತರು ಪಿಎಂ ಕಿಸಾನ್ ಸ್ಟೇಟಸನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಈಗ ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವ ವಿಧಾನ ಬದಲಾವಣೆಯಾಗಿದೆ. ಪಿಎಂ ಕಿಸಾನ್ ಯೋಜನೆಯ ಮುಖ್ಯ ಪುಟ ತೆರೆದ ನಂತರ Know your status ಮೇಲೆ ಕ್ಲಿಕ್ ಮಾಡಬೇಕು. ನಂತರ Enter Registration Number ಹಾಕಬೇಕು. ನಿಮ್ಮ ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ನಮೂದಿಸಿದ ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿಯನ್ನು ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆೆೆೆೆೆೆೆೆೆೆೆೆೆೆರೆದುಕೊಳ್ಳುವುದು. ಆಗ ನಿಮಗೆ ಇಲ್ಲಿಯವರೆಗೆ ಯಾವ ಯಾವ ಕಂತುಗಳು ಜಮೆಯಾಗಿದೆ ಅಂದರೆ ಮೊದಲನೇ ಕಂತಿನಿಂದ 16 ನೇ ಕಂತಿನವರೆಗೆ ಯಾವ ಯಾವ ಕಂತುಗಳು ಯಾವ ಯಾವ ದಿನಾಂಕದಂದು ಜಮೆಯಾಗಿದೆ. ಒಂದು ವೇಳೆ ಜಮೆಯಾಗದೆ ಇದ್ದರೆ ಯಾವ ಕಾರಣಕ್ಕಾಗಿ ತಡೆಹಿಡಿಯಲಾಗಿದೆ ಎಂಬ ಮಾಹಿತಿಯೂ ಕಾಣಿಸುತ್ತದೆ. ನಿಮಗೆ ಪಿಎಂ ಕಿಸಾನ್ ಹಣ ಜಮೆಯಾಾಗದಿದ್ದರೆ ನೀವು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಸಂಪರ್ಕಿಸಬಹುದು.