ರಾಜ್ಯದ ಯಾದಗಿರಿ, ಕಲಬುರಗಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾವೇರಿ, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ (Weather forecast- rain alert today ) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿಸಿಲಿನ ತಾಪಕ್ಕೆ ತತ್ತರಿಸಿದ ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಮಳೆರಾಯ ತಂಪೆರೆಯುವ ಸಾಧ್ಯತೆಯಿದೆ. ಈಗಾಗಲೇ ಯಾದಗಿರಿ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ ಭಾರಿ ಮಳೆ ಸುರಿದಿದೆ.
ಬೇಸಿಗೆ ಕಾಲದಲ್ಲಿ ಆಗಾಗ ಅಕಾಲಿಕ ಮಳೆಯಾಗುವುದು ಸಾಮಾನ್ಯ. ಸೋಮವಾರ ಏಪ್ರೀಲ್ 5 ರಂದು ಮಳೆಯಾಗುವ ಲಕ್ಷಣ ಕಂಡು ಬರುತ್ತಿದೆ. ಏಪ್ರಿಲ್ 7 ರಂದು ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕೊಡಗು ಜಿಲ್ಲೆಯಲ್ಲಿ ಏಪ್ರೀಲ್ 6 ರಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ. ಗುಡುಗು ಮಿಂಚಿನ ಆರ್ಭಟವೂ ಇರಲಿದೆ.
ಒಂದೆರೆಡು ದಿನ ಮಾತ್ರ ಮಳೆ ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆ, ಮಂಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಾರದಲ್ಲಿ ಒಂದೆರಡು ದಿನ ಮಾತ್ರ ಒಂದು ಸುತ್ತಿನ ಮಳೆ ನಿರೀಕ್ಷೆಯಿದೆ
ಕರಾವಳಿ ಜಿಲ್ಲೆಗಳಲ್ಲಿ 8 ರಂದು ಗುಡುಗು ಮಿಂಚಿನ ಮಎಳೆಯಾಗುವ ನಿರೀಕ್ಷೆಯಿದೆ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಏಪ್ರೀಲ್ 10 ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ.