ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಜೂನ್ 27 ರ ಬಳಿಕ ಮುಂಗಾರು ಮತ್ತೆ ಅಬ್ಬರಿಸಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನದಲ್ಲಿ ಭಾರೀ (Heavy rain) ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ಶಾಂತವಾಗಿದ್ದ ಮಳೆ ಮತ್ತೆ ಪ್ರಾರಂಭವಾಗಿದ್ದು, ಜೂನ್ 30ರವರೆಗೆ ಕರಾವಳಿ ಜಿಲ್ಲೆಗಳು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ..
ಮುಂಗಾರು ಆಗಮನದ ನಂತರ ಬಿರುಸುಪಡೆದುಕೊಂಡಿದ್ದ ಮಳೆ ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೊಂಚ ಕಡಿಮೆಯಾಗಿತ್ತು. ಆದರೆ, ಮತ್ತೆಮಳೆಯ ಆರ್ಭಟ ಶುರುವಾಗಲಿದ್ದು, 3 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆಯಿರುವುದರಿಂದ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: ನಿಮ್ಮೂರಿನಲ್ಲಿ ಮಳೆಯಾಗುವ ಮುನ್ಸೂಚನೆ ನೀಡುತ್ತದೆ ಕೃಷಿ ಇಲಾಖೆಯ ಪ್ರೂಟ್ಸ್ ತಂತ್ರಾಂಶ, ಇಲ್ಲಿದೆ ಸಂಪೂರ್ಣ ಮಾಹಿತಿ
ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಚದುರಿದ ಮಳೆಯೂ ಆಗುತ್ತಿದೆ. ಬೆಂಗಳೂರಿನಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದೆ..
ಜೂನ್ 28 ರಿಂದ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾದರೆ, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ಚಾಮರಾಜನಗರ, ಮಂಡ್ಯ, ಮೈಸೂರು, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Good information posted haer it’s very useful tank you.