ಹವಾಮಾನ ವೈಪರೀತ್ಯದಿಂದಾಗಿ ಮೇ 5 ರಿದ 7 ರವರೆಗೆ  ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂಬತ್ತು ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗುವ (weather forecast three days rain alert) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಎರಡು ದಿನಗಳವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆಯಿರುವುದರಿಂದ  ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ’.

‘ಉಳಿದ ಜಿಲ್ಲೆಗಳಲ್ಲಿ ಗುಡುಗು ಮತ್ತು ಸಿಡಿಲಿನ ಆರ್ಭಟ ಇರಲಿದೆ.  ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು’ ಎಂದು ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *