ಅರಬ್ಬಿ ಸಮುದ್ರದ ಪೂರ್ವ ಮಧ್ಯಭಾಗ ಹಾಗೂ ಉತ್ತರ ಅಂಡಮಾನ್ ಭಾಗಗಳಲ್ಲಿ ಮೈಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಅಕ್ಟೋಬರ್ 23 ಮತ್ತು 13 ರಂದು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರ ಗ್ರಾಮಾಂತರ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಾಮರಾಜನಗರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ಮೈಸೂರು, ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆಯ 10ನೇ ಕಂತಿನ ಲಿಸ್ಟ್ ನಲ್ಲಿ ನಿಮ್ಮ ಹೆಸರು ಮೊಬೈಲ್ ನಲ್ಲಿಯೇ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 12 ರಿಂದ ಅಕ್ಟೋಬರ್ 15 ರವರೆಗೆ ಮಳೆಯಾಗುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೋಮವಾರ ವಿವಿಧ ಭಾಗಗಳಲ್ಲಿ ಮಳೆಯಾಗಿದ್ದು, ಇನ್ನೆರಡು ದಿನ ಮಳೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್ 12 ರಿಂದ 13 ರವರೆಗೆ ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಹಾಗೂ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ ಮಹಾರಾಷ್ಟ್ರ, ಕೇರಳ, ತಮಿಳುನಾಡು, ಗೋವಾ, ಪುದಚೇರಿ ರಾಜ್ಯಗಳಲ್ಲಿ ಮುಂದಿನ ನಾಲ್ಕು ದಿನ ಮಳೆ ಮುಂದುವರೆಯುವ ಸಾಧ್ಯತೆಯಿದೆ.