ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ – ಇಲ್ಲಿದೆ ಸಂಪೂರ್ಣ ಮಾಹಿತಿ

Written by Ramlinganna

Published on:

ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಮುಂದಿನ ಐದು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ಈವರೆಗೆ ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಾಗಿದ್ದರಿಂದ ರೈತರು ನಿರಾಶೆಗೊಂಡಿದ್ದರು. ಆದರೆ ಈಗ ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದರಿಂದ ರೈತರಲ್ಲಿ ಸಂತಸ ಮೂಡಿದೆ.

ಕರಾವಳಿಯ ಮೂರು ಜಿಲ್ಲೆಗಳಲ್ಲಿ 115 ಮಿ.ಮೀ ನಿಂದ 204 ಮಿ. ಮೀವರೆಗೆ ಮಳೆಯಾಗುವ ಸಾಧ್ಯೆತೆಯಿರುವುದರಿಂದ ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಹ ಮುಂದಿನ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ  ಹಾಗಾಗಿ ಈ ಜಿಲ್ಲೆಗಳಲ್ಲಿ ಐದು ದಿನ  ಯೆಲ್ಲೈ ಮತ್ತು ಆರೇಂಜ್ ಅಲರ್ಟ್ ನೀಡಲಾಗಿದೆ.

ಜುಲೈ 4 ರಿಂದ ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮತ್ತಷ್ಟು ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಹಾಗಾಗಿ ತುಮಕೂರು, ಮೈಸೂರು, ಹಾಸನ, ಬೆಳಗಾವಿ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಯಾವ ಯಾವ ಜಿಲ್ಲೆಗಳಲ್ಲಿ ಯಾವ ದಿನಾಂಕದವರೆಗೆ ಮಳೆ?

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಜುಲೈ 3 ರಿಂದ 7 ರವರೆಗೆ ಆರೇಂಜ್ ಅಲರ್ಟ್ ನೀಡಲಾಗಿದೆ.

ಮಲೆನಾಡು ಜಿಲ್ಲೆಗಳಾದ ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಜುಲೈ 4 ರಿಂದ 7ರವರೆಗೆ ಆರೇಂಜ್ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ :  ಪಿಎಂ ಕಿಸಾನ್ 14ನೇ ಕಂತಿನ ಫಲಾನುಭವಿಗಳ ಪಟ್ಟಿ ಬಿಡುಗಡೆ – ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೇ ಇಲ್ಲೇ ಚೆಕ್ ಮಾಡಿ

ಮೈಸೂರು, ಹಾಸನ, ಹಾವೇರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಜುಲೈ 5 ರಂದು ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಬಾಗಲಕೋಟೆ, ತುಮಕೂರು, ಬೀದರ್, ಬೆಳಗಾವಿ, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಕೊಪ್ಪಳ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಸಾಧಾರಣ ಮಳಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯ ಮಾಹಿತಿ ನೀಡುತ್ತದೆ ಮೇಘದೂತ್ ಆ್ಯಪ್

ನಿಮಗೆ ಮಳೆಯ ಮಾಹಿತಿ ಬೇಕೆ? ಯಾರಿಗೂ ಕರೆ ಮಾಡದೆ ನಿಮ್ಮ ಮೊಬೈಲ್ ನಲ್ಲೇ ಮಳೆಯ ಮಾಹಿತಿ ಚೆಕ್ ಮಾಡಬೇಕೆ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ. ಹೌದು, ಮೇಘೂದೂತ್ ಆ್ಯಪ್ ನಿಮ್ಮ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಐದು ದಿನ ಮೊದಲೇ ನಿಮ್ಮ ಭಾಗದಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಗೊತ್ತಾಗುತ್ತದೆ.

ಮೇಘದೂತ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ?

ಮೇಘದೂತ್ ಆ್ಯಪ್ ನಿಮ್ಮ ಮೊಬೈಲಿಗೆ ಡೌನ್ಲೋಡ್ ಮಾಡಿಕೊಳ್ಳಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಅಲ್ಲಿ ನಿಮಗೆ ಇನಸ್ಟಾಲ್ ಆಫಶನ್ ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ ನೀವು ಆ್ಯಪ್ ಇನಸ್ಟಾಲ್ ಮಾಡಿಕೊಂಡು ಮುಂದಿನ ಐದು ದಿನ ಮಳೆಯ ಮಾಹಿತಿ ಪಡೆಯಬಹುದು.

ವರುಣಮಿತ್ರ ಉಚಿತ ಸಹಾಯವಾಣಿಗೆ ಕರೆ ಮಾಡಿ ಮಳೆಯ ಮಾಹಿತಿ ಪಡೆಯಿರಿ

ನೀವು ಮನೆಯಲ್ಲಿಯೇ ಕುಳಿತು ನಿಮ್ಮ ಬಳಿಯಿರುವ ಮೊಬೈಲ್ ನಿಂದ ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿ ಮಳೆಯ ಮಾಹಿತಿ ಪಡೆಯಬಹುದು. ಹೌದು, 92433 45433 ಸಹಾಯವಾಣಿಗೆ ಕರೆ ಮಾಡಿದರೆ ಸಾಕು, ನಿಮ್ಮ ಊರಿನ ಸುತ್ತಮುತ್ತ ಯಾವಾಗ ಮಳೆಯಾಗುತ್ತದೆ? ಯಾವ ಪ್ರಮಾಣದಲ್ಲಿ ಮಳೆಯಾಗುತ್ತದೆ. ಮುಂದಿನ ಐದಿ ದಿನಗಳ ಕಾಲ ಹವಾಮಾನ ಹೇಗಿರುತ್ತದೆ ಎಂಬಿತ್ಯಾದಿಗಳ ಮಾಹಿತಿಯನ್ನು ನೀಡಲಾಗುವುದು. ಇದಕ್ಕೆ ಸಂಪೂರ್ಣ ಉಚಿತವಾಗಿರುತ್ತದೆ.

Leave a comment