Weather report Rain alert ಶಾಹೀನ್ ಚಂಡಮಾರುತದ ಪರಿಣಾಮದಿಂದ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ 17 ಜಿಲ್ಲೆಗಳಲ್ಲಿ ಅಕ್ಟೋಬರ್ 4 ರಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Weather report Rain alert ಯಾವ ಯಾವ ಜಿಲ್ಲೆಗಳಲ್ಲಿ ಮಳೆ
ಅಕ್ಟೋಬರ್ 7 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಅಕ್ಟೋಬರ್ 4 ರಿಂದ ಅಕ್ಟೋಬರ್ 7 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಅಕ್ಟೋಬರ್ 4 ರಂದು ಯೆಲ್ಲೋ ಅಲರ್ಟ್, 5 ಮತ್ತು 6 ರಂದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಕ್ಟೋಬರ್ 4 ಮತ್ತು 5 ರಂದು ಆರೇಂಜ್ ಅಲರ್ಟ್ ಇರಲಿದೆ. ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಲೆನಾಡು, ಕರಾವಳಿಯಲ್ಲಿ ಅಕ್ಟೋಬರ್ 5 ರಿಂದ ಎರಡು ದಿನ ಮಳೆಯಾಗಲಿದೆ.
ದಾಮಿನಿ ಆ್ಯಪ್ ಡೌನ್ಲೋಡ್ ಮಾಡಿ ಸಿಡಿಲಿನ ಮಾಹಿತಿ ಪಡೆಯಿರಿ
ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ದಾಮಿನಿ ಆ್ಯಪ್ ನ್ನು ಡೌನ್ಲೋಡ್ ಮಾಡಿ ಐದು ನಿಮಿಷ ಮೊದಲೇ ಸಿಡಿಲಿನ ಮಾಹಿತಿ ಪಡೆದುಕೊಳ್ಳಬಹುದು. ಹೌದು ರೈತರು ಗೂಗಲ್ ಪ್ಲೇ ಸ್ಟೋರ್ ನಲ್ಲಿ Damini app ಎಂದು ಟೈಪ್ ಮಾಡಬೇಕು. ಆಗ ದಾಮಿನಿ ಆ್ಯಪ್ ಮೇಲ್ಗಡೆ ಕಾಣಿಸುತ್ತದೆ. ಅಲ್ಲಿ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿಕೊಳ್ಳಬಹುದು. ಅಥವಾ ಈ
https://play.google.com/store/apps/details?id=com.lightening.live.damini
ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ದಾಮಿನಿ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬಹುದು. ನಂತರ ಓಪನ್ ಮೇಲೆ ಕ್ಲಿಕ್ ಮಾಡಿದರೆ ದಾಮಿನಿ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಂಡು ಸರಿ ಮೇಲೆ ಕ್ಲಿಕ್ ಮಾಡಬೇಕು.
ನಿಮ್ಮ ಮೊಬೈಲ್ ನಲ್ಲಿ ಜಿಪಿಎಸ್ ಆನ್ ಇರಬೇಕು. ಜಿಪಿಎಸ್ ಆನ್ ಇದ್ದರೆ ಸಿಡಿಲಿನ ಸ್ಥಳ ಗುರುತಿಸಲು ಸುಲಭವಾಗುತ್ತದೆ. ಇದಕ್ಕೆ ನಾನು ಒಪ್ಪುತ್ತೇನೆ ಬಾಕ್ಸ್ ಆಯ್ಕೆ ಮಾಡಿಕೊಂಡು ಜಿಪಿಎಸ್ ನ್ನು ಸಕ್ರಿಯಗೊಳಿಸಿ ಮೇಲೆ ಕ್ಲಿಕ್ ಮಾಡಬೇಕು. ನಂತರ ವೈಲ್ ಯೂಸಿಂಗ್ ದಿ ಆ್ಯಪ್ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ಒಂದು ಸರ್ಕಲ್ ಕಾಣಿಸುತ್ತದೆ. ಅಲ್ಲಿಎ ಷ್ಟು ನಿಮಿಷದೊಳಗೆ ನೀವು ಇರುವ ಸುತ್ತಮತ್ತಲಿನ ಪ್ರದೇಶದ ಎಲ್ಲೆಲ್ಲಿ ಸಿಡಿಲು ಬೀಳುವ ಸಾಧ್ಯತೆ ಎಂಬುದು ಕಾಣಿಸುತ್ತದೆ. ಕೆಳಗಡೆ ನಿಮಿಷ ಕಾಣಿಸುತ್ತದೆ. ಅದಕ್ಕೆ ಬಣ್ಣವನ್ನು ಸಹ ಗುರುತಿಸಲಾಗಿರುತ್ತದೆ. ಆ ಆಧಾರದ ಮೇಲೆ 7 ನಿಮಿಷದೊಳಗೆ ಎಲ್ಲೆಲ್ಲಿ 14 ನಿಮಿಷದೊಳಗೆ ಎಲ್ಲೆಲ್ಲಿ ಹಾಗೂ 21 ನಿಮಿಷದೊಳಗೆ ಎಲ್ಲೆಲ್ಲಿ ಸಿಡಿಲು ಬೀಳುತ್ತವೆ ಎಂಬ ಮಾಹಿತಿ ಕಾಣಿಸುತ್ತದೆ.