ಇಂದಿನಿಂದ ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Written by Ramlinganna

Updated on:

Weather report Rain ರಾಜ್ಯದ ಕೆಲವು ಪ್ರದೇಶಗಲ್ಲಿ ಸೋಮವಾರ ಹಾಗೂ ಮಂಗಳವಾರ ಎರಡು ದಿನ ಕಾಲ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನವ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣಒಳನಾಡಿನ ಕೆಲವು ಭಾಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಕವಿದ ವಾತಾವರಣ ಇರಲಿದೆ. ಮುಂದಿನ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಎಂದು ಸೂಚನೆ ನೀಡಿದೆ.

Weather report Rain ನಿಮ್ಮೂರಿನಲ್ಲಿ ಮಳೆಯಾಗುವುದೇ? ಈ ನಂಬರಿಗೆ ಕರೆ ಮಾಡಿ ತಿಳಿದುಕೊಳ್ಳಿ

ನಿಮ್ಮೂರಿನಲ್ಲಿಮಳೆ ಯಾವಾಗ ಬರುತ್ತದೆ ಹಾಗೂ ನಿಮ್ಮೂರಿನ ಸುತ್ತಮುತ್ತಲಿನ ಹವಾಮಾನ ವರದಿಯನ್ನು ತಿಳಿದುಕೊಳ್ಳಲು ವರುಣಮಿತ್ರ ನಂಬರಿಗೆ ಕರೆ ಮಾಡಬೇಕು. ಹೌದು ವರುಣಮಿತ್ರ ಸಹಾಯವಾಣಿ ನಂಬರ್ 92433 45433 ನಂಬರಿಗೆ ಕರೆ ಮಾಡಿದರೆ ಸಾಕು, ನೀವು ಕೇವಲ ಒಂದೇ ನಿಮಿಷದಲ್ಲಿ ಹವಾಮಾನ ವರದಿಯನ್ನು ತಿಳಿದುಕೊಳ್ಳಬಹುದು.

ಇದನ್ನೂ ಓದಿ Bele vime ಯಾರಿಗೆ ಎಷ್ಟು ಜಮೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಈ ನಂಬರಿಗೆ ರೈತರು ಇದರ ಸದುಪಯೋಗ ಪಡೆದುಕೊಳ್ಳಬಹುದು. ಇದಕ್ಕಾಗಿ  ರೈತರು ಎಲ್ಲಿಯೂ ಹೋಗಬೇಕಿಲ್ಲ ಮನೆಯಲ್ಲಿಯೇ ಕುಳಿತು  ಕರೆ ಮಾಡಿ ತಿಳಿದುಕೊಳ್ಳಬಹುದು.

ಕೈಕೊಟ್ಟ ಮುಂಗಾರು ಹಿಂಗಾರು ಮಳೆ

ಈ ವರ್ಷ ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ 216 ತಾಲೂಕುಗಳನ್ನು ಬರಗಾಲ ಪ್ರದೇಶವೆಂದು ಘೋಷಣೆ ಮಾಡಲಾಯಿತು. ಮುಂಗಾರು ಕೈಕೊಟ್ಟಿದ್ದರಿಂದ ರೈತರಿಗೆ ಅಪಾರ ಹಾನಿಯಾಗಿದೆ. ಬರಗಾಲವೆಂದು ಘೋಷಣೆ ಮಾಡಿದ್ದರಿಂದ ಅಲ್ಪ ಸಹಾಯವಾಗಬಹುದೆಂದು ರೈತರು ನಿರೀಕ್ಷೆಯಲ್ಲಿದ್ದಾರೆ. ಆದರೆ ಇನ್ನೂ ಬರಗಾಲ ಹಣ ಬಿಡುಗಡೆಯಾಗಿಲ್ಲ.

ಬರಗಾಲ ಹಣ ಬಿಡುಗಡೆಯ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ

ರಾಜ್ಯದಲ್ಲಿ 216 ತಾಲೂಕುಗಳನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿದ್ದರಿಂದ ರೈತರು ತಮಗೆ ಹಣ ಜಮಯಾಗುವುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮಗೆ ಪರಿಹಾರ ನಮೂದು ಸಂಖ್ಯೆ ಹಾಗೂ ಆಧಾರ್ ಸಂಖ್ಯೆ ಎಂಬ ಎರಡು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ಆಧಾರ್ ಸಂಖ್ಯೆ ಮೇಲೆ ಕ್ಲಿಕ್ ಮಾಡಬೇಕು.ನಂತರ ನೀವು  Select Calamity Type ನಲ್ಲಿ Drought ಆಯ್ಕೆ ಮಾಡಿಕೊಳ್ಳಬೇಕು. Select Year Type ನಲ್ಲಿ  2023-24 ಆಯ್ಕೆ ಮಾಡಿಕೊಳ್ಳಬೇಕು.

ಒಂದು ವೇಳೆ ನೀವು ಕಳೆದ ವರ್ಷದ ಬೆಳೆ ಹಾನಿ ಪರಿಹಾರ ಚೆಕ್ ಮಾಡಬೇಕಾದರೆ ಅಂದರೆ 2022-23 ಆಯ್ಕೆ ಮಾಡಿಕೊಂಡು ಯಾವ ಬ್ಯಾಂಕಿಗೆ ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಇದೇ ರೀತಿ  2021-22 ಆಯ್ಕೆ ಮಾಡಿಕೊಳ್ಳಬೇಕು. ಆ ಸಾಲಿನ ಬೆಳೆ ಹಾನಿ ಪರಿಹಾರ ಜಮೆ ಕುರಿತು ಸಹ ಚೆಕ್ ಮಾಬಹುದು.

ನೀವು ಪ್ರಸಕ್ತ ಸಾಲಿನ ಬರಗಾಲ ಪರಿಹಾರದ ಸ್ಟೇಟಸ್ ಚೆಕ್ ಮಾಡಲು ಸೆಲೆಕ್ಟ್ ಕಾಲಮಿಟಿ ಟೈಪ್ ನಲ್ಲಿ Drought ಆಯ್ಕೆ ಮಾಡಿಕೊಳ್ಳಬೇಕು.   Enter Adhar ನಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಬೇಕು. ನಂತರ Captcha Fetch details ಬಾಕ್ಸ್ ನಲ್ಲಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ವಿವರಗಳನ್ನು ಪಡೆಯಲು/Fetch details ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಬರಗಾಲ ಪರಿಹಾರ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡಬಹುದು.

Leave a Comment