ಶಾಹೀನ್ ಚಂಡಮಾರುತದ ಪರಿಣಾಮದಿಂದ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ 17 ಜಿಲ್ಲೆಗಳಲ್ಲಿ ಅಕ್ಟೋಬರ್ 4 ರಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 7 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಅಕ್ಟೋಬರ್ 4 ರಿಂದ ಅಕ್ಟೋಬರ್ 7 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಅಕ್ಟೋಬರ್ 4 ರಂದು ಯೆಲ್ಲೋ ಅಲರ್ಟ್, 5 ಮತ್ತು 6 ರಂದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಕ್ಟೋಬರ್ 4 ಮತ್ತು 5 ರಂದು ಆರೇಂಜ್ ಅಲರ್ಟ್ ಇರಲಿದೆ. ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಲೆನಾಡು, ಕರಾವಳಿಯಲ್ಲಿ ಅಕ್ಟೋಬರ್ 5 ರಿಂದ ಎರಡು ದಿನ ಮಳೆಯಾಗಲಿದೆ.