today weather ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ ಡಿಸೆಂಬರ್ 3 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವೆಂಬರ್ ತಿಂಗಳಲ್ಲಿ ಮಳೆಯಿಂದ ತತ್ತರಿಸಿದ ರಾಜ್ಯದ ಜನತೆಗೆ ಮತ್ತೆ ಮಳೆಯ ಆತಂಕ ಎದುರಾಗಿದೆ. ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದ್ದರಿಂದ ರೈತರಿಗೆ ಆತಂಕ ಎದುರಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು, ಚಾಮರಾಜನಗರ, ಉಡುಪಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿಯೂ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕ ಕರಾವಳಿ ಹಾಗೂ ಮಲೆನಾಡಿನಲ್ಲಿ ಡಿಸೆಂಬರ್ 2 ರವರೆಗೆ ಮಳೆಯಾಗಲಿದೆ.
ಇದನ್ನೂ ಓದಿ : ಪಹಣಿಯಲ್ಲಿರುವ ಜಂಟಿ ಖಾತೆಯಿಂದ ಒಬ್ಬರ ಹೆಸರು ಮಾಡಿಕೊಳ್ಳುವುದು ಹೇಗೆ… ? ಜಂಟಿ ಖಾತೆಯಿಂದಾಗುವ ಸಮಸ್ಯೆಗಳು, ಅರ್ಜಿ ಪ್ರಕ್ರಿಯೆ ಹೇಗೆ…? ಇಲ್ಲಿದೆ ಮಾಹಿತಿ
ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಡಿಸೆಂಬರ್ 2 ರಂದು ಸಾಧಾರಣ ಮಳೆಯಾಗಲಿದೆ. ಉಳಿದ ದಿನಗಳಲ್ಲಿ ಮಳೆಯ ಲಕ್ಷಣವಿಲ್ಲ. ಉಥ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು. ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಕಲಬಬುರಗಿ ಜಿಲ್ಲೆಯಲ್ಲಿ ಸೋಮವಾರದಿಂದ ಮೋಡ ಕವಿದ ವಾತಾವರಣವಿತ್ತು. ಮಂಗಳವಾರವೂ ಮೋಡ ಕವಿದ ವಾತಾವರಣ ಹಾಗೂ ಮಧ್ಯಾಹ್ನ 3 ರಿಂದ 4 ಗಂಟೆಯವರೆಗೆ ತುಂತುರು ಮಳೆಯಾಯಿತು.
today weather ತುಂತುರು ಮಳೆ ತಂದ ಆತಂಕ
ಕಲಬುರಗಿ ಜಿಲ್ಲೆ ಸೇರಿದಂತೆ ಯಾದಗಿರಿ, ಬೀದರ್, ರಾಯೂಚುರು ಜಿಲ್ಲೆಗಳಲ್ಲಿ ಕಂಡುಬಂದ ಮೋಡ ಕವಿದ ವಾತಾವರಣ ರೈತರಲ್ಲಿ ಆತಂಕ ಸೃಷ್ಟಿ ಮಾಡಿದೆ. ಈಗಾಗಲೇ ಕೋಯ್ಲು ಮಾಡಿದ ರೈತರ ಧಾನ್ಯ ಒಣಗಿಸಲು ಸಮಸ್ಯೆಯಾಗುತ್ತಿದೆ. ಅಷ್ಟೇ ಅಲ್ಲ, ತೊಗರಿ ರಾಶಿ ಮಾಡುವ ರೈತರಿಗೆ ಆತಂಕ ಎದುರಾಗಿದೆ. ಈಗಾಗಲೇ ನವೆಂಬರ್ ಆರಂಭದಲ್ಲಿ ಉಂಟಾದ ವಾತಾವರಣ ವೈಪರೀತ್ಯದಿಂದಾಗಿ ತೊಗರಿ ಬೆಳೆಯ ಹೂವು ಉದುರಿ ಇಳುವರಿಗೆ ಹೊಡೆತ ಬಿದ್ದಿದೆ. ಈಗಿರುವ ವಾತಾವರಣದಿಂದ ಇದ್ದ ಹೂವು ಉದುರಿ ಹಾಕಿದ ಖರ್ಜು ಬರದ ಪರಿಸ್ಥಿತಿಯಲ್ಲಿದ್ದಾರೆ.
ದಾಮಿನಿ ಆ್ಯಪ್ ಡೌನ್ಲೋಡ್ ಮಾಡಿ ಸಿಡಿಲಿನ ಮಾಹಿತಿ ಪಡೆಯಿರಿ
ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ದಾಮಿನಿ ಆ್ಯಪ್ ನ್ನು ಡೌನ್ಲೋಡ್ ಮಾಡಿ ಐದು ನಿಮಿಷ ಮೊದಲೇ ಸಿಡಿಲಿನ ಮಾಹಿತಿ ಪಡೆದುಕೊಳ್ಳಬಹುದು. ಹೌದು ರೈತರು ಗೂಗಲ್ ಪ್ಲೇ ಸ್ಟೋರ್ ನಲ್ಲಿ Damini app ಎಂದು ಟೈಪ್ ಮಾಡಬೇಕು. ಆಗ ದಾಮಿನಿ ಆ್ಯಪ್ ಮೇಲ್ಗಡೆ ಕಾಣಿಸುತ್ತದೆ. ಅಲ್ಲಿ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿಕೊಳ್ಳಬಹುದು. ಅಥವಾ ಈ
https://play.google.com/store/apps/details?id=com.lightening.live.damini
ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ದಾಮಿನಿ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬಹುದು. ನಂತರ ಓಪನ್ ಮೇಲೆ ಕ್ಲಿಕ್ ಮಾಡಿದರೆ ದಾಮಿನಿ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಂಡು ಸರಿ ಮೇಲೆ ಕ್ಲಿಕ್ ಮಾಡಬೇಕು.
ನಿಮ್ಮ ಮೊಬೈಲ್ ನಲ್ಲಿ ಜಿಪಿಎಸ್ ಆನ್ ಇರಬೇಕು. ಜಿಪಿಎಸ್ ಆನ್ ಇದ್ದರೆ ಸಿಡಿಲಿನ ಸ್ಥಳ ಗುರುತಿಸಲು ಸುಲಭವಾಗುತ್ತದೆ. ಇದಕ್ಕೆ ನಾನು ಒಪ್ಪುತ್ತೇನೆ ಬಾಕ್ಸ್ ಆಯ್ಕೆ ಮಾಡಿಕೊಂಡು ಜಿಪಿಎಸ್ ನ್ನು ಸಕ್ರಿಯಗೊಳಿಸಿ ಮೇಲೆ ಕ್ಲಿಕ್ ಮಾಡಬೇಕು. ನಂತರ ವೈಲ್ ಯೂಸಿಂಗ್ ದಿ ಆ್ಯಪ್ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ಒಂದು ಸರ್ಕಲ್ ಕಾಣಿಸುತ್ತದೆ. ಅಲ್ಲಿಎ ಷ್ಟು ನಿಮಿಷದೊಳಗೆ ನೀವು ಇರುವ ಸುತ್ತಮತ್ತಲಿನ ಪ್ರದೇಶದ ಎಲ್ಲೆಲ್ಲಿ ಸಿಡಿಲು ಬೀಳುವ ಸಾಧ್ಯತೆ ಎಂಬುದು ಕಾಣಿಸುತ್ತದೆ. ಕೆಳಗಡೆ ನಿಮಿಷ ಕಾಣಿಸುತ್ತದೆ. ಅದಕ್ಕೆ ಬಣ್ಣವನ್ನು ಸಹ ಗುರುತಿಸಲಾಗಿರುತ್ತದೆ. ಆ ಆಧಾರದ ಮೇಲೆ 7 ನಿಮಿಷದೊಳಗೆ ಎಲ್ಲೆಲ್ಲಿ 14 ನಿಮಿಷದೊಳಗೆ ಎಲ್ಲೆಲ್ಲಿ ಹಾಗೂ 21 ನಿಮಿಷದೊಳಗೆ ಎಲ್ಲೆಲ್ಲಿ ಸಿಡಿಲು ಬೀಳುತ್ತವೆ ಎಂಬ ಮಾಹಿತಿ ಕಾಣಿಸುತ್ತದೆ.