ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

Written by By: janajagran

Updated on:

Weather report  ರಾಜ್ಯದಲ್ಲಿ ಅಕಾಲಿಕ ಮಳೆ ಮುಂದುವರೆದಿದೆ. ಏಪ್ರೀಲ್ 22 ರವರೆಗೆ ಇದೇ ರೀತಿ ಅಲ್ಲಲ್ಲಿ ಚದುರಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಏಪ್ರೀಲ್ 18 ರಿಂದ 22 ರವರೆಗೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಏಪ್ರೀಲ್ 18 ರಿಂದ 20 ರವರೆಗೆ ಸಾಧಾರಣ ಮಳೆಯಾಗಲಿದೆ. ಮೋಡ ಕವಿದ ವಾತಾವರಣದೊಂದಿದೆ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ.

Weather report  ಯಾವ ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ?

ಏಪ್ರಿಲ್ 22ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದೆ. . ಬೆಂಗಳೂರಿನಲ್ಲಿ ವಾತಾವರಣ ಇನ್ನೂ ಮೂರು ದಿನಗಳ ಕಾಲ ಇದೇ ರೀತಿ ಮುಂದುವರೆಯಲಿದೆ.

ಇತ್ತೀಚೆಗೆ ಸುರಿದ ಮಳೆಯಿಂದಾಗಿ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಇಳಿಕೆಯಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ ರೈತರಿಗೆ ಭರ್ಜರಿ ಗುಡ್ ನ್ಯೂಸ್: ರೈತರ ಖಾತೆಗೆ ಬರ ಪರಿಹಾರ ಜಮೆ

ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ 40.25 ಮಿ.ಮೀ ರಷ್ಟು ಮಳೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ ಸರಾಸರಿ 16.07 ಮಿಮೀ, ವಿರಾಜಪೇಟ ತಾಲೂಕಿನಲ್ಲಿ ಸರಾಸರಿ 12.75 ಮಿ.ಮೀ, ಸೋಮವಾರಪೇಟ ತಾಲೂಕಿನಲ್ಲಿ ಸರಾಸರಿ 12. ಮಿ.ಮೀ ಮಳೆಯಾಗಿದೆ.

ಉಚಿತ ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ – ಇಂದೇ ಅರ್ಜಿ ಸಲ್ಲಿಸಿ ಮನೆ ಕಟ್ಟಿಸಿಕೊಳ್ಳಿ

2022-23ನೇ ಸಾಲಿಗೆ ಹೊಸದಾಗಿ ನಿಗದಿಪಡಿಸಿದ ಗುರಿಯಂತೆ ಅಲೆಮಾರಿ ಅರೆ ಅಲೆಮಾರಿ ಜನಾಂಗದರಿಗೆ ವಸತಿ ಸೌಲಭ್ಯಕ್ಕಾಗಿ ಅಲೆ ಮಾರಿ ಅರೆ ಅಲೆಮಾರಿ ಜನಾಂಗದ ವಸತಿ ರಹಿತ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ನಿಗದಿಪಡಿಸಿದ ಗುರಿಗನುಗುಣವಾಗಿ 115 ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಸಲ್ಲಿಸಬೇಕು.

ಆಧಾರ್ ಕಾರ್ಡ್ , ರೇಶನ್ ಕಾರ್ಡ್, ಸ್ವಂತ ನಿವೇಶನ ಹೊಂದಿರುವ ದಾಖಲಾತಿ ಪ್ರತಿ, ತಹಶೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು. ಇದರೊಂದಿಗೆ ವಾಸಸ್ಥಳ ಪ್ರಮಾಣ ಪತ್ರ  ಸಲ್ಲಿಸಬೇಕು. ಬ್ಯಾಂಕ್ ಖಾತೆಯ ಪ್ರತಿ ಇರಬೇಕು. ನಿವೇಶನದ ಖಾತಾ ಪ್ರತಿ ಇರಬೇಕು. ಹಾಗೂ ಇತ್ತೀಚಿನ ಎರಡು ಭಾವಚಿತ್ರದೊಂದಿಗೆ 2022-23 ರ ಮಾರ್ಚ್ 11 ರೊಳಗಾಗಿ ಸಂಬಂಧಪಟ್ಟ ಆಯಾ ತಾಲೂಕುಗಳ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.

ಕೊಡಗು ಜಿಲ್ಲೆಯಿಂದಲೂ ಅಲೆಮಾರಿ, ಅರೆ ಅಲೆಮಾರಿ ಜನಾಂಗಕ್ಕೆ ವಸತಿ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿರುವ ಪ್ರವರ್ಗ 1 ಕ್ಕೆ ಸೇರಿದ ಅಲೆಮಾರಿ ಅರೆ ಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯ ಕಲ್ಲಿಸಲು ಆರ್ಜಿ ಆಹ್ವಾನಿಸಲಾಗಿದೆ.

Leave a Comment