ಪಶು ಸಂಗೋಪನೆ ಇಲಾಖೆಯ ಅನುಗ್ರಹ ಯೋಜನೆಯನ್ನು ಮು0ದುವರೆಸಲು ಸರ್ಕಾರದ ಆದೇಶವಾಗಿದೆ ಎಂದು ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಮಂಗಳವಾರ ನಡೆದ ವಿವಿಧ ವಿವಿಧ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಶುಪಾಲನೆ ಇಲಾಖೆಯ ವರದಿ ಪಡೆಯುವ ವೇಲೆ ಮಾತನಾಡಿ, ಅನುಗ್ರಹ ಯೋಜನೆಯನ್ನು ಮುಂದುವರೆಸಲು ಆದೇಶ ಹೊರಡಿಸಲಾಗಿದೆ. ಆಕಸ್ಮಿಕವಾಗಿ ಮೃತಪಟ್ಟ ಕುರಿಗಳಿಗೆ 5 ಸಾವಿರ ರೂಪಾಯಿ, ದನಗಳಿಗೆ 10 ಸಾವಿರ ರೂಪಾಯಿ ಹಾಗೂ ಕುರಿ ಮರಿಗಳಿಗೆ 2500 ರೂಪಾಯಿ ನೀಡಲು ಆದೇಶದಲ್ಲಿ ತಿಳಿಸಲಾಗಿದೆ.
ಕುರಿ ಹಾಗೂ ಮೇಕೆಗಳು ಆಕಸ್ಮಿಕವಾಗಿ ಮರಣ ಹೊಂದಿದಲ್ಲಿ ಹಾಗೂ ಸಾಂಕ್ರಾಮಿಕ ರೋಗಗಳಿಂದ ಮರಣ ಹೊಂದಿದರೆ ಪರಿಹಾರ ಧನ ವಿತರಿಸುವ ಅನುಗ್ರಹ ಯೋಜನೆಯನ್ನು 2017ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದರು. ಕುರಿಗಳಿಗೆ ಮೇಲಿಂದ ಮೇಲೆ ಆಗಮಿಸುವ ರೋಗ ಹಾಗೂ ನೈಸರ್ಗಿಕ ವಿಕೋಪಕ್ಕೆ ತುತ್ತಾಗುತ್ತಿರುವ ಮನಗಂಡು ಸರ್ಕಾರ ಅನುಗ್ರಹ ಯೋಜನೆಯನ್ನು ಜಾರಿಗೊಳಿಸಿತ್ತು. ಆದರೆ ಈ ಯೋಜನೆಯನ್ನು ಬಿಜೆಪಿ ಸರ್ಕಾರ ಹಿಂಪಡೆದಿತ್ತು. ಅನುಗ್ರಹ ಯೋಜನೆಯನ್ನು ಮತ್ತೆ ಜಾರಿಗೆ ತರಬೇಕೆಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ ಮಾಡುವ ಎಚ್ಚಚರಿಕೆ ನೀಡಿದ್ದರು. ಸಿದ್ದರಾಮಯ್ಯನವರ ಒತ್ತಾಯಕ್ಕೆ ಮಣಿದ ರಾಜ್ಯ ಸರ್ಕಾರದ ಅನುಗ್ರಹ ಯೋಜನೆಗೆ ಅನುದಾನ ಮೀಸಲಿಡಲಾಗುವುದು ಎಂದು ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದರು. ಈಗ ಅನುಗ್ರಹ ಯೋಜನೆಯನ್ನು ಮುಂದುರೆಸಲು ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ : ಮೊಬೈಲ್ ನಲ್ಲಿಯೇ ಓರಿಜಿನಲ್ ಪಹಣಿ (Pahani) ಡೋನ್ಲೋಡ್ ಮಾಡಿಕೊಳ್ಳಬೇಕೇ…. ಇಲ್ಲಿದೆ ಸಂಪೂರ್ಣ ಮಾಹಿತಿ
ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅನುಗ್ರಹ ಯೋಜನೆಯನ್ನು ಶೀಘ್ರ ಜಾರಿಗೊಳಿಸಬೇಕೆಂದು ಟ್ವೀಟ್ ಮಾಡಿದ್ದರು. ಶಿವಮೊಗ್ಗ ಜಿಲ್ಲೆಯ ಸಾಗರ ಬಳಿ ಕುರಿಗಾಯಿಯೊಬ್ಬರ 35 ಕುರಿಗಳು ಮೃತಪಟ್ಟಿರುವ ಫೋಟೋ ತೆಗೆದು ಕಂಬಳಿ ಹೊದ್ದು ಪ್ರಚಾರ ನಡೆಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ನಾಟಕ ನಿಲ್ಲಿಸಿ ಕುರಿಗಾಯಿಗಳ ಬಗ್ಗೆ ಕಾಳಜಿಯಿದ್ದರೆ ಕೂಡಲೇ ಅನುಗ್ರಹ ಯೋಜನೆಗೆ ಹಣ ಒದಗಿಸಿ ಎಂದು ಟ್ವೀಟ್ ಮಾಡಿದ್ದರು.
ಈಗ ರಾಜ್ಯ ಸರ್ಕಾರವು ಅನುಗ್ರಹ ಯೋಜನೆಯನ್ನು ಮುಂದುವರೆಸಲಾಗುವುದು ಎಂದು ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ ತಿಳಿಸಿದ್ದಾರೆ.
ಏನಿದು ಅನುಗ್ರಹ ಯೋಜನೆ?
ಕುರಿ ಹಾಗೂ ಮೇಕೆಗಳು ಆಕಸ್ಮಿಕ ಮರಣ ಹೊಂದಿದ್ದಲ್ಲಿ ಹಾಗೂ ದೃಢೀಕೃತ ಸಾಂಕ್ರಾಮಿಕ ರೋಗಗಳಿಂದ ಮೃತಪಟ್ಟರೆ ವಿಮೆಗೆ ಒಳಪಡದ ಆರು ತಿಂಗಳ ಮೇಲ್ಪಟ್ಟ ಪ್ರತಿ ಕುರಿ, ಮೇಕೆಗೆ 5 ಸಾವಿರ ರೂಪಾಯಿ, 3 ರಿಂದ 6ತಿಂಗಳ ಕುರಿ ಹಾಗೂ ಮೇಕೆ ಮರಿಗೆ 2500 ರೂಪಾಯಿ ಪರಿಹಾರ ನೀಡಲಾಗುವುದು.