ಗ್ರಾಮ ಒನ್ ಕೇಂದ್ರಗಳಲ್ಲಿಯೇ ಸಿಗಲಿದೆ ಪಹಣಿ, ಜಾತಿ ಪ್ರಮಾಣ ಪತ್ರ

Written by By: janajagran

Updated on:

What is Grama one scheme ಕರ್ನಾಟಕ ಒನ್, ಬೆಂಗಳೂರು ಒನ್ ಮಾದರಿಯಲ್ಲಿ ಈಗ ಗ್ರಾಮ ಒನ್ ಯೋಜನೆ ಜಾರಿಗೆ ತರಲಾಗುತ್ತಿದೆ. ಹೌದು ಗ್ರಾಮೀಣ ಪ್ರದೇಶದಲ್ಲಿ  ವಿವಿಧ ಇಲಾಖೆಗಳ ಸೇವೆಗಳನ್ನು ಒದಗಿಸುವ ಗ್ರಾಮ ಒನ್ ಯೋಜನೆಯನ್ನು ರಾಜ್ಯದ 12 ಜಿಲ್ಲೆಗಳಲ್ಲಿ  ಆರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಯೋಜನೆಗೆ ವರ್ಚುವಲ್ ಮೂಲಕ ಚಾಲನೆ ನೀಡಿದ್ದಾರೆ.

ಗ್ರಾಮ-ಒನ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸೇವಾಸಿಂಧು ಯೋಜನೆಯಡಿಯಲ್ಲಿ ದೇಶದಲ್ಲಿ ಅತೀ ಹೆಚ್ಚು ಅಂದರೆ ಸುಮಾರು 100ಕ್ಕೂ ಹೆಚ್ಚು ನಾಗರಿಕ ಸೇವೆಗಳನ್ನು ಪಡೆಯಲು ಅರ್ಜಿಗಳನ್ನು ಸ್ವೀಕರಿಸಲಾಗುವುದು.

ಪ್ರಥಮ ಹಂತದಲ್ಲಿ 12 ಜಿಲ್ಲೆಗಳ ಒಟ್ಟು 3026 ಗ್ರಾಮ ಒನ್ ಸೇವಾ ಕೇಂದ್ರಗಳನ್ನು ತೆರೆಯಲಾಗಿದೆ ಬೀದರ್, ಬಳ್ಳಾರಿ, ಕೊಪ್ಪಳ, ಹಾವೇರಿ, ವಿಜಯಪುರ, ಬೆಳಗಾವಿ, ಶಿವಮೊಗ್ಗ, ದಾವಣಗೆರೆ, ತುಮಕೂರು, ಚಿಕ್ಕಮಗಳೂರು, ಕೊಡಗು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಆರಂಭಿಸಲಾಗಿದೆ.

ಗ್ರಾಮ ಒನ್ ಕೇಂದ್ರಗಳ ಆರಂಭದಿಂದ ಸರ್ಕಾರಿ ಸೇವೆಗಳನ್ನು ಪಡೆಯಲು ನಾಗರಿಕರು ಈಗ ಜಿಲ್ಲೆ, ತಾಲೂಕು ಹಾಗೂ ಹೋಬಳಿ ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ. ಗ್ರಾಮಗಳಲ್ಲಿಯೇ ಆರಂಭವಾಗುವ ಗ್ರಾಮ ಒನ್ ಕೇಂದ್ರಗಳಲ್ಲಿ ಎಲ್ಲಾ ಸೌಲಭ್ಯವನ್ನು ಪಡೆಯಬಹುದು. ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಕೇಂದ್ರದಲ್ಲಿ ಪಡೆಯಬಹುದು.  ಗ್ರಾಮ ಒನ್ ಕೇಂದ್ರಗಳ ಮೂಲಕ ಸೇವೆಗಳನ್ನು ಪಡೆಯುವ ಮೂಲಕ ನಾಗರಿಕರು ಸಮಯ ಹಾಗೂ ಹಣ ಉಳಿಸಬಹುದು. ಮದ್ಯವರ್ತಿಗಳಿಂದ ಯಾವುದೇ ಅಪಾಯವಿಲ್ಲ.

ಇದನ್ನೂ ಓದಿ : ನಿಮ್ಮ ಜಮೀನಿಗೆ ಹೋಗುವ ಕಾಲುದಾರಿ, ಎತ್ತಿನಬಂಡಿ ದಾರಿ, ಸರ್ವೆನಂಬರ್, ಊರಿನ ಮ್ಯಾಪ್ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಗ್ರಾಮ ಒನ್ ಕೇಂದ್ರಗಳು ವಾರದ ಏಳು ದಿನಗಳ ಕಾಲ ಕಾರ್ಯಾರಂಭ ಮಾಡಲಿವೆ. ಬೆಳಗ್ಗೆ 8 ರಿಂದ ಸಾಯಂಕಾಲ 8ರವರೆಗೆ ಈ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ಸಕಾಲ, ಮಾಹಿತಿ ಹಕ್ಕು ಅಧಿನಿಯಮ, ಬ್ಯಾಂಕಿಂಗ್ ಸೇವೆಗಳು ಹಾಗೂ ಸಾರ್ವಜನಿಕರ ಕುಂದು-ಕೊರತೆ ನಿವಾರಣೆ ಕೋರಿ ಅರ್ಜಿಗಳನ್ನು ಸಹ ಸ್ವೀಕರಿಸಲಾಗುವುದು.

What is Grama one scheme ಏನೇನು ಸೇವೆಗಳಿರಲಿವೆ?

ಕೃಷಿ. ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ , ಆಧಾರ್ ರೇಷನ್ ಕಾರ್ಡ್, ಕಂದಾಯ, ಆಹಾರ, ಆರೋಗ್ಯ, ಕಾರ್ಮಿಕ ಸೇರಿದಂತೆ ಆಧಾರ್ , ರೇಷನ್,  ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಸಂಧ್ಯಾ ಸುರಕ್ಷಾ, ಜಮೀನಿಗೆ ಸಂಬಂಧಿಸಿದ ಪಹಣಿ ಸೇರಿದಂತೆ ವಿವಿಧ ಸರ್ಕಾರಿ  ಇಲಾಖೆಗಳ ಅಂದಾಜು 100 ಸೇವೆಗಳು ಗ್ರಾಮ ಒನ್ ಕೇಂದ್ರದಲ್ಲಿ ಲಭ್ಯವಾಗಲಿದೆ. ಜನರಿಗೆ ಒಂದೇ ಸೂರಿನಡಿ ಹಲವು ಇಲಾಖೆಗಳ ಸೇವೆ ಸಿಗಲಿದೆ.

ಇದನ್ನೂ ಓದಿ : ಯಾವ ಬ್ಯಾಂಕಿನಲ್ಲಿ ಎಷ್ಟು ಮತ್ತು ಎಲ್ಲೆಲ್ಲಿ ಸಾಲ ಪಡೆದಿದ್ದೀರೆಂಬುದನ್ನು ಮೊಬೈಲ್ ನಲ್ಲಿಯೇ ಉಚಿತವಾಗಿ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 26 ರಂದು ಆರಂಭದಲ್ಲಿ 12 ಜಿಲ್ಲೆಗಳಲ್ಲಿ ಈ ಯೋಜನೆ ಜಾರಿಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಿಸ್ತರಿಸಲಾಗುವುದು. ಹಲವಾರು ಪ್ರಮುಖ ಇಲಾಖೆಗಳ ಎಲ್ಲಾ ಸೇವೆಗಳು ಗ್ರಾಮೀಣ ಪ್ರದೇಶದ ಜನರಿಗೆ ಸುಲಭವಾಗಿ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರೈತರು ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಹಣಿ ಸೇರಿದಂತೆ ಇನ್ನಿತರ ದಾಖಲೆಗಳನ್ನು ಪಡೆಯಲು ಈಗ ಎಲ್ಲಿಯೂ ಹೋಗಬೇಕಿಲ್ಲ. ತಮ್ಮ ಊರಲ್ಲೇ ಇರುವ ಗ್ರಾಮ ಒನ್ ಕೇಂದ್ರದಲ್ಲಿಯೇ ಎಲ್ಲಾ ದಾಖಲೆಗಳನ್ನು ಪಡೆಯಬಹುದು.

Leave a Comment