ಪ್ರತಿಯೊಬ್ಬ ವಿದ್ಯಾರ್ಥಿಗೆ ಉನ್ನತ ವ್ಯಾಸಂಗ ಮಾಡಲು ಬಯಸುತ್ತಾನೆ. ತಾವಂದುಕೊಂಡ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂಬ ಕನಸಿರುತ್ತದೆ. ಆದರೆ ಆರ್ಥಿಕ ಸಮಸ್ಯೆಯಿಂದಾಗಿ ತಮ್ಮ ಗುರಿ ಸಾಧಿಸಲು ಆಗುವುದಿಲ್ಲ. ಇದಕ್ಕೆ ಮುಖ್ಯ ಕಾರಣ ಬಡತನ. ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಯನ್ನು ಮನಗಂಡು ಉನ್ನತ ವ್ಯಾಸಂಗ ಮಾಡಲಿಚ್ಚಿಸುವ ವಿದ್ಯಾರ್ಥಿಗಳಿಗಾಗಿ ಪಶ್ಚಿಮ ಬಂಗಾಳ ಸರ್ಕಾರವು ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ ನೀಡಿದೆ.

ಹೌದು,  ಎಸ್ಎಸ್ಎಲ್ಸಿ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಸೇರಿದಂತೆ ಇನ್ನಿತರ ಉನ್ನತ ವ್ಯಾಸಂಗ ಮಾಡಲು 10 ಲಕ್ಷ ರೂಪಾಯಿಯವರಿಗೆ ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುತ್ತದೆ.  ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ವಿದ್ಯಾರ್ಥಿ ಕ್ರೆಡಿಟ್ ಕಾರ್ಡ್ ಯೋಜನೆ (Student credit card scheme)ಗೆ ಚಾಲನೆ ನೀಡಿದ್ದಾರೆ.

ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಮಮತಾ ಬ್ಯಾನರ್ಜಿಯವರು ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿ ಕ್ರೇಡಿಟ್ ಕಾರ್ಡ್ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಘೋಷಣೆ ಮಾಡಿದ್ದರು. ಈಗ ಈ ಯೋಜನೆಗೆ ಚಾಲನೆ ನೀಡಿದ್ದಾರೆ.

ವಿದ್ಯಾರ್ಥಿ ಕ್ರೇಡಿಟ್ ಕಾರ್ಡ್ ಯೋಜನೆಯಡಿಯಲ್ಲಿ 15 ವರ್ಷಗಳ ಅವಧಿಯವರಿಗೆ ಸಾಲ ಪಡೆಯಬಹುದು.ವಾರ್ಷಿಕ ಸರಳ ಬಡ್ಡಿ ದರದಲ್ಲಿ 10 ಲಕ್ಷ ರೂಪಾಯಿಗಳವರೆಗೆ ಯಾವುದೇ ಜಾಮೀನುಯಿಲ್ಲದೆ ಸಾಲ ನೀಡುತ್ತದೆ. ವಿದ್ಯಾರ್ಥಿ ಪಶ್ಚಿಮಬಂಗಾಳವಷ್ಟೇ ಅಲ್ಲ ಇತರೆ ರಾಜ್ಯ ಮತ್ತು ವಿದೇಶಗಳಲ್ಲಿಯೂ ವ್ಯಾಸಂಗ ಮುಂದುವರೆಸಬಹುದು. ಅರ್ಜಿದಾರ 40 ವರ್ಷದವರೆಗೆ ಸಾಲಸೌಲಭ್ಯವನ್ನು ಪಡೆಯುವ ಅವಕಾಶವಿದೆ.

ಪಶ್ಚಿಮ ಬಂಗಾಳ ಸರ್ಕಾರವು ವಿದ್ಯಾರ್ಥಿ ಕ್ರೆಡಿಟ್ ಕಾರ್ಡ್ ಅನ್ನು ನೀಡಿದ ದೇಶದ ಮೊದಲ ರಾಜ್ಯವಾಗಿದೆ. ಬಿಹಾರ ರಾಜ್ಯದಲ್ಲಿ ಕೆಲವು ಖಾಸಗಿ ಬ್ಯಾಂಕುಗಳಲ್ಲಿ ಮಾತ್ರ ಕ್ರೇಡಿಟ್ ಕಾರ್ಡ್ ಮೂಲಕ ಸಾಲ ನೀಡುತ್ತದೆ.

ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಕ್ರೆಡಿಟ್ ಕಾರ್ಡ್ ಯೋಜನೆಯ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಮತ್ತು ಪ್ರಕ್ರಿಯೆಯ ಮೇಲೆ ನಿಗಾ ಇಡಬೇಕಾಗುತ್ತದೆ ಎಂದು ರಾಜ್ಯ ಶಿಕ್ಷಣ ಸಚಿವ ಬ್ರಾಟ್ಯಾ ಬಸು ತಿಳಿಸಿದ್ದಾರೆ.

ಏನಿದು ವಿದ್ಯಾರ್ಥಿ ಕ್ರೆಡಿಟ್ ಕಾರ್ಡ್ ಯೋಜನೆ?

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ವಿದ್ಯಾರ್ಥಿ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಪ್ರಾರಂಭಿಸಿದ್ದಾರೆ. ಈ ಯೋಜನೆಯ ಮೂಲಕ 10 ನೇ ಅಥವಾ ಅದಕ್ಕಿಂತ ಹೆಚ್ಚಿನ ತರಗತಿಯಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳು ಉನ್ನತ ಅಧ್ಯಯನಕ್ಕಾಗಿ 10 ಲಕ್ಷ ರೂಪಾಯಿಗಳವರೆಗೆ ಸಾಲ ಪಡೆಯಬಹುದು. ಈ ಸಾಲವು ಅವರಿಗೆ ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಲಭ್ಯವಾಗುತ್ತದೆ. ಈ ಸಾಲದ ಪ್ರಯೋಜನವನ್ನು ಪಡೆಯಲು ವಿದ್ಯಾರ್ಥಿಗಳಿಗೆ ಕ್ರೆಡಿಟ್ ಕಾರ್ಡ್ ನೀಡಲಾಗುವುದು. ಕಳೆದ 10 ವರ್ಷಗಳಿಂದ ಪಶ್ಚಿಮ ಬಂಗಾಳದಲ್ಲಿ ವಾಸಿಸುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನ ಪಡೆಯಬಹುದು. ಈ ಯೋಜನೆಯಡಿ, ಭಾರತ ಅಥವಾ ವಿದೇಶಗಳಲ್ಲಿ ಅಧ್ಯಯನ ಮಾಡಬಹುದು.

ಪಶ್ಚಿಮ ಬಂಗಾಳ ವಿದ್ಯಾರ್ಥಿ ಕ್ರೆಡಿಟ್ ಕಾರ್ಡ್ ಮರುಪಾವತಿ ಅವಧಿ

. ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ವಿದ್ಯಾರ್ಥಿಗಳು 40 ವರ್ಷದವರೆಗೆ ತೆಗೆದುಕೊಳ್ಳಬಹುದು 15 ವರ್ಷಗಳ ಅವಧಿಗೆ 10 ಲಕ್ಷ ರೂಪಾಯಿಯವರೆಗೆ ಪಡೆಯಬಹುದು. ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ಕ್ರೆಡಿಟ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಬಹುದು.

Leave a Reply

Your email address will not be published. Required fields are marked *