ಬೆಳೆ ವಿಮೆ ಜಮೆಯಾಗಿಲ್ಲವೇ? ರೈತರೇನು ಮಾಡಬೇಕು? ಇಲ್ಲಿದೆ ಮಾಹಿತಿ

Written by Ramlinganna

Updated on:

What to do whose crop insurance loss ಕಳೆದ ವರ್ಷ ಬೆಳೆ ವಿಮೆ ಮಾಡಿಸಿದ್ದೀರಾ? ಬೆಳೆ ವಿಮೆ ಹಣ ಜಮೆಯಾಗಿಲ್ಲವೇ? ಬೆಳೆ ವಿಮೆ ಏಕೆ ನಿಮಗೇಕೆ ಜಮೆಯಾಗಿಲ್ಲ ನಿಮಗೆ ಗೊತ್ತೇ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಹತ್ವದ ಯೋಜನೆಯಾದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 2020-2021ನೇ ಸಾಲಿನಲ್ಲಿ  ಮುಂಗಾರು  ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿದ ಕೆಲವು ರೈತರ ಬೆಳೆ ವಿಮೆ ಅರ್ಜಿ ತಿರಸ್ಕೃತವಾಗಿದೆ. 2020-21ನೇ ಸಾಲಿನಲ್ಲಿ ವಿಮೆ ಮಾಡಿಸಿದ ರೈತರು ತಮ್ಮ ಅರ್ಜಿಯ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ… ಇಲ್ಲಿದೆ ನೋಡಿ ಮಾಹಿತಿ.

What to do whose crop insurance loss ಅರ್ಜಿಯ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?

2020-21ನೇ ಸಾಲಿನಲ್ಲಿ ಬೆಳೆ ವಿಮೆ ಮಾಡಿಸಿದ ರೈತರು ಅರ್ಜಿಯ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡಲು ಈ

https://www.samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ 2020-21 ಆಯ್ಕೆ ಮಾಡಿಕೊಳ್ಳಬೇಕು. ಋತುವಿನಲ್ಲಿ Kharif  ಆಯ್ಕೆ ಮಾಡಿಕೊಳ್ಳಬೇಕು. ಫಾರ್ಮರ್ಸ್ ಕಾಲಂ ಕೆಳಗಡೆ Check Status ಇಲ್ಲಿ ಮೊಬೈಲ್ ನಂಬರ್ ಆಯ್ಕೆ ಮಾಡಿಕೊಂಡು ಮೊಬೈಲ್ ನಂಬರ್ ಹಾಕಬೇಕು. ನಂತರ ಕ್ಯಾಪ್ಚ್ಯಾ ಕೋಡ್ ಹಾಕಿ Search ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಬಹುದು.

ಬೆಳೆ ವಿಮೆ ತಿರಸ್ಕೃತಗೊಂಡ ಚಿಕ್ಕಮಗಳೂರು ಜಿಲ್ಲೆಯ ರೈತರಿಗೆ ವಿಮಾ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಅವಕಾಶ

ಹೌದು, ಚಿಕ್ಕಮಗಳೂರು ಜಿಲ್ಲೆಯ ತರಿಕೇರೆ ಹಾಗೂ ಅಜ್ಜಂಪುರ ತಾಲೂಕಿನ ರೈತರು ವಿವಿಧ ಬೆಳೆಗಳಿಗೆ ವಿಮಾ ಪರಿಹಾರಕ್ಕಾಗಿ ಬೆಳೆ ವಿಮೆಗೆ ನೋಂದಾಯಿಸಿದವರಲ್ಲಿ ಕೆಲವು ರೈತರ ಅರ್ಜಿ ತಿರಸ್ಕೃತಗೊಂಡಿದೆ.

ಕೇಂದ್ರ, ರಾಜ್ಯ ಸರ್ಕಾರಗಳ ಮಾರ್ಗಸೂಚಿಯಂತೆ ಬೆಳೆವಿಮೆಯಲ್ಲಿ ನೋಂದಾಯಿತ ಬೆಳೆಗೂ ಹಾಗೂ ಮೊಬೈಲ್ ಆಧಾರಿತ ಬೆಳ ಸಮೀಕ್ಷೆ ಆ್ಯಪ್ ನಲ್ಲಿನೋಂದಾಯಿತ ಬೆಳೆಗೂ ತಾಳೆಯಾಗದ ಹಿನ್ನೆಲೆ 97 ಅರ್ಜಿಗಳನ್ನು ತಿರಸ್ಕೃರಿಸಲಾಗಿದೆ. ಈ ಅರ್ಜಿಗಳನ್ನು ಸೂಕ್ತ ದಾಖಲೆಗಳೊಂದಿಗೆ ಮರುಪರಿಶೀಲಿಸಿ, ಅಪ್ ಡೇಟ್ ಮಾಡಿ ದಾಖಲೆಗಳು ಹೊಂದಾಣಿಕೆಯಾಗುವ ಪ್ರಕರಣಗಳನ್ನು ಮತ್ತೊಮ್ಮೆ ಅಂಗೀಕರಿಸುವ ಅವಕಾಶ ಇರುತ್ತದೆ ಎಂದು  ತರಿಕೇರಿ ತಾಲೂಕು ಸಹಾಯಕ ಕೃಷಿ ನಿರ್ದೇಶಕ ಎಸ್.ಟಿ. ರಮೇಶ ತಿಳಿಸಿದ್ದಾರೆ.

ತಾಲೂಕಿನ 97 ತಿರಸ್ಕೃತ ರೈತರ ಪಟ್ಟಿ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರ, ಸಂಬಂಧಿಸಿದ ಗ್ರಾಪಂಗಳಲ್ಲಿ ಪ್ರದರ್ಶಿಸಲಾಗಿದೆ. ವಿಮಾ ಅರ್ಜಿ ತಿರಸ್ಕೃತಗೊಳ್ಳಲು ಕಾರಣ, ವಿಮೆ ಮಾಡಿಸಿದ ಬೆಳೆಗೂ ಹಾಗೂ ಬೆಳೆ ಸಮೀಕ್ಷೆಯಲ್ಲಿ ನಮೂದಿಸಲಾಗಿರುವ  ಬೆಳೆಗೂ ವ್ಯತ್ಯಾಸ ಕಂಡುಬಂದಲ್ಲಿ ಅಂತಹ ಪ್ರಕರಣಗಳನ್ನು ತಿರಸ್ಕರಿಸಲಾಗಿರುತ್ತದೆ.

ರೇತರೇನು ಮಾಡಬೇಕು?

ತಿರಸ್ಕೃತಪಟ್ಟಿಯಲ್ಲಿರುವ ರೈತರು ವಿಮೆ ಮಾಡಿಸಿರುವ ಬೆಳೆಯನ್ನೇ ಬೆಳೆದಿರುವ ಬಗ್ಗೆ ಸೂಕ್ತ ದಾಖಲೆಗಳನ್ನು ಡಿಸೆಂಬರ್ 26 ರೊಳಗೆ ಆಯಾ ರೈತ ಸಂಪರ್ಕ ಕೇಂದ್ರಗಳ ಕೃಷಿ ಅಧಿಕಾರಿಗಳಇಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರ, ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ತರಿಕೇರಿಗೆ ಸಂಪರ್ಕಿಸಬಹುದು.

ಇದನ್ನೂ ಓದಿ : ನಿಮ್ಮ ಸರ್ವೆ ನಂಬರ್ ಅಕ್ಕಪಕ್ಕದ ಯಾವ ಮಾಲಿಕರಿಗೆ ಎಷ್ಟು ಜಮೀನಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಬೆಳೆ ವಿಮೆ ಮಾಡಿಸಿ ಅರ್ಜಿ ತಿರಸ್ಕೃತಗೊಂಡ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರೈತರಿಂದಲೂ ಅರ್ಜಿ ಆಹ್ವಾನಿಸಲಾಗಿದೆ. ರೈತರು ಆಯಾ ರೈತ ಸಂಪರ್ಕ ಕೇಂದ್ರಗಳಲ್ಲಿ ಡಿಸೆಂಬರ್ 15 ರೊಳಗೆ ಆಕ್ಷೇಪಣೆ ಸಲ್ಲಿಸಲು ಕೋರಲಾಗಿದೆ.

ಬೆಳೆ ವಿಮೆ ಮಾಡಿಸಿದ ಕೊಪ್ಪಳ ಜಿಲ್ಲೆಯ ರೈತರಿಗೂ ಅರ್ಜಿ ಸಲ್ಲಿಸಲು ಅವಕಾಶ

2020-21ನೇ ಸಾಲಿನ ಫಸಲ್ ಬಿಮಾ ಯೋಜನೆಯಡಿ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಸಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕ ರು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ 2020-21ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಯಲ್ಲಿ ಬೆಳೆ ವಿಮೆ ನೋಂದಾಯಿತ ಅರ್ಜಿಯೊಂದಿಗೆ ತಾಳೆಯಾಗದೆ ಇರುವ ಪ್ರಸ್ತಾವನೆಗಳನ್ನು ಸಂಬಂಧಪಟ್ಟ ತಾಲೂಕು (ಕೃಷಿ, ತೋಟಗಾರಿಕೆ, ಬ್ಯಾಂಕ್) ಮಟ್ಟದ ಅಧಿಕಾರಿಗಳಿಗೆ ಪರಿಶೀಲಿಸಲು ಸಂರಕ್ಷಣೆ ತಂತ್ರಾಂಶದ ಮೂಲಕ ಕಳುಹಿಸಲಾಗಿತ್ತು.

ತಾಲೂಕು ಮಟ್ಟದ ಅಧಿಕಾರಿಗಳು ಪ್ರಸ್ತಾವನೆಗಳನ್ನು ಪರಿಶೀಲಿಸಿ ಸಂಬಂಧಪಟ್ಟ ವಿಮಾ ಸಂಸ್ಥೆಯವರಿಗೆ ವರ್ಗಾಯಿಸಿ, ಅಂತಿಮವಾಗಿ ವಿಮಾ ಸಂಸ್ಥೆಯವರು ಪ್ರಸ್ತಾವನೆಗಳನ್ನು ಒಪ್ಪಿಗೆ ಅಥವಾ ತಿರಸ್ಕೃತ ಮಾಡಿರುತ್ತಾರೆ.

ರೈತರು ಡಿಸೆಂಬರ್ 20 ರೊಳಗಾಗಿ ತಮ್ಮ ಆಕ್ಷೇಪಣೆಯನ್ನು ರೈತ ಸಂಪರ್ಕ ಕೇಂದ್ರಗಳಿಗೆ ಅಥವಾ ಸಹಾಯಕ ಕೃಷಿ ನಿರ್ದೇಶಕರು, ಕೊಪ್ಪಳ ಕಚೇರಿಗೆ ಸಲ್ಲಿಸಬಹುದು.

Leave a Comment