ಪಿಎಂ ಕಿಸಾನ್ ಯೋಜನೆಯ 14ನೇ ಕಂತು ಈ ದಿನ ರೈತರ ಖಾತೆಗೆ ಜಮೆ

Written by Ramlinganna

Published on:

ಪಿಎಂ ಕಿಸಾನ್ ಯೋಜನೆಯ 14 ನೇ ಕಂತಿನ ಹಣ ಯಾವ ತಿಂಗಳಲ್ಲಿ ಜಮೆಯಾಗುತ್ತದೆ ಹಾಗೂ ಲಿಸ್ಟ್ ನಲ್ಲಿ ಯಾವ ಯಾವ ರೈತರಿದ್ದಾರೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ಪಿಎಂ ಕಿಸಾನ್ ಯೋಜನೆಯ 14 ನೇ ಕಂತಿನ ಹಣ ಮೇ ಅಂತ್ಯ ಅಥವಾ ಜೂನ್ ಮೊದಲ ವಾರದಲ್ಲಿ ಜಮೆಯಾಗುವ ಸಾಧ್ಯತೆಯಿದೆ.  ಏಕೆಂದರೆ ಪಿಎಂ ಕಿಸಾನ್ ಯೋಜನೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಜಮೆಯಾಗುತ್ತದೆ. ಫೆಬ್ರವರಿ ತಿಂಗಳಲ್ಲಿ 13ನೇ ಕಂತು ರೈತರ ಖಾತೆಗೆ ಜಮೆ ಮಾಡಲಾಗಿತ್ತು. ಈ ಆಧಾರದ ಮೇಲೆ ಪಿಎಂ ಕಿಸಾನ್ ಯೋಜನೆಯ 14ನೇ ಕಂತು ಜೂನ್ ತಿಂಗಳಲ್ಲಿ ಜಮೆಯಾಗುತ್ತದೆ. ಆದರೆ ಜೂನ್ ತಿಂಗಳಿಂದ ಮುಂಗಾರು ಹಂಗಾಮು ಆರಂಭವಾಗುತ್ತದೆ.

ಆ ಸಂದರ್ಭದಲ್ಲಿ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಇನ್ನಿತರ ವ್ಯವಸಾಯಕ್ಕೆ ಸಂಬಂಧಿಸಿದ ಉಪಕರಣಗಳನ್ನು ಖರೀದಿ ಮಾಡಬೇಕಾಗಿರುತ್ತದೆ. ಹಾಗಾಗಿ ರೈತರಿಗೆ ಅನುಕೂಲವಾಗಲೆಂದು ಪಿಎಂ ಕಿಸಾನ್ ಯೋಜನೆಯ 14ನೇ ಕಂತು ಮೇ ತಿಂಗಳ ಅಂತ್ಯದಲ್ಲಿ ಜಮೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಯಾವ ಯಾವ ತಿಂಗಳಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗುತ್ತದೆ?

ಪಿಎಂ ಕಿಸಾನ್ ಯೋಜನೆಯ ಒಂದನೇ ಕಂತು ಏಪ್ರೀಲ್ – ಜುಲೈ ತಿಂಗಳ ಮಧ್ಯದಲ್ಲಿ ಯಾವುದೇ ದಿನ ರೈತರ ಖಾತೆಗೆ ಜಮೆಮಾಡಬಹುದು. ಅದೇ ರೀತಿ ಎರಡನೇ ಕಂತು ಆಗಸ್ಟ್ – ನವೆಂಬರ್ ತಿಂಗಳ ಮದ್ಯದಲ್ಲಿ ರೈತರ ಖಾತೆಗೆ ನೇರವಾಗಿ ಬಿಡುಗಡೆ ಮಾಡಲಾಗುವುದು. ಅದೇ ರೀತಿ ಮೂರನೇ ಕಂತು ಡಿಸೆಂಬರ್ – ಮಾರ್ಚ್ ತಿಂಗಳ ಅವಧಿಯಲ್ಲಿ ಜಮೆ ಮಾಡಲಾಗುವುದು.

ಇದನ್ನೂ ಓದಿನೀವು ನಿಂತಿರುವ ಜಮೀನು ಯಾರ ಹೆಸರಿಗಿದೆ? ಸರ್ವೆ ನಂಬರ್ ಏನಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ರೈತರ ಖಾತೆಗೆ ಪ್ರತಿ ವರ್ಷ ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿಯಂತೆ ಒಟ್ಟು ಮೂರು ಕಂತುಗಳಲ್ಲಿ ಜಮೆ ಮಾಡಲಾಗುವುದು. ಪಿಎಂ ಕಿಸಾನ್ ಯೋಜನೆಯ ಆರಂಭವಾದಾಗಿನಿಂದ ಇಲ್ಲಿಯವರೆಗೆ ಒಟ್ಟು 13 ಕಂತುಗಳು ರೈತರ ಖಾತೆಗೆ ಜಮೆ ಮಾಡಲಾಗಿದೆ. ಪಿಎಂ ಕಿಸಾನ್ ಯೋಜನೆಯನ್ನು ರೈತರಿಗೆ ಆರ್ಥಿಕವಾಗಿ ಸಹಾಯವಾಗಲೆಂದು ಆರಂಭಿಸಲಾಗಿದೆ.

ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡಲು

https://pmkisan.gov.in/

ಈ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ಓಪನ್ ಆಗುತ್ತದೆ. ಅಲ್ಲಿ ರೈತರು Beneficairy status ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಆಗುವ ಪೇಜ್ ನಲ್ಲಿ ನಿಮ್ಮ ಮೊಬೇಲ್ ನಂಬರ್ ಹಾಗೂ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಪಿಎಂ ಕಿಸಾನ್ ಅಕೌಂಟ್ ಆ್ಯಕ್ಟಿವ್ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು. ನಿಮಗೆ ಇಲ್ಲಿಯವರೆಗೆ ಜಮೆಯಾದ ಕಂತಿನ ಸ್ಟೇಟಸ್ ಸಹ ಚೆಕ್ ಮಾಡಿಕೊಳ್ಳಬಹುದು.

ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಕಡ್ಡಾಯ

ಪಿಎಂ ಕಿಸಾನ್ ಯೋಜನೆ ಸೌಲಭ್ಯ ಪಡೆಯಲು ರೈತರಿಗೆ ಇಕೆವೈಸಿ ಕಡ್ಡಾಯಗೊಳಿಸಲಾಗಿದೆ. ನೀವು ಇಕೆವೈಸಿ ಮಾಡಿಸಿದ್ದೀರೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಪಿುಎಂ ಕಿಸಾನ್ ಯೋಜನೆಯ ಮುಖಪಟದಲ್ಲಿ ಕಾಣುವ e KYC ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ನಂಬರ್ ಹಾಕಿ ಇಕೆವೈಸಿ ಯಶಸ್ವಿಯಾಗಿದೆಯೋ ಇಲ್ಲವೋ  ಚೆಕ್ ಮಾಡಿಕೊಳ್ಳಬಹುದು. ಇಲ್ಲದಿದ್ದರೆ ನಿಮ್ಮ ಹತ್ತಿರದ ಸಿಎಸ್.ಸಿ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಆಧಾರಿತ ಇಕೆವೈಸಿ ಮಾಡಿಸಿಕೊಳ್ಳಬಹುದು.

Leave a comment