ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಯಾವ ರೈತರ ಹೆಸರು ತೆಗೆಯಲಾಗಿದೆ ಹಾಗೂ ಯಾರ ಹೆಸರನ್ನು ಸೇರಿಸಲಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಫಲಾನುಭವಿಗಳ ಪಟ್ಟಿಯಿಂದ ಕೆಲವು ರೈತರ ಹೆಸರನ್ನು ಕೈಬಿಡಲಾಗಿದೆ. ಇನ್ನೂಕೆಲವು ರೈತರ ಹೆಸರನ್ನು ಸೇರ್ಪಡೆ ಮಾಡಲಾಗಿದೆ. ಏಕೆಂದರೆ ಪಿಎಂ ಕಿಸಾನ್ ಯೋಜನೆಗೆ ಅರ್ಹತೆ ಇಲ್ಲದ ರೈತರ ಹೆಸರನ್ನೂ ಸೇರಿಸಿದ್ದರಿಂದ ಈಗ ಮುಂಬರುವ ಕಂತಿನಲ್ಲಿ ನಿಜವಾದ ಫಲಾನುಭವಿಗಳಿಗೆ ಹಣ ಜಮೆ ಮಾಡಲಾಗುವುದು.
ನಿಜವಾದ ಫಲಾನುಭವಿಗಳನ್ನು ಗುರುತಿಸಲು ಸರ್ಕಾರವು ಇಕೆವೈಸಿ ಕಡ್ಡಾಯಗೊಳಿಸಿದೆ. ಇಕೆವೈಸಿ ಮಾಡಿಸಿದ ರೈತರಿಗೆ ಮಾತ್ರ ಪಿಎಂ ಕಿಸಾನ್ ಯೋಜನೆಯ ಹಣ ಜಮೆ ಮಾಡಲಾಗುವುದು. ಇದರೊಂದಿಗೆ ಇಕೆವೈಸಿ ಮಾಡಿಸಿದ ನಂತರ ಅವರು ಪಿಎಂ ಕಿಸಾನ್ ಯೋಜನೆಯ ಅರ್ಹತೆ ಪಡೆದಿದ್ದಾರೋ ಇಲ್ಲವೋ ಎಂಬುದನ್ನು ಚೆಕ್ ಮಾಡಲಾಗುವುದು. ಈಗ ಪಿಎಂ ಕಿಸಾನ್ ಯೋಜನೆಗೆ ಯಾರು ಅರ್ಹರು? ಯಾರು ಅನರ್ಹರು ಎಂಬ ಪಟ್ಟಿಯನ್ನು ತಯಾರಿಸಲಾಗಿದೆ.
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ನಿಮ್ಮ ಹೆಸರು ಕೈಬಿಡಲಾಗಿದೆಯೇ?
ರೈತರು ಪಿಎಂ ಕಿಸಾನ್ ಯೋಜನೆಯ 13 ನೇ ಕಂತಿನ ಫಲಾನುಭವಿಗಳ ಪಟ್ಟಿಯಿಂದ ತಮ್ಮ ಹೆಸರು ತೆಗೆಯಲಾಗಿದಿಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://pmkisan.gov.in/PanchayatDashboard_Portal.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಗ್ರಾಮ ಪಂಚಾಯತ್ ಡ್ಯಾಶಬೋರ್ಡ್ ಓಪನ್ ಆಗುತ್ತದೆ. ಅದರ ಕೆಳಗಡೆ ವಿಲೇಜ್ ಡ್ಯಾಶಬೋರ್ಡ್ ಕಾಣಿಸುತ್ತದೆ. ಅಲ್ಲಿ ರೈತರು ಕರ್ನಾಟಕ ಆಯ್ಕೆ ಮಾಡಿಕೊಳ್ಳಬೇಕು. ರೈತರು ಯಾವ ಜಿಲ್ಲೆಗೆ ಸಂಬಂಧಿಸಿದ್ದಾರೋ ಆ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿ ಗ್ರಾಮ ಪಂಚಾಯತ್ ಆಯ್ಕೆ ಮಾಡಿಕೊಳ್ಳಬೇಕು.ಇದಾದಮೇಲೆ ರೈತರು Submit ಮೇಲೆ ಕ್ಲಿಕ್ ಮಾಡಬೇಕು.
ಆಗ ಇನ್ನೊಂದು ಪೇಜ್ ತೆರದುಕೊಳ್ಳುತ್ತದೆ. ಅಲ್ಲಿ ನಿಮಗೆ ಸಮ್ಮರಿ, ಪೇಮೆಂಟ್ ಸ್ಟೇಟಸ್, ಆಧಾರ್ ಅಥೆಂಟಿಕೇಶನ್ ಸ್ಟೇಟಸ್ ಹಾಗೂ ಆನ್ಲೈನ್ ರೆಜಿಸ್ಟ್ರೇಶನ್ ಸ್ಟೇಟಸ್ ಹೀಗೆ ನಾಲ್ಕು ಆಯ್ಕೆಗಳು ಕಂಡುಬರುತ್ತದೆ. ಅದರಲ್ಲಿ ಆಧಾರ್ ಅಥೆಂಟಿಕೇಶನ್ ಸ್ಟೇಟಸ್ ಮೇಲೆ ಕ್ಲಿಕ್ ಮಾಬೇಕು. ನಂತರ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅದರ ಕೆಳಗಡೆ ಕಾಣುವ ಆಯ್ಕೆಗಳಲ್ಲಿ Total Ineligible ಕೆಳಗಡೆ ಕಾಣುವ ಹೆಸರುಗಳನ್ನೆಲ್ಲಾ ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಪಟ್ಟಿಯಿಂದ ತೆಗೆಯಲಾಗಿದೆ.
ಕೆಲವು ರೈತರ ಹೆಸರನ್ನೇಕೆ ತೆಗೆಯಲಾಗಿದೆ?
ಪಿಎಂ ಕಿಸಾನ್ ಯೋಜನೆಗೆ ಈ ಪಟ್ಟಿಯಲ್ಲಿರುವ ರೈತರು ಅನರ್ಹರಾಗಿರುತ್ತಾರೆ. ಏಕೆಂದರೆ ಇವರ ಕುಟುಂಬದಲ್ಲಿ ಸರ್ಕಾರಿ ನೌಕರರಿರಬಹುದು. ಅಥವಾ ಸರ್ಕಾರಕ್ಕೆ ತೆರಿಗೆ ಪಾವತಿಸುವವರಾಗಿರಬಹುದು. 10 ಸಾವಿರಕ್ಕೂ ಹೆಚ್ ಪೆನ್ಶನ್ ಪಡೆಯುತ್ತಿರಬಹುದು. ನೋಂದಣಿ ಪ್ರಕ್ರಿಯೆಯಲ್ಲಿ ದಾಖಲೆ ಸರಿ ಇರದೆ ಇರಬಹುದು. ಅಥವಾ ಆಧಾರ್ ಕಾರ್ಡ್, ಪಹಣಿ ಹಾಗೂ ಬ್ಯಾಂಕ್ ಪಾಸ್ ಬುಕ್ ನಲ್ಲಿಹೆಸರು ಹೊಂದಾಣಿಕೆ ಆಗದೆ ಇರಬಹುದು. ಅಥವಾ ಇಕೆವೈಸಿ ಮಾಡಿಸದೆ ಇರಬಹುದು. ಸೂಕ್ತ ದಾಖಲೆ ಸಲ್ಲಿಸದ ಕಾರಣ ಇವರ ಹೆಸರನ್ನುಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಪಟ್ಟಿಯಿಂದ ಕೈಬಿಡಲಾಗಿದೆ.
ಇದನ್ನೂ ಓದಿ : ಒಂದೇ ನಿಮಿಷದಲ್ಲಿ ನಿಮ್ಮ ಜಮೀನಿನ ಮ್ಯಾಪ್ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿ: ಇಲ್ಲಿದೆ ಮಾಹಿತಿ
ಇಕೆವೈಸಿ ಮಾಡಿಸದೆ ಇರುವ ಕೆಲವು ರೈತರಿಗೆ ಪಿಎಂ ಕಿಸಾನ್ ಯೋಜನೆಯ 12ನೇ ಕಂತಿನ ಹಣ ಜಮೆಯಾಗಿದೆ. ಆದರೆ 13ನೇ ಕಂತಿನ ಹಣ ಜಮೆಯಾಗುವ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ. ಹಾಗಾಗಿ ಯಾರು ಇಕೆವೈಸಿ ಮಾಡಿಸಿಲ್ಲವೋ ಅಂತಹ ರೈತರು ಕೂಡಲೇ ಗ್ರಾಮ ಒನ್, ಸಿ.ಎಸ್.ಸಿ ಕೇಂದ್ರಗಳಲ್ಲಿ ಕೂಡಲೇ ಬಯೋಮೆಟ್ರಿಕ್ ಆಧಾರಿತ ಇಕೆವೈಸಿ ಮಾಡಿಸಿಕೊಂಡು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಿ ಸರ್ಕಾರದ ಸೌಲಭ್ಯ ಪಡೆಯಬಹುದು.