ಪಿಎಂ ಕಿಸಾನ್ ಹಣ ನಿಮಗೆ ಜಮೆಯಾಗುತ್ತೋ ಇಲ್ಲೋ? ಇಲ್ಲೇ ಚೆಕ್ ಮಾಡಿ

Written by Ramlinganna

Updated on:

who will get pm kisan money ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತು ಅಂದರೆ 19ನೇ ಕಂತು ನಿಮ್ಮ ಖಾತೆಗೆ ಜಮೆಯಾಗುತ್ತೋ ಇಲ್ಲವೋ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ದಿನದಿಂದ ದಿನಕ್ಕೆ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಯೋಜನೆಯ ಕಂತು ಜಮೆ ಮಾಡುತ್ತಿಲ್ಲ. ಒಬ್ಬೊಬ್ಬ ರೈತರಿಗೆ ಒಂದೊಂದು ಕಾರಣಗಳನ್ನು ನೀಡಿ ಪಿಎಂ ಕಿಸಾನ್ ಯೋಜನೆಯ ಕಂತಿನ ಹಣ ತಡೆಹಿಡಿಯಲಾಗುತ್ತಿದೆ. ಆದರೆ ಬಹುತೇಕ ರೈತರಿಗೆ ಯಾವ ಕಾರಣಕ್ಕಾಗಿ ತಮ್ಮ ಪಿಎಂ ಕಿಸಾನ್ ಹಣ ತಡೆಹಿಡಿಯಲಾಗುತ್ತಿದೆ ಎಂಬುದು ಗೊತ್ತಾಗುತ್ತಿಲ್ಲ.

ಪಿಎಂ ಕಿಸಾನ್ ಯೋಜನೆಯ ಉಚಿತ ಸಹಾಯವಾಣಿ ನಂಬರಿಗೆ ಕರೆ ಮಾಡಿದರೆ ಸ್ವೀಕರಿಸುವುದಿಲ್ಲ. ರೈತ ಸಂಪರ್ಕ ಕೇಂದ್ರ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳಿಗೂ ಕರೆ ಮಾಡಿದರೂ ಯಾವ ಕಾರಣಕ್ಕಾಗಿ ತಡೆಹಿಡಿಯಲಾಗಿದೆ ಎಂಬುದರ ಕುರಿತು ಮಾಹಿತಿ ಹೇಳುತ್ತಿಲ್ಲವೆಂದು ಹಲವಾರು ರೈತರ ಆಕ್ರೋಶವಾಗಿದೆ.

ಯಾವ ಕಾರಣಕ್ಕಾಗಿ ಪಿಎಂ ಕಿಸಾನ್ ಹಣ ತಡೆಹಿಡಿಯಲಾಗಿದೆ ಎಂಬುದರ ಕುರಿತು ಗೊತ್ತಾದರೆ ಸಂಬಂಧಿಸಿದ ದಾಖಲೆಯಾಗಲಿ ಅಥವಾ ಇನ್ನ್ಯಾವ ಕಾರಣ ಹೇಳಿದರೆ ಅದಕ್ಕೆ ಸರಿಪಡಿಸಬಹುದು ಎಂದು ರೈತರು ಕರೆ ಮಾಡಿ  ಮನವಿ ಮಾಡುತ್ತಿದ್ದಾರೆ.

who will get pm kisan money ಪಿಎಂ ಕಿಸಾನ್ ಹಣ ನಿಮಗೆ ಜಮೆಯಾಗುತ್ತೋ ಇಲ್ಲವೋ ಹೀಗೆ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ ಎಷ್ಟು ಕಂತುಗಳು ನಿಮಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://pmkisan.gov.in/BeneficiaryStatus_New.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ನಮೂದಿಸಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.  ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ಸಂಖ್ಯೆಯನ್ನು ನಮೂದಿಸಿ ನೀವು ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡಬಹುದು.

ನಿಮಗೆ ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ಗೊತ್ತಿಲ್ಲದಿದ್ದರೆ ನೀವು ಈ

https://pmkisan.gov.in/KnowYour_Registration.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಮೊಬೈಲ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.  ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿ ಗೆಟ್ ಡಿಟೇಲ್ಸ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಯೋಜನೆಯ ನೋಂದಣಿ ಸಂಖ್ಯೆ ಕಾಣಿಸುತ್ತದೆ. ನಿಮ್ಮ ಹೆಸರು ಕಾಣಿಸುತ್ತದೆ. ನಿಮ್ಮ ನೋಂದಣಿ ಸಂಖ್ಯೆ ಬರೆದಿಟ್ಟುಕೊಳ್ಳಬೇಕು.ಅಥವಾ ಕಾಪಿ ಮಾಡಿಕೊಳ್ಳಬೇಕು. ನಂತರ ಬ್ಯಾಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು Know your status ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮ ನೋಂದಣಿ ಸಂಖ್ಯೆ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿ ಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅದೇ ನಿಮ್ಮ ಸ್ಟೇಟಸ್ ಪೇಜ್ ಆಗಿರುತ್ತದೆ.

ಇದನ್ನೂ ಓದಿ ನಿಮ್ಮ ಜಮೀನಿನ ಹಳೆಯ ಪಹಣಿಗಳನ್ನು (ಉತಾರ) ಒಂದೇ ನಿಮಿಷದಲ್ಲಿ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿ

ಎಲ್ಲಾ ಮಾಹಿತಿ ಸರಿಯಿದ್ದರೂ ಈ ದಾಖಲೆ ಪರಿಶೀಲಿಸಿ

ಮೇಲಿನ ಎಲ್ಲಾ  ಮಾಹಿತಿಗಳು ಸರಿಯಿದ್ದರೂ ಸಹ ನಿಮಗೆ ಜಮೆಯಾಗುತ್ತಿಲ್ಲವಾದರೆ ನಿಮ್ಮ ಬ್ಯಾಂಕ್ ಅಕೌಂಟ್ ಪಾಸ್ ಬುಕ್, ಆಧಾರ್ ಕಾರ್ಡ್ ಹಾಗೂ ಜಮೀನಿನ ಪಹಣಿಗಳಲ್ಲಿ ಹೆಸರು ಒಂದೇ ಆಗಿದ್ದೆಯೋ ಅಥವಾ ಒಂದು ದಾಖಲೆಯಲ್ಲಿ ಇನ್ನೊಂದು ದಾಖಲೆಗೆ ಹೋಲಿಕೆಯಾಗುತ್ತಿಲ್ಲವೆೋ ಅಂದರೆ ನಿಮ್ಮ ಹೆಸರು, ತಂದೆಯ ಹೆಸರು ಹಾಗೂ ಸರ್ ನೇಮ್ ನಲ್ಲಿ ವ್ಯತ್ಯಾಸವಿದ್ದರೆ ನಿಮಗೆ ಪಿಎಂ ಕಿಸಾನ್ ಹಣ ತಡೆಹಿಡಿಯಲಾಗುವುದು.  ಎಲ್ಲಾ ದಾಖಲೆಗಳಲ್ಲಿ ಹೆಸರು ಒಂದೇ ರೀತಿಯಾಗಿದ್ದರೂ ಮಾಹಿತಿ ಸರಿಯಿದ್ದರೂ ಪಿಎಂ ಕಿಸಾನ್ ಹಣ ತಡೆಹಿಡಿಯಲಾಗಿದ್ದರೆ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಇಲಾಖೆಗೆ ಸಂಪರ್ಕಿಸಿ ವಿಚಾರಿಸಬಹುದು.

Leave a Comment